ಪ್ರಚಲಿತ

ಖಾಸಗಿ ವಲಯದ ಹೊರೆ ಇಳಿಸಿದ ಸರ್ಕಾರ! ಖಾಸಗಿ ಬಸ್ ಮಾಲಕರ ಬೇಡಿಕೆಗೆ ಡಿಸಿಎಂ ಅಸ್ತು… ಹೊಸ ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ ಗೊತ್ತಾ.?

ಮಹಾವೈರಸ್ ಕೊರೊನಾದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು 2 ತಿಂಗಳುಗಳಿಂದ ರಸ್ತೆ ಸಾರಿಗೆ ಸಂಚಾರವೂ ಸಂಪೂರ್ಣ ಸ್ತಬ್ಧವಾಗಿತ್ತು. ಸಿಎಂ ಯಡಿಯೂರಪ್ಪನವರು ಲಾಕ್‍ಡೌನ್ 4 ನೇ ಹಂತದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು ಇಂದಿನಿಂದ ನಿಯಮ ಹಾಗೂ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಷರತ್ತಿನ ಮೇಲೆ ಖಾಸಗಿ ಬಸ್ ಸಂಚಾರಕ್ಕೂ ಅನುಮತಿಯನ್ನು ನೀಡಲಾಗಿದೆ.

ಕಂಟೈನ್ಮೆಂಟ್ ವಲಯಗಳನ್ನು ಹೊರತು ಪಡಿಸಿ, ಅಂತರರಾಜ್ಯ ಸಾರಿಗೆ ವ್ಯವಸ್ಥೆಯನ್ನು ಹೊರತುಪಡಿಸಿದಂತೆ ಬೆಳಿಗ್ಗೆ 7 ರಿಂದ ರಾತ್ರಿ 7 ಗಂಟೆಯವರೆಗೆ ಬಸ್ಸು ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ರಾತ್ರಿ ವೇಳೆ ಯಾವುದೇ ರೀತಿಯ ಬಸ್ ಸಂಚಾರ ವ್ಯವಸ್ಥೆಯೂ ಇಲ್ಲ. ಒಂದು ಬಸ್ಸಿನಲ್ಲಿ ಕೇವಲ ಮೂವತ್ತು ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಸು ನಿಲ್ದಾಣಗಳಲ್ಲಿಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮಾರ್ಕಿಂಗ್ ಮಾಡಲಾಗುತ್ತದೆ. ಅದೇ ರೀತಿ ಬಸ್ಸ್‍ನಲ್ಲಿಯೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಸುರಕ್ಷತಾ ಕ್ರಮವಾಗಿ ಎಲ್ಲಾ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್­ಗೆ ಒಳಪಡಿಸುವುದು, ಚಾಲಕ, ನಿರ್ವಾಹಕರಿಗೆ ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್­ಗಳನ್ನೂ ನೀಡಲಾಗುತ್ತದೆ. ಆದಿತ್ಯವಾರ ಸಂಪೂರ್ಣವಾಗಿ ಲಾಕ್‍ಡೌನ್ ಆಗಲಿದ್ದು ಯಾವ ವಹಿವಾಟಿಗೂ ಅವಕಾಶವಿಲ್ಲ.

ಖಾಸಗಿ ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಡಿಸಿಎಂ!

ಲಾಕ್‍ಡೌನ್‍ನಿಂದಾಗಿ ಕಳೆದ 2 ತಿಂಗಳಿಂದ ಬಸ್‍ಗಳ ಓಡಾಟ ಸ್ಥಗಿತವಾಗಿದ್ದರಿಂದ ತೆರಿಗೆ ವಿನಾಯಿಗೆ ಖಾಸಗಿ ಬಸ್‍ಗಳ ಮಾಲೀಕರು ಬೇಡಿಕೆಯಿಟ್ಟಿದ್ದರು. ಖಾಸಗಿ ಬಸ್‍ಗಳ ಮಾಲಿಕರ ತೆರಿಗೆ ವಿನಾಯಿತಿ ಮನವಿ ಕುರಿತು ಸಿಎಂ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಆದಷ್ಟು ಬೇಗ ಬೇಡಿಕೆಗೆ ಪೂರಕವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಭರವಸೆ ನೀಡಿದ್ದರು. ಅದೇ ರೀತಿ ಈಗ ಭರವಸೆಯನ್ನು ಈಡೇರಿಸಿದ್ದು ಲಾಕ್‍ಡೌನ್ ಹಿನ್ನೆಲೆಯಲ್ಲಿ ಟೆಂಪೆÇೀ, ಟ್ಯಾಕ್ಸಿ, ಖಾಸಗಿ ಬಸ್ ಮೇಲಿನ ತೆರಿಗೆಯನ್ನು ಕಟ್ಟೋದಕ್ಕೆ 2 ತಿಂಗಳ ವಿನಾಯಿತಿ ನೀಡಲಾಗಿದೆ ಎಂದು ಲಕ್ಷ್ಮಣ್ ಸವದಿಯವರು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯಮ ಮಾರ್ಗಸೂಚಿಗಳನ್ನು ಪಾಲನೆ ಮಾಡಿ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ಆ ಮೂಲಕ ಕೋವಿಡ್-19 ರೋಗವನ್ನು ತಡೆಗಟ್ಟಲು ಎಲ್ಲರೂ ಸಹಕರಿಸಿ. ಪ್ರಯಾಣಿಕರು ಕೂಡ ಬಸ್ಸುಗಳಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಈ ಮುಂತಾದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಸಹಕಾರ ನೀಡಿ. ಲಾಕ್‍ಡೌನ್ ಸಡಿಲಗೊಂಡರೂ ನಿರ್ಲಕ್ಷ್ಯ ಬೇಡ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ. ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಜಯಶಾಲಿಯಾಗೋಣ…

Tags

Related Articles

FOR DAILY ALERTS
Close