ಪ್ರಚಲಿತ

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು: ನಿರಂತರ ಹೋರಾಟಕ್ಕೆ ಕೊನೆಗೂ ಜಯ… ದೇಶದೆಲ್ಲೆಡೆ ಸಂಭ್ರಮ…

23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ಡಿಸೆಂಬರ್ 16, 2012ರಂದು ಬಾಲಾಪರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ ಕೊಲೆಗೈದು ವಿಕೃತಿ ಮೆರೆದಿದ್ದರು. ಅದರಲ್ಲಿ ಒಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಮತ್ತೊಬ್ಬನನ್ನು ಬಾಲಾಪರಾಧಿ ಎಂದು ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಯಿತು. 2012 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುವ ಬಸ್ ನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾಗಿದ್ದ ಅತ್ಯಾಚಾರಿಗಳಾದ ಮುಕೇಶ್ ಕುಮಾರ್ ಸಿಂಗ್, ಪವನ್ ಕುಮಾರ್ ಗುಪ್ತ, ವಿನಯ್ ಕುಮಾರ್ ಶರ್ಮ ಮತ್ತು ಅಕ್ಷಯ್ ಕುಮಾರ್ ಸಿಂಗ್ ಗಲ್ಲಿಗೇರಿಸಲಾಯಿತು. 8 ವರ್ಷಗಳ ಸತತ ಹೋರಾಟದಲ್ಲಿ ಕೊನೆಗೂ ವಿಜಯ ದೊರಕಿದಂತಾಗಿದೆ. ಅತ್ತ ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುತ್ತಿದ್ದಂತೆಯೇ, ಇತ್ತ ಪಾಪಿಗಳ ಸಂಹಾರವಾಯಿತೆಂದು ದೇಶದಾದ್ಯಂತ ಸಂಭ್ರಮವನ್ನು ಆಚರಿಸಲಾಗುತ್ತಿದೆ. ನಿರ್ಭಯಾಳಿಗೆ ನ್ಯಾಯ ಸಿಕ್ಕಿದೆ. ನ್ಯಾಯದಾನ ವಿಳಂಬವಾದರೂ ನ್ಯಾಯ ಸಿಕ್ಕಿದೆ. ನನ್ನ ಮಗಳ ಬಗ್ಗೆ ಹೆಮ್ಮೆ ಇದೆ. ಇಂದು ದೇಶಕ್ಕೆ ನ್ಯಾಯ ಸಿಕ್ಕಿದೆ. ಈ ದಿನವನ್ನು ದೇಶದ ಹೆಣ್ಣುಮಕ್ಕಳಿಗೆ ಆರ್ಪಿಸುವುದಾಗಿ ನಿರ್ಭಯಾ ತಾಯಿ ಆಶಾ ದೇವಿ ಸುದ್ದಿಗಾರರಿಗೆ ತಿಳಿಸಿದರು. ನಿರ್ಭಯಾ ತಂದೆ ಪ್ರತಿಕ್ರಿಯಿಸಿದ್ದು ಅಪರಾಧಿಗಳ ಗಲ್ಲು ಶಿಕ್ಷೆಯ ಕ್ಷಣವನ್ನು ಭಾರತದ ಎಲ್ಲಾ ನಗರ ಪಟ್ಟಣಗಳಲ್ಲಿ ಸಂಭ್ರಮಿಸುತ್ತಿದ್ದಾರೆ. ಗಲ್ಲು ವಿಳಂಬವಾದರೂ ಅಪರಾಧಿಗಳಿಗೆ ಶಿಕ್ಷೆಯಾಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

Related Articles

FOR DAILY ALERTS
Close