ಪ್ರಚಲಿತ

ಸಾಕ ಬೇಕಾ ತಪರಾಕಿ ಸಿದ್ದರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗ ರೆಡ್ಡಿ, ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!: ಗುಡುಗಿದ ಅನಂತ್ ಕುಮಾರ್ ಹೆಗಡೆ.

ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ಧೋರಣೆಗೆ ಕಿಡಿ ಕಾರಿರುವ ಕೇಂದ್ರ ಸಚಿವ, ಹಿಂದೂ ಫೈರ್‍ಬ್ರಾಂಡ್ ಅನಂತ್ ಕುಮಾರ್ ಹೆಗಡೆ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಅನಂತ್ ಕುಮಾರ್ ಹೆಗಡೆಯ ಈ ಘೋಷಣೆಯಿಂದ ಹಿಂದೂ ಸಂಘಟನೆಗಳ ಯುವಕರಿಗೆ ಆನೆಬಲ ಬಂದಂತಾಗಿದ್ದು, ಹಿಂದೂಗಳ ಪಾಲಿಗೆ ಅನಂತ್ ಕುಮಾರ್ ಹೆಗಡೆ ಹಿಂದೂಕಣ್ಮಣಿಯಾಗಿ ಹೊರಹೊಮ್ಮಿದ್ದಾರೆ.

ಪರೇಶ್ ಮೇಸ್ತನ ಹತ್ಯೆಯ ಸಂಬಂಧ ಕಾಂಗ್ರೆಸ್ ಸರಕಾರದ ಕೈಗೊಂಬೆಯಂತೆ ವರ್ತಿಸಿದ್ದ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರು ಪರೇಶ್‍ಮೇಸ್ತನ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದ ಅಮಾಯಕ ಹಿಂದೂ ಯುವಕರನ್ನು ಬಂಧಿಸಿದ್ದರು. ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಮೆರವಣಿಗೆಯ ಮೇಲೆ ಲಾಠಿಛಾರ್ಜ್ ಮಾಡಲಾಗಿತ್ತು. ಕೊನೆಗೆ ಅಶ್ರವಾಯು ಸಿಡಿಸಿದರೂ ಪ್ರತಿಭಟನಾಕಾರರು ಕದಲದ ಕಾರಣ, ಪೊಲೀಸರು ಆಕಾಶದಲ್ಲಿ ಗುಂಡು ಹಾರಿಸಿದ್ದರು.

ಈ ವೇಳೆ ದಿಕ್ಕಾಪಾಲಾಗಿ ಓಡಿದ್ದ ಅಮಾಯಕ ಹಿಂದೂ ಯುವಕರನ್ನು ಪೊಲೀಸರು ಹಿಡಿದು ಬಂಧಿಸಿದ್ದರು. ಆದರೆ ಪರೇಶ್ ಮೇಸ್ತನ ಹತ್ಯೆಗೆ ಕಾರಣವಾಗಿದ್ದ ಆರೋಪಿಗಳ ಬಗ್ಗೆ ಸೂಕ್ಷ್ಮ ಸುಳಿವಿದ್ದರೂ ಅವರನ್ನು ಬಂಧಿಸಲು ಪೊಲೀಸರು ಹೋಗಿರಲಿಲ್ಲ. ಪೊಲೀಸರೇ ಕಲ್ಲುತೂರುವ ಕಿಡಿಗೇಡಿಗಳಿಗೆ ಬೆಂಗಾವಲಾಗಿ ನಿಂತಿದ್ದಲ್ಲದೆ, ಅವರ ಜೊತೆ ತಾನೂ ಕಲ್ಲುತೂರಾಟ ನಡೆಸಿರುವುದು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದರಿಂದ ಕ್ರುದ್ಧರಾಗಿದ್ದ ಅನಂತ್ ಕುಮಾರ್ ಹೆಗಡೆ ಪರೇಶ್ ಮೇಸ್ತನ ಭೀಕರ ಕೊಲೆ ನಡೆದಿದ್ದು, ಸರಕಾರ ಇದನ್ನು ಮುಚ್ಚಿಹಾಕುವ ಕೆಲಸ ಮಾಡುತ್ತಿದೆ ಎಂದು ಘಂಟಾಘೋಷವಾಗಿ ಸಾರಿ ಪ್ರತಿಭಟನಾಕಾರರಿಗೆ ನೈತಿಕ ಬಲ ತುಂಬಿದ್ದರು. ಘಟನೆಯಲ್ಲಿ ಬಂಧಿತರಾಗಿದ್ದ ಅಮಾಯಕರನ್ನು ಬಿಡುಗಡೆಗೊಳಿಸಲು ಬಿಜೆಪಿ ಮುಖಂಡರು ಕಾನೂನು ಹೋರಾಟವನ್ನು ಮಾಡುತ್ತಿದ್ದರು. ಈ ವೇಳೆ ಅಮಾಯಕರನ್ನು ಒಂದೂವರೆ ದಿನದಲ್ಲಿ ಬಿಡುಗಡೆಗೊಳಿಸಿತ್ತು.

