ಪ್ರಚಲಿತ

ರಾಜ್ಯ ವಿಧಾನ ಸಭಾ ಚುನಾವಣೆಗೆ ರಾಹುಲ್ ರೂಪುರೇಷೆ!! ಪರಮೇಶ್ವರ್ ಗೆ ಟಿಕೆಟ್ ಕೊಡುವುದಿಲ್ಲ ಎಂದ ರಾಹುಲ್!!

ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾದ ನಂತರದಿಂದ ತಮ್ಮ ಪಕ್ಷದಲ್ಲಿಯೇ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಬರದಲ್ಲಿ ತೊಡಗಿಕೊಂಡಿದ್ದಾರೆ ಎಂದರೆ ತಪ್ಪಾಗಲಾರದು!! ಯಾಕೆಂದರೆ, ಕರ್ನಾಟಕ ರಾಜ್ಯ ಸೇರಿದಂತೆ ಒಟ್ಟು 8 ರಾಜ್ಯಗಳಲ್ಲಿನ ಕಾಂಗ್ರೆಸ್ ಅಧ್ಯಕ್ಷರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಶಾಕ್ ನೀಡಿದ್ದು, ಇದಕ್ಕೆ ಪಕ್ಷದ ಹಲವು ರಾಜ್ಯ ಘಟಕಗಳ ಅಧ್ಯಕ್ಷರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.

ಕರ್ನಾಟಕ ಸೇರಿದಂತೆ ಒಟ್ಟು 8 ರಾಜ್ಯಗಳು 2018ರಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಹೊತ್ತಿನಲ್ಲೇ, ಆ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಶಾಕ್ ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಸಂಸತ್ ಚುನಾವಣೆ ವೇಳೆ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಚುನಾವಣಾ ಟಿಕೆಟ್ ನಿರಾಕರಿಸುವ ಪ್ರಸ್ತಾಪವನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದು ಬಹಳ ಅಚ್ಚರಿಯನ್ನು ಉಂಟು ಮಾಡಿದೆ!!

ಹೌದು… ರಾಹುಲ್ ಗಾಂಧಿಯವರ ವಿನೂತನ ಪ್ರಸ್ತಾಪವು ಈಗಾಗಲೇ ರಾಜ್ಯಾದ್ಯಂತ ಕಾಂಗ್ರಸ್ ನಾಯಕರಿಗೆ ಬಿಸಿ ತಟ್ಟಿದೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ ಪರಮೇಶ್ವರ್ ಅವರಿಗೆ ಈ ಬಾರಿ ನಡೆಯುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಗೋದಿಲ್ಲ ಎನ್ನುವುದು ಈ ಮೂಲಕ ದೃಢಪಟ್ಟಿದೆ!!

ಈ ಹಿಂದೆಯೂ ಇಂತಹದ್ದೇ ಪ್ರಸ್ತಾಪ ಮುಂದಿಟ್ಟಿದ್ದ ರಾಹುಲ್ ಗಾಂಧಿ ಈ ಬಾರಿಯೂ ಪ್ರಸ್ತಾಪವನ್ನು ಮುಂದಿಟ್ಟಿರುವುದಾದರೂ ಯಾಕೆ??

ಈಗಾಗಲೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಶಾಕ್ ನೀಡಿದ್ದು, ಚುನಾವಣೆಗೆ ಸ್ಪರ್ಧಿಸುವ ಆಸೆ ಹೊತ್ತಿದ್ದ ಮಂದಿಗೆ ನಿರಾಸೆ ಉಂಟಾಗಿದೆ. ಆದರೆ ಈ ಹಿಂದೆ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವೇಳೆಯೂ ರಾಹುಲ್ ಗಾಂಧಿ ಇಂಥದ್ದೊಂದು ಪ್ರಸ್ತಾಪ ಮುಂದಿಟ್ಟಿದ್ದರು.

