ಪ್ರಚಲಿತ

ಕೇಂದ್ರ ಬಜೆಟ್‍ಗೆ ಜೇಟ್ಲಿ ಮಂತ್ರ !! “ತಾರೀಖ್ ಪರ್ ತಾರೀಖ್”!! ಈ ವರ್ಷದ ಆರ್ಥಿಕ ಸಮೀಕ್ಷಾ ವರದಿಯಲ್ಲೇನಿದೆ ಗೊತ್ತೇ?!

ಹಿಂದುಳಿದ ರಾಷ್ಟ್ರವಾಗಿದ್ದ ಭಾರತದ ನರೇಂದ್ರ ಮೋದಿಯವರ ರಾಜತಾಂತ್ರಿಕ ಯಶಸ್ಸಿನಿಂದಾಗಿ ಇಂದು ವಿಶ್ವದೆಲ್ಲೆಡೆ ಪ್ರಸಿದ್ಧಿಯನ್ನು ಕಾಣುತ್ತಿದ್ದು, ಆರ್ಥಿಕತೆಯಲ್ಲಿಯೂ ತೀರ ಬಡರಾಷ್ಟ್ರವಾಗಿ ಉಳಿದಿದ್ದ ಭಾರತ ಇಂದು ಪ್ರಬಲ ರಾಷ್ಟ್ರವಾಗಿ ಮಾರ್ಪಡುತ್ತಿರುವುದು ಹೆಮ್ಮೆಯ ವಿಚಾರ!! ದೇಶದ ಜನರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಜೆಟ್ ಮಂಡನೆ ಮಾಡಲಾಗಿದ್ದು, ಈ ವರ್ಷದ ಬಜೆಟ್ ದೇಶದ ಆರ್ಥಿಕತೆಗೆ ಮತ್ತಷ್ಟು ಬಲವನ್ನು ನೀಡಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಹೌದು….. ಈಗಾಗಲೇ. ಮುಂದಿನ ಒಂದು ದಶಕದಲ್ಲಿ ಭಾರತವು ಜಗತ್ತಿನ ಅತೀ ಪ್ರಬಲ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ ಎಂದು ಬ್ಯಾಂಕ್ ಆಫ್ ಅಮೆರಿಕಾದ ಮೆರ್ರಿಲ್ ಲಿಂಚ್ ವರದಿಯು ಹೇಳಿತ್ತು. ಅಷ್ಟೇ ಅಲ್ಲದೇ, ಮುಂದಿನ ಒಂದು ದಶಕದಲ್ಲಿ ಭಾರತವು ಜಪಾನ್ ಅನ್ನು ಹಿಂದಿಕ್ಕಲಿದ್ದು, ಜಗತ್ತಿನ ಮೂರನೇ ಅತೀದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದೂ ಆ ವರದಿಯು ಹೇಳಿದೆ.

ಆದರೆ ಆ ಮಾತು ನಿಜ ಎಂದೆನಿಸುತ್ತೆ!! ಯಾಕೆಂದರೆ ಮುಂದಿನ ಹಣಕಾಸು ವರ್ಷದ ಮುನ್ನೋಟ ಎಂದೇ ಬಣ್ಣಿಸಲಾದ ಈ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಈ ಬಗೆಗಿನ ಕುತೂಹಲಕಾರಿಯಾದ ಮಾಹಿತಿ ಇದೀಗ ಹೊರಬಿದ್ದಿದೆ. ಆರ್ಥಿಕ ಸಮೀಕ್ಷೆಯ ಮುಖಪುಟವು ಗುಲಾಬಿ ಬಣ್ಣದಿಂದ ಕೂಡಿದ್ದೇ ಬಹಳ ವಿಶೇಷವಾಗಿದ್ದು, ಮಹಿಳೆಯರ ವಿರುದ್ಧದ ದೌರ್ಜನ್ಯ ಹಾಗೂ ಹೆಣ್ಣು ಭ್ರೂಣ ಹತ್ಯೆ ವಿರುದ್ಧ ದನಿ ಎತ್ತಲೆಂದು ಸಾಂಕೇತಿಕವಾಗಿ ಈ ಬಣ್ಣ ಆಯ್ಕೆ ಮಾಡಿಕೊಳ್ಳಲಾಗಿತ್ತು!!

ಇನ್ನು ಈ ದೇಶದ ಆರ್ಥಿಕ ಪ್ರಗತಿಯ ಬಗ್ಗೆ ಆಶಾದಾಯಕ ಅಂಶಗಳನ್ನು ಒಳಗೊಂಡಿರುವ ಸಮೀಕ್ಷೆ ಅನ್ವಯ, ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶ ಶೇ.7- ಶೇ.7.5ರಷ್ಟು ಜಿಡಿಪಿ ಬೆಳವಣಿಗೆ ದಾಖಲಾಗಲಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತ ಮತ್ತೊಮ್ಮೆ ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬ ಹಿರಿಮೆಯನ್ನು ಹೊಂದಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.

