ಅಂಕಣದೇಶಪ್ರಚಲಿತ

ಬೆಳಗಾವಿ ವಿಷಯವನ್ನಿಟ್ಟು ರಾಜ್ಯದ ಜನರ ಭಾವನೆ ಕದಡುವಂತೆ ಪಟಾಕಿ ಹಚ್ಚಿದ ಕಾಂಗ್ರೆಸಿನ ಲಕ್ಷ್ಮೀ ಹೆಬ್ಬಾಳ್ಕರ್!

ಸದಾ ಒಂದಲ್ಲಾ ಒಂದು ವಿವಾದಗಳ ಮೂಲಕ ಕರ್ನಾಟಕದ ಕಾಂಗ್ರೆಸಿಗರು ವಿವಾದವನ್ನು ಮೈಗೆಳೆಯುತ್ತಿದ್ದಾರೆ. ಇದೀಗ ಮತ್ತೊಂದು ವಿವಾದವನ್ನು
ಮೈಗೆಳೆದುಕೊಂಡಿದ್ದು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಇದಕ್ಕೆ ಪಕ್ಕಾ ಉದಾಹರಣೆ ಎಂದರೆ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವು ವಿವಾದಾತ್ಮಕ ಹೇಳಿಕೆ. ಈಕೆ ಹೇಳಿದ್ದೇನು ಗೊತ್ತೇ? `ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನು ಜೈ ಮಹಾರಾಷ್ಟ್ರ ಅಂತ ಹೇಳುತ್ತೀನಿ’ ಎಂದು ಹೇಳಿದ್ದಾರೆ.

ಆಗಸ್ಟ್ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಇದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಈಗ ಕರ್ನಾಟಕದಲ್ಲಿ ಇದ್ದೇನೆ. ಆದರೆ ಗಡಿ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿದೆ. ಪ್ರಕರಣ ಮುಗಿದು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು ನಾನೇ ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಅಂತಾ ಹೇಳುವೆ. ಯಾವನಿಗೂ ಈ ರೀತಿ ಹೇಳುವ ಧೈರ್ಯ ಇಲ್ಲ. ಆದರೆ ನನಗೆ ಯಾರ ಭಯವೂ ಇಲ್ಲ. ನಾನು ಯಾರಿಗೂ ಹೆದರುವುದಿಲ್ಲ. ನಾನು ಹೆದರುವುದು ಆ ಭಗವಂತನಿಗೆ ಮತ್ತು ನನ್ನ ತಂದೆ-ತಾಯಿಗೆ ಮಾತ್ರ. ನನಗೆ ಜಾತಿ, ಧರ್ಮ, ವ್ಯಕ್ತಿಯ ಬಗ್ಗೆ ಯಾವುದೇ ನಂಬಿಕೆ ಇಲ್ಲ. ಯಾರಿಂದ ಏನೂ ಆಗಬೇಕಿಲ್ಲ. ನನಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಆಗಬೇಕು ಅಷ್ಟೇ ಎಂದಿದ್ದಾರೆ.

ಇದು ಕಾಂಗ್ರೆಸ್‍ನ ಮೂರ್ಖತನದ ಪರಮಾವಧಿಯ ಪರಾಕಾಷ್ಠೆಗೆ ಒಂದು ಉದಾಹರಣೆಯಾಗಿದೆ. ಮತಕ್ಕಾಗಿ ಇದುವರೆಗೆ ಧರ್ಮವನ್ನು ಒಡೆದುಕೊಂಡು ಬರುತ್ತಿದ್ದ ಕಾಂಗ್ರೆಸ್ ಇಂದು ಕರ್ನಾಟಕದ ಜನರ ಭಾಷಾಭಿಮಾನವನ್ನು ಮುಂದಿಟ್ಟುಕೊಂಡು, ರಾಜ್ಯ ರಾಜ್ಯಗಳ ಮಧ್ಯೆ ವಿಷಬೀಜ ಬಿತ್ತಿ ರಾಜ್ಯವನ್ನೇ ಒಡೆಯುವು ಕೆಲಸ ಮಾಡುತ್ತಿದ್ದಾರೆ.

ಲಕ್ಷ್ಮಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಟ್ವಿಟರ್ ಸೇರಿ ಜಾಲತಾಣಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದೆ. ಕರ್ನಾಟಕದಲ್ಲಿದ್ದು, ಬೆಳಗಾವಿ ಮಹಾರಾಷ್ಟ್ರಕ್ಕೆ
ಸೇರಲಿ ಎಂದು ಹೇಳುವ ಬದಲು ಲಕ್ಷ್ಮಿ ಬೆಳಗಾವಿಗೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೇಳಿಕೆಗೆ ಈಗಾಗಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಜನರೆಲ್ಲಾ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ಇದುವರೆಗೆ ಶಾಂತರೀತಿಯಲ್ಲಿದ್ದು, ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜ್ಯದ ಅಶಾಂತಿಗೆ ಪಟಾಕಿ ಹಚ್ಚುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ಜನರೆಲ್ಲಾ ರಾಜ್ಯದ ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾಟಾಳ್ ನಾಗರಾಜ್ ಕೆಂಡ: ವಾಟಾಳ್ ನಾಗರಾಜ್ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಚಳುವಳಿ ಮಾಡುವ ಎಚ್ಚರಿಕೆ ನೀಡಿದ್ದಾರೆ. ಆಕೆಯ ಹೇಳಿಕೆಯನ್ನು ಖಂಡಿಸಿ ಮಾತಾಡಿದ ಅವರು ಈ ಬಗ್ಗೆ ಲಕ್ಷ್ಮೀ ಸ್ಪಷ್ಟೀಕರಣ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ವಿಷಯದಲ್ಲಿ ಹಲವಾರು ದಶಕಗಳಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಒಂದು ದೇಶದೊಳಗಡೆಯೇ ಭೂಮಿಯ
ವಿಚಾರವಾಗಿ ಜಗಳ ನಡೆಸಿ ಜನರನ್ನು ರಾಜ್ಯರಾಜ್ಯದವರ ಮಧ್ಯೆ ಎತ್ತಿಕಟ್ಟುವ ಕೆಲಸವನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇದೀಗ ಅದೇ ವಿಷಯವನ್ನು
ಮುಂದಿಟ್ಟುಕೊಂಡು ರಾಜ್ಯದ ಜನರ ಭಾವನೆಯ ಜೊತೆ ಆಟವಾಡಲು ಕಾಂಗ್ರೆಸ್ ಮುಂದೆ ಬಂದಿರುವ ಹಿಂದಿನ ಅಜೆಂಡಾವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಾಗಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

Tags

Related Articles

Close