ಪ್ರಚಲಿತ

ಸ್ಪೋಟಕ ಸುದ್ದಿ!! ಸೋನಿಯಾ ರಾಹುಲ್ ಬಂಧನಕ್ಕೆ ದಿನಗಣನೆ!! ಕೋಟಿ ಕೋಟಿ ರೂ. ದಂಡ ವಿಧಿಸಿದ್ದಾದರೂ ಯಾಕೆ ಗೊತ್ತಾ?!