ಸಮೀಕ್ಷೆಯಲ್ಲಿ, “ತಾರೀಖ್ ಪರ್ ತಾರೀಖ್, ತಾರೀಖ್ ಪರ್ ತಾರೀಖ್” (ಚಿತ್ರ: ದಾಮಿನಿ) ಎಂಬ ಬಾಲಿವುಡ್‍ನ ಸನ್ನಿ ಡಿಯೋಲ್ ಅವರ ಸಂಭಾಷಣೆಯೊಂದನ್ನು ಜೇಟ್ಲಿ ಸಂದರ್ಭೋಚಿತವಾಗಿ ಉಲ್ಲೇಖಿಸಿದ್ದು, ಭಾರೀ ಗಮನ ಸೆಳೆದವು.

ಅಷ್ಟೇ ಅಲ್ಲದೇ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಸಿದ್ಧಪಡಿಸಿರುವ, ಬಜೆಟ್ ಗೂ ಎರಡು ದಿನ ಮೊದಲು ಮಂಡನೆಯಾಗಿರುವ ವರದಿ ಅನ್ವಯ, ಜಿಎಸ್‍ಟಿ ಮತ್ತು ಅಪನಗದೀಕರಣದ ಅಲ್ಪಕಾಲೀನ ಹೊಡೆತವನ್ನು ಮೀತಿ, ಆರ್ಥಿಕತೆ ಹಂತಹಂತವಾಗಿಯಾದರೂ, ತ್ವರಿತವಾಗಿ ಉತ್ತಮ ಬೆಳವಣಿಗೆ ಕಾಣುತ್ತಿದೆ ಎಂದಿದೆ. ಆದರೆ ಕಚ್ಚಾ ತೈಲ ಬೆಲೆ, ಷೇರು ಬೆಲೆ ಕುಸಿತ ಕಾಣುವ ಭೀತಿಯು ದೇಶದ ಆರ್ಥಿಕತೆಗೆ ಸವಾಲಾಗುವ ಸಾಧ್ಯತೆಗಳೂ ಇವೆ ಎಂದು ವರದಿ ತಿಳಿಸಿದೆ.

ನರೇಂದ್ರ ಮೋದಿಯವರ ಸರ್ಕಾರವನ್ನು ಹಾಡಿ ಹೊಗಳಿರುವ ರಾಷ್ಟ್ರಪತಿಗಳು, ಮೋದಿ ಜಾರಿ ತಂದಿರುವ ಯೋಜನೆಗಳ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈಗಾಗಲೇ ನರೇಂದ್ರ ಮೋದಿಯವರು ಜಾರಿ ತಂದಂತಹ ನೋಟು ರದ್ಧತಿ, ಜಿಎಸ್ ಟಿ ನಿರ್ಧಾರದಿಂದ ಸಫಲತೆಯನ್ನೂ ಕಂಡರೂ ಕೂಡ ಭ್ರಷ್ಟಾಚಾರ ವಿರೋಧಿಯಾಗಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ನೋಟ್ ಬ್ಯಾನ್, ಜಿ ಎಸ್ ಟಿ ಕ್ರಮವನ್ನು ಅಂತರಾಷ್ಟ್ರೀಯ ಸಂಸ್ಥೆಗಳಲ್ಲದೆ ಹಲವಾರು ಆರ್ಥಿಕ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದೆ. ಹಾಗಾಗಿ, ಇದು ನರೇಂದ್ರ ಮೋದಿಯವರ “ಎದೆಗಾರಿಕೆಯ ನಿರ್ಧಾರ” ಎಂದೇ ಬಣ್ಣಿಸಿದ್ದಾರೆ.

ಆದರೆ ಈ ವರ್ಷದ ಆರ್ಥಿಕ ಸಮೀಕ್ಷಾ ವರದಿಯ ಪ್ರಕಾರ, ಜಿಎಸ್‍ಟಿಯಿಂದಾಗಿ ಪರೋಕ್ಷ ತೆರಿಗೆ ಸಂಗ್ರಹ ಶೇ.50ರಷ್ಟು ಹೆಚ್ಚಾಗಿದೆ ಎಂದು ಆರ್ಥಿಕ ಸಮೀಕ್ಷೆ ಸಂತಸ ವ್ಯಕ್ತಪಡಿಸಿದೆ ಅಲ್ಲದೇ, ಹೊಸದಾಗಿ 34 ಲಕ್ಷ ವ್ಯಾಪಾರಗಳು ಜಿಎಸ್‍ಟಿ ಅಧೀನಕ್ಕೆ ಬಂದಿವೆ. ಹೀಗಾಗಿ ಪರೋಕ್ಷ ತೆರಿಗೆ ಸಂಗ್ರಹ ಶೇ.40ರಷ್ಟು ಹೆಚ್ಚಾಗಿದೆ ಎಂದು ಹೇಳಿದೆ. ಇನ್ನು, ನೋಟು ರದ್ದತಿಯಿಂದ ತೆರಿಗೆದಾರರ ಸಂಖ್ಯೆ ಶೇ.10ರಷ್ಟು ಹೆಚ್ಚಳವಾಗಿದೆ. ಅಂದರೆ ಸುಮಾರು 18 ಲಕ್ಷ ಹೊಸ ತೆರಿಗೆದಾರರು ಸೇರಿ ಕೊಂಡಿದ್ದಾರೆ. ಇದಲ್ಲದೆ ಮನೆಗಳಲ್ಲಿನ ಉಳಿತಾಯದ ಹಣವೂ ವೃದ್ಧಿಯಾಗಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ!!