ಆದರೆ ಇದಕ್ಕೆ ಪಕ್ಷದ ಹಲವು ರಾಜ್ಯ ಘಟಕಗಳ ಅಧ್ಯಕ್ಷರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಯಲ್ಲಿ ಅವರು ಪ್ರಸ್ತಾಪ ಕೈಬಿಟ್ಟಿದ್ದರು. ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಸಂದರ್ಭದಲ್ಲಿ ಇಂತಹ ಬದಲಾವಣೆಗೆ ಕೈ ಹಾಕಿದ್ದ ರಾಹುಲ್ ತದ ನಂತರ ಎಲ್ಲರ ಒತ್ತಡಕ್ಕೆ ಮಣಿದು ತಮ್ಮ ಚಿಂತನೆಗೆ ಎಳ್ಳು ನೀರು ಬಿಟ್ಟಿದ್ದರು.

Image result for rahul

ಆದರೆ ಇದೀಗ ಗುಜರಾತ್ ಚುನಾವಣಾ ಫಲಿತಾಂಶವನ್ನು ಪರಾಮರ್ಶಿಸಿದ ವೇಳೆ ಕಂಡು ಬಂದ ಅಂಶವೊಂದು, ರಾಹುಲ್‍ರನ್ನು ಮತ್ತೆ ಹಳೆಯ ಪ್ರಸ್ತಾಪಕ್ಕೆ ಜೀವ ತುಂಬುವಂತೆ ಮಾಡಿದೆ. ಈ ಹಿಂದೆ ತಾವು ಮಾಡಿದ್ದ ಪ್ರಸ್ತಾಪ ಜಾರಿಗೆ ಬಂದಿದ್ದೇ ಆಗಿದ್ದಲ್ಲಿ, ಮಹತ್ವದ ಗುಜರಾತ್ ಫಲಿತಾಂಶ ತಮ್ಮ ಕಡೆಗೆ ಒಲಿಯುವುದು ಶತ ಸಿದ್ಧವಾಗಿತ್ತು ಎಂಬುದನ್ನು ಮನನ ಮಾಡಿಕೊಂಡಿರುವ ರಾಹುಲ್, ಈ ಬಾರಿ ಪ್ರಸ್ತಾಪವನ್ನು ಜಾರಿಗೆ ತರಲು ಮುನ್ನುಡಿ ಇಟ್ಟಿದ್ದಾರೆ.

ಟಿಕೆಟ್ ನಿರಾಕರಿಸುವ ಪ್ರಸ್ತಾಪ ಮುಂದಿಟ್ಟ ರಾಹುಲ್!!

ಗುಜರಾತ್ ಚುನಾವಣೆಯ ಬಳಿಕ ರಾಹುಲ್ ಗಾಂಧಿ ವಿವಿಧ ರಾಜ್ಯಗಳಲ್ಲಿ ಚುನಾವಣಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದು, ಘಟಾನೂ ಘಟಿಗಳಿಗೂ ಮುಂದಿನ ಚುನಾವಣೆಗೆ ಟಿಕೆಟ್ ಸಿಗೋದಿಲ್ಲ ಎಂದನಿಸುತ್ತೆ!! ಆದರೆ ಈ ಬಗ್ಗೆ ರಾಹುಲ್ ಗಾಂಧಿ ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ಹೊತ್ತಿರುವ ಹಲವು ಹಿರಿಯ ನಾಯಕರ ಜೊತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಭೆಯೊಂದನ್ನು ನಡೆಸಿದ್ದರು. ಈ ಸಭೆಯಲ್ಲಿ, ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಟಿಕೆಟ್ ನಿರಾಕರಿಸುವ ಪ್ರಸ್ತಾಪವನ್ನು ರಾಹುಲ್ ಗಾಂಧಿ ಮಂಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ಬಗ್ಗೆ ನಾಯಕರಿಂದ ಅಭಿಪ್ರಾಯವನ್ನೂ ಆಹ್ವಾನಿಸಿದ್ದಾರೆ ಎಂದು ತಿಳಿದು ಬಂದಿದೆ!!