ಇದರ ಬಗ್ಗೆ ಪ್ರತಿಕ್ರಿಯಿಸಿದ ಅನಂತ್ ಕುಮಾರ್ ಹೆಗಡೆ ಫೇಸ್‍ಬುಕ್‍ನಲ್ಲಿ ಹರ್ಷ ವ್ಯಕ್ತಪಡಿಸಿ ಕಾಂಗ್ರೆಸ್‍ಗೆ ಟಾಂಗ್ ನೀಡಿದ್ದಾರೆ.

`ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗ ರೆಡ್ಡಿ ಹಾಗು ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!
ಶಿರಸಿಯಲ್ಲಿ ಮೊನ್ನೆಯ ದಿನ ಪೊಲೀಸ್ ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ 62 ಮಂದಿ ಮುಗ್ದರನ್ನು ಶಿರಸಿ ನ್ಯಾಯಾಲಯ ಇಂದು ಜಾಮೀನು ಪಡೆದು ಬಿಡುಗಡೆಗೆ ಆದೇಶಿಸಿದೆ.

ಕೇವಲ ಒಂದೂವರೆ ದಿನದಲ್ಲಿ ಬಿಡುಗಡೆಯ ಆದೇಶ ಪಡೆದ ಕ್ರಮವು ಐತಿಹಾಸಿಕವಾಗಿದ್ದು, ಈ ತೀರ್ಪು ಪೊಲೀಸ್ ಸಮವಸ್ತ್ರದಲ್ಲಿ ದಾದಾಗಿರಿ ಮಾಡಲು ಹೊರಟಿದ್ದ ನಿಂಬಾಳ್ಕರ್ ಎಂಬ ಹುಂಬ ಅಧಿಕಾರಿಗೆ ತೀವ್ರವಾದ ಕಪಾಳ ಮೋಕ್ಷ ಮಾಡಿದಂತಾಗಿದೆ! ಸೆಕ್ಷನ್ 307 ಅನ್ನು ಮನಬಂದಂತೆ ಜರುಗಿಸಿ ವಿಕೃತ ಪಭುತ್ವ ಸಾಧಿಸಲು ಹೊರಟರೆ, ಈ ದೇಶದ ಕಾನೂನು ಸುಮ್ಮನೆ ಕೂರುವುದಿಲ್ಲ ಎಂದು ಇಂದಿನ ನ್ಯಾಯಾಲಯದ ತೀರ್ಮಾನ ಸ್ಪಷ್ಟವಾಗಿ ತಿಳಿಸಿದೆ. ಇದು ಪ್ರಜಾಪ್ರಭುತ್ವದ ವಿಜಯ!

ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಮುಖವನ್ನು ಮತ್ತೊಮ್ಮೆ ಕನ್ನಡಿ ಮುಂದೆ ನೋಡಿಕೊಳ್ಳಿ! ನಿಮ್ಮ ಒಡ್ಡೋಲಗದ ಸಹೋದ್ಯೋಗಿಗಳು ಸಹ ನಿಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗುವ ದಿನ ದೂರವಿಲ್ಲ. ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶ ಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರನಾಗಲಿ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ?

ನಮ್ಮ ಹೋರಾಟಕ್ಕೆ ಇಂದಿನ ಈ ತೀರ್ಪು ಬಹು ದೊಡ್ಡ ನೈತಿಕ ಬೆಂಬಲ ನೀಡಿ ಹೋರಾಟದ ಕಿಚ್ಚನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ!

ನ್ಯಾಯಾಲಯದಲ್ಲಿ ನಮ್ಮ ದೇಶ ಭಕ್ತರ ಪರವಾಗಿ ವಾದಿಸಿ ನ್ಯಾಯ ದೊರೆಕಿಸಿಕೊಟ್ಟ ಅಷ್ಟು ವಕೀಲ-ವೃಂದದವರಿಗೆ ನನ್ನ ಬಹುದೊಡ್ಡ ಧನ್ಯವಾದಗಳು. ದೇಶ ಕಟ್ಟುವ ಕೆಲಸದಲ್ಲಿ ಜೊತೆಯಾದ ಎಲ್ಲರಿಗೂ ನನ್ನ ಅನಂತ ವಂದನೆಗಳು…’

ಹೀಗೆ ಅನಂತ್ ಕುಮಾರ್ ಹೆಗಡೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರಕಾರದ ಇರಿಸುಮರಿಸಿಗೆ ಕಾರಣವಾಗಿದೆ.

-ಚೇಕಿತಾನ

Tags

Related Articles

Close