ಭಾರತಕ್ಕೆ ಮುಂದಿನ 25 ವರ್ಷದಲ್ಲಿ 4.5 ಲಕ್ಷ ಕೋಟಿ ಡಾಲರ್ ಹಣವು ಮೂಲಸೌಕರ್ಯ ಕ್ಷೇತ್ರದ ಅಭಿವೃದ್ಧಿಗೆ ಬೇಕು. ಈ ಪೈಕಿ ಭಾರತ ಸ್ವಂತ ಬಲದ ಮೇಲೆ 3.9 ಲಕ್ಷ ಕೋಟಿ ರೂಪಾಯಿ ಬಂಡವಾಳ ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ ಎಂದು ಸಮೀಕ್ಷೆ ಹೇಳಿದೆ. ಆದರೆ, ಕೃಷಿಕರ ಬಗ್ಗೆ ಹೆಚ್ಚಿನ ಒಲವು ತೋರಿರುವ ಈ ಬಾರಿಯ ಬಜೆಟ್ ನಲ್ಲಿ , ಕೃಷಿಗೆ ಸಂಬಂಧಿಸಿರುವ ಹೊಸ ಯೋಜನೆಯಿಂದಾಗಿ ಅನುಕೂಲಗಳಾಗಿವೆ. ಹಾಗೆಯೇ 2022ರ ವೇಳೆಗೆ ಕೃಷಿಕರ ಆದಾಯ ದ್ವಿಗುಣಗೊಳಿಸುವ ಮಹತ್ತರವಾದ ಗುರಿಯನ್ನು ಹೊತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಆದರೆ, ಕೃಷಿ ತ್ಯಾಜ್ಯ ಸುಟ್ಟರೆ ಭಾರಿ ದಂಡ ಹೇರಬೇಕು. ಮಾಲಿನ್ಯ ನಿಯಂತ್ರಣ, ಸಾರ್ವಜನಿಕ ಬಸ್ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಮೀಕ್ಷೆ ಹೇಳಿದೆ. ಇನ್ನು, ಶೇ.25 ಕೃಷಿ ಆದಾಯ ನಷ್ಟ ಹವಾಮಾನ ಬದಲಾವಣೆಯಿಂದ ಶೇ.20-25ರಷ್ಟು ಕೃಷಿ ಆದಾಯ ಖೋತಾ ಆಗಲಿದೆ ಎಂದು ಆರ್ಥಿಕ ಸಮೀಕ್ಷೆ ಕಳವಳ ವ್ಯಕ್ತಪಡಿಸಿದೆ. ಮಳೆ ಕೊರತೆ ಅಥವಾ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದ್ದು, ಇದು ಕೃಷಿ ಆದಾಯದ ನಷ್ಟಕ್ಕೆ ಕಾರಣವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ಜಿಎಸ್‍ಟಿ ಮತ್ತು ಅಪನಗದೀಕರಣದ ಅಲ್ಪಕಾಲೀನ ಹೊಡೆತವನ್ನು ಮೀತಿ, ಆರ್ಥಿಕತೆ ಹಂತಹಂತವಾಗಿಯಾದರೂ, ತ್ವರಿತವಾಗಿ ಉತ್ತಮ ಬೆಳವಣಿಗೆ ಕಾಣುತ್ತಿದ್ದು, ಬ್ಯಾಂಕ್ ಆಫ್ ಅಮೆರಿಕಾದ ಮೆರ್ರಿಲ್ ಲಿಂಚ್ ವರದಿಯು ತಿಳಿಸಿದಂತೆ ಮುಂದಿನ ಒಂದು ದಶಕದಲ್ಲಿ ಭಾರತವು ಜಗತ್ತಿನ ಅತೀ ಪ್ರಬಲ ಆರ್ಥಿಕ ದೇಶವಾಗಿ ಹೊರಹೊಮ್ಮಲಿರುವುದು ಅಕ್ಷರಶಃ ನಿಜ ಎಂದನಿಸುತ್ತೆ!! ಅಷ್ಟೇ ಅಲ್ಲದೇ, ನರೇಂದ್ರ ಮೋದಿಯವರ ರಾಜತಾಂತ್ರಿಕತೆಯ ಯಶಸ್ಸಿನಿಂದಾಗಿ ಭಾರತ ಜಗತ್ತಿನ ಮೂರನೇ ಅತೀದೊಡ್ಡ ಆರ್ಥಿಕತೆಯಾಗಿ ಬೆಳೆಯಲಿರುವುದು ಖಂಡಿತಾ…..

  • ಅಲೋಖಾ
Tags

Related Articles

Close