ಸಭೆಯಲ್ಲಿ ಭಾಗವಹಿಸಿದ್ದ ರಾಹುಲ್, “ಗುಜರಾತ್ ಚುನಾವಣಾ ಪ್ರಚಾರದ ವೇಳೆ ಸಮನ್ವಯದ ಕೊರತೆಯನ್ನು ನಾನು ಪ್ರಮುಖವಾಗಿ ಗಮನಿಸಿದ್ದೇನೆ. ರಾಜ್ಯ ಘಟಕದ ಅಧ್ಯಕ್ಷರು ಮತ್ತು ಹಲವು ಜಿಲ್ಲಾ ಘಟಕಗಳ ಅಧ್ಯಕ್ಷರು, ತಮ್ಮ ಗಮನವನ್ನು ಪೂರ್ಣವಾಗಿ ತಾವು ಸ್ಪರ್ಧಿಸಿದ್ದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದ್ದರು. ಇದು ಒಟ್ಟಾರೆ ಚುನಾವಣಾ ಪ್ರಚಾರ ಮತ್ತು ಕಾರ್ಯತಂತ್ರದ ಮೇಲೆ ಪರಿಣಾಮ ಬೀರಿತ್ತು. ರಾಜ್ಯ ಮತ್ತು ಜಿಲ್ಲಾ ಘಟಕಗಳ ನಡುವೆ ಸಮನ್ವಯದ ಕೊರತೆ ಎದ್ದುಕಾಣುತ್ತಿತ್ತು” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೇ, ಒಂದು ವೇಳೆ ಸಮನ್ವಯ ಸಾಧ್ಯವಾಗಿದೇ ಇದ್ದಲ್ಲಿ, ನಾವು ಇನ್ನೂ ಕನಿಷ್ಠ 10 ಸ್ಥಾನ ಗೆದ್ದು, ಅಧಿಕಾರಕ್ಕೆ ಏರುವ ಎಲ್ಲಾ ಸಾಧ್ಯತೆಗಳಿದ್ದವು. ಜೊತೆಗೆ ಗುಜರಾತ್ ಚುನಾವಣೆಯ ಫಲಿತಾಂಶದ ಪರಾಮರ್ಶೆ ವೇಳೆಯೂ ಸಮನ್ವಯದ ಕೊರತೆಯನ್ನು ನಾನು ಕಂಡುಕೊಂಡಿದ್ದೇನೆ. ಹೀಗಾಗಿ ಮುಂದಿನ ಚುನಾವಣೆಗಳ ವೇಳೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು ಚುನಾವಣೆಗೆ ಸ್ಪರ್ಧಿಸಿದಂತೆ ಮಾಡಬೇಕು ಎನ್ನುವುದು ನನ್ನ ಪ್ರಸ್ತಾಪ” ಎಂದು ರಾಹುಲ್ ಹೇಳಿದ್ದಾರೆ.

ಅಂತೂ……… ರಾಹುಲ್ ಗಾಂಧಿಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿ ಆಯ್ಕೆಯಾದ ನಂತರದಿಂದ ಹೊಸ ಬದಲಾವಣೆಯನ್ನೂ ತರಲು ಹೋಗಿ ತನ್ನದೇ ಪಕ್ಷದ ನಾಯಕರುಗಳಿಗೆ ಶಾಕ್ ನೀಡಿದ್ದಲ್ಲದೇ ವಿಧಾನ ಸಭಾ ಚುನಾವಣಾ ಸ್ಪರ್ಧಾ ಆಕಾಂಕ್ಷಿಗಳ ಆಸೆಗೆ ಎಳ್ಳು ನೀರು ಬಿಟ್ಟಿರೋದು ಕೂಡ ಅಷ್ಟೇ ನಿಜ!!

– ಅಲೋಖಾ

Tags

Related Articles

Close