ಪ್ರಚಲಿತ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯೆ, ಸಿಬಿಐ ಮುಂದೆ ಬಾಯಿ ಬಿಟ್ಟ ಸತ್ಯ ಏನು ಗೊತ್ತೆ?

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಮತ್ತು ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಕಾರ್ಯಾಚರಣೆ ಚುರುಕುಗೊಂಡಿದ್ದಲ್ಲದೇ, ಈಗಾಗಲೇ ಸಾಕಷ್ಟು ಸತ್ಯಾಸತ್ಯತೆಗಳು ಹೊರಬಿದ್ದಿರುವ ಬೆನ್ನಲ್ಲೇ ಇನ್ನೊಂದು ಸ್ಪೋಟಕ ಸುದ್ದಿ ಇದೀಗ ಹೊರ ಬಿದ್ದಿದೆ!!

ಹೌದು… ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವು ಹೊಸ ಹೊಸ ತಿರುವುಗಳನ್ನು ಪಡೆದುಕೊಂಡಿದ್ದು, ಈಗಾಗಲೇ ಮಡಿಕೇರಿಯ ವಿನಾಯಕ ಲಾಡ್ಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿಯಲ್ಲಿ ಸಿಬಿಐ ಅಧಿಕಾರಿಗಳಿಗೆ ಒಂದು ಗುಂಡು ಸಿಕ್ಕಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು!! ಇದರ ಬೆನ್ನಲ್ಲೇ, ಇದೀಗ ಗಣಪತಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯೆಯಿಂದ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ!!

2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೆÇಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು!! ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೆÇೀರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು. ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆ ಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.

ಅಂತೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದು, ಇದೀಗ ಒಂದೊಂದೇ ಸತ್ಯಗಳು ಹೊರ ಬೀಳುತ್ತಿದ್ದು, ತನಿಖೆ ನಡೆಸಿದ ವೇಳೆ ಮಡಿಕೇರಿ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ಶೈಲಜಾ ಅವರು ಸಿಬಿಐ ಅಧಿಕಾರಿಗಳ ಎದುರು ಸ್ಫೋಟಕ ಸಂಗತಿ ಬಾಯ್ಬಿಟ್ಟಿದ್ದಾರೆ. ಸರ್ಕಾರದ ಸೂಚನೆಯಂತೆಯೇ ಮರಣೋತ್ತರ ಪರೀಕ್ಷೆ ನಡೆದಿತ್ತು ಎಂದು ವೈದ್ಯೆಯು ಹೇಳಿದ್ದು, ಗಣಪತಿ ಮರಣೋತ್ತರ ಪರೀಕ್ಷೆಯಲ್ಲಿ ಸರ್ಕಾರದ ಹಸ್ತಕ್ಷೇಪ ಬಹಿರಂಗವಾಗಿದೆ.

ಅಷ್ಟೇ ಅಲ್ಲದೇ, “ಸರ್ಕಾರದ ಸೂಚನೆಯಂತೆ ನಾನು ಮರಣೋತ್ತರ ಪರೀಕ್ಷೆ ನಡೆಸಿದ್ದೇನೆ, ಆತ್ಮಹತ್ಯೆ ಪ್ರಕರಣ ಎಂದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸರ್ಕಾರ ಸೂಚಿಸಿತ್ತು”, ಎಂದು ಸಿಬಿಐ ಅಧಿಕಾರಿಗಳ ಮುಂದೆ ಡಾ. ಶೈಲಜಾ ಹೇಳಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ!!

ಈ ಹಿಂದೆ ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿತ್ತು. ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೆÇಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು!!

