ಪ್ರಚಲಿತ

ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ನಿಂತ ರಾಜ್ಯ ಸರ್ಕಾರ ! 1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ… ಫುಲ್ ಖುಷ್ ಆದ ಕ್ಷೌರಿಕರು, ಆಟೋ ಚಾಲಕರು…

ಕೊರೊನಾ ಮಹಾಮಾರಿ ಇಡೀ ವಿಶ್ವವನ್ನೇ ನಡುಗಿಸಿದ್ದು ಭಾರತವೂ ಅದರಿಂದ ಹೊರತಾಗಿಲ್ಲ. ಭಾರತಕ್ಕೆ ಕೊರೊನಾ ಮಹಾಮಾರಿ ಹೊಕ್ಕರಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರ ಲಾಕ್‍ಡೌನ್ ಎಂಬ ಮಹತ್ವದ ಘೋಷಣೆಯನ್ನು ಮಾಡಿತ್ತು. ಲಾಕ್‍ಡೌನ್ ಮಾಡದೇ ಇರುತ್ತಿದ್ದರೆ ಮಹಾಮಾರಿ ಕೊರೊನಾ ಇಡೀ ದೇಶವನ್ನೇ ಆವರಿಸುತ್ತಿತ್ತು. ಲಾಕ್‍ಡೌನ್‍ನಿಂದಾಗಿ ಒಂದು ಕಡೆಯಲ್ಲಿ ಸಂಕಷ್ಟಕ್ಕೊಳಗಾದರೂ ಅದೆಷ್ಟೋ ಲಕ್ಷಾಂತರ ಜನರ ಪ್ರಾಣವನ್ನು ಉಳಿಸಿದೆ. ಅಲ್ಲದೆ ಈ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅನೇಕ ಸಂಘ ಸಂಸ್ಥೆಗಳು, ಶಾಸಕರು, ಸಚಿವರು ದಿನನಿತ್ಯ ಬಳಕೆಗೆ ಬೇಕಾದ ವಸ್ತುಗಳನ್ನು ನೀಡಿ ಅದೆಷ್ಟೋ ಜನರ ಹಸಿವನ್ನು ನೀಗಿಸಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಣೆಯ ಬಳಿಕ ಇದೀಗ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದ್ದು ಬಿಗ್ ರಿಲೀಫ್ ದೊರಕಿದೆ…

1,610 ಕೋಟಿ ಪ್ಯಾಕೇಜ್ ಘೋಷಣೆ

ಲಾಕ್‍ಡೌನ್‍ನಿಂದ ಸಂಕಷ್ಟಕ್ಕೊಳಗಾಗಿರುವ ಅಗಸರು, ಕ್ಷೌರಿಕರು ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದೆ. ಅಗಸರು ಹಾಗೂ ಕ್ಷೌರಿಕರಿಗೆ ತಲಾ 5 ಸಾವಿರ ರೂ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2 ಲಕ್ಷದ 30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ. ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ಸಿಎಂ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಅತಿ ಸಣ್ಣ ಹಾಗೂ ಮದ್ಯಮ ಉದ್ಯಮಿಗಳ ಕೈಗಾರಿಕೆಗಳ 2 ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಲಾಗುವುದು. ಬೃಹತ್ ಕೈಗಾರಿಕೆಗಳ ವಿದ್ಯುತ್ ಬಿಲ್ ಪಾವತಿಯನ್ನು ಎರಡು ತಿಂಗಳಿಗೆ ಮುಂದೂಡಲಾಗುವುದು. ನಿಗದಿತ ಸಮಯದಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡುವ ಗ್ರಾಹಕರಿಕೆ ಶೇಕಡಾ 1. ರಷ್ಟು ರಿಯಾಯಿತಿ ನೀಡಲಾಗುವುದು. ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗುವುದು, ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ ಜೂನ್ 30 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದಂತೆ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪನವರು ಸೂಚಿಸಿದ್ದಾರೆ.

ಕಟ್ಟಡ ಕಾರ್ಮಿಕರಿಕಗೂ ಬಿಗ್ ಗಿಫ್ಟ್ ಕೊಟ್ಟ ಸಿಎಂ

ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗಿರುತ್ತದೆ. ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮವಹಿಸಲಾಗುವುದು. ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದರು. ತರಕಾರಿ ಹಾಗೂ ಹಣ್ಣು ಬೆಳೆಗಾರರು ಸಂಕಷ್ಟದಲ್ಲಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಲಾಗುವುದು ಎಂದರು. .

ನೇಕಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 54 ಸಾವಿರ ನೇಕಾರರಿಗೆ ವರ್ಷಕ್ಕೆ 2 ಸಾವಿರ ರೂ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಲಾಕ್‍ಡೌನ್ ನಿಂದಾಗಿ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಹೆಕ್ಟೇರ್ ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರ ನೀಡಲಾಗುವುದು. ಇನ್ನು ತರಕಾರಿ ಹಣ್ಣು ಬೆಳೆಗಾಗರರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಬಿಎಸ್‍ವೈ ಭರವಸೆ ನೀಡಿದ್ದಾರೆ. ಅಲ್ಲದೆ ವಲಸೆ ಕಾರ್ಮಿಕರಿಗೆ ರಾಜ್ಯದಲ್ಲೇ ಉದ್ಯೋಗ ಭರವಸೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪನವರು ಈ ಸಂಕಷ್ಟದ ಸಮಯದಲ್ಲಿ ಐತಿಹಾಸಿಕ ನಿರ್ಧಾರವನ್ನು ಘೋಷಿಸಿರುವುದು ಜನರಲ್ಲಿ ಮಂದಹಾಸವನ್ನುಂಟು ಮಾಡಿದೆ.

Tags

Related Articles

FOR DAILY ALERTS
Close