ಅಲ್ಲದೇ, ಸಿಐಡಿ ಫೆÇರೆನ್ಸಿಕ್ ವರದಿಯನ್ನು ತನಿಖೆ ವೇಳೆ ಪರಿಗಣಿಸಿದೇ ಸಚಿವ ಜಾರ್ಜ್ ಮತ್ತು ಇಬ್ಬರು ಪೆÇಲೀಸ್ ಅಧಿಕಾರಿಗಳಿಗೆ ಕ್ಲೀನ್ ಚೀಟ್ ನೀಡಿತ್ತು. ಈ ವೇಳೆ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳನ್ನು ವಾಹಿನಿ ಮಾತನಾಡಿಸಿತ್ತು. ಆ ಸಂದರ್ಭದಲ್ಲಿ ಜಗನ್ ಬೆಳ್ಳಿಯಪ್ಪ ಮಾತನಾಡಿ, ಪೆÇಲೀಸ್ ಅಧಿಕಾರಿಗಳು ನಮ್ಮ ಜೊತೆ ಜಾಸ್ತಿ ಪ್ರಶ್ನೆ ಕೇಳಿಲ್ಲ. ಕೆಲ ಪ್ರಶ್ನೆ ಕೇಳಿದರು.!!! ಏನು ಪ್ರಶ್ನೆ ಕೇಳಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ!!! ಕೊನೆಗೆ ಖಾಲಿ ಬಿಳಿ ಹಾಳೆಯಲ್ಲಿ ಸಹಿ ಹಾಕಲು ಹೇಳಿದರು. ನಾವು ಸಹಿ ಹಾಕಿದ್ವಿ ಎಂದು ತಿಳಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ, 100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರಿಸಿತ್ತು!!

https://twitter.com/bhat_shriraj/status/932567480685481984

ಆದರೆ ಇದೀಗ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಒಂದೊಂದೇ ಸತ್ಯಗಳು ಹೊರಬೀಳುತ್ತಿದ್ದು, ಈ ಬಗ್ಗೆ ರಾಜ್ಯ ಸರಕಾರ ಮಾತ್ರ ಮೌನವಹಿಸಿರುವುದನ್ನು ನೋಡಿದಾಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಡುತ್ತದೆ!!! ಇನ್ನು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯುವುದಿಲ್ಲ ಎಂದಿರುವ ಇವರು ಒಬ್ಬ ನಿಷ್ಠಾವಂತ ಅಧಿಕಾರಿಯ ಸಾವಿಗೆ ನ್ಯಾಯ ಕೊಡುವುದರಲ್ಲಿ ಹಿಂದೇಟು ಹಾಕಿರುವುದು ಮಾತ್ರ ವಿಪರ್ಯಾಸ!!

ಇನ್ನು, ರಾಜ್ಯ ಸರ್ಕಾರ ಸಾವಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ನಾಶಪಡಿಸಿದ್ದಲ್ಲದೇ, ಜಾರ್ಜ್‍ಗೆ ಯಾವುದೇ ವಿಚಾರಣೆ ನಡೆಸದೇ ಕ್ಲೀನ್ ಚಿಟ್ ಸಿಕ್ಕಿದ್ದಾದರೂ ಹೇಗೆ ಎನ್ನುವ ಪ್ರಶ್ನೆಗಳು ಕಾಡುತ್ತಿವೆ!! ಅಷ್ಟೇ ಅಲ್ಲದೇ, ಈ ಪ್ರಕರಣವನ್ನು ಸಿಬಿಐಗೆ ಕೊಡಲು ತಕರಾರು ಎತ್ತಿರುವ ರಾಜ್ಯ ಸರಕಾರ ಎಸಿಬಿಯಿಂದ ಎಲ್ಲ ದಾಖಲೆಯನ್ನು ಪಡೆದು ಜಾರ್ಜ್ ಪರ ನಿಂತಿರುವುದನ್ನು ಕಂಡರೆ… ಗಣಪತಿ ಪ್ರಕರಣವನ್ನು ಆತ್ಮಹತ್ಯೆ ಎಂದು ಹೇಳಲು ಸಾಧ್ಯವೇ?? ನೀವೇ ಹೇಳಿ……….

– ಅಲೋಖಾ

Tags

Related Articles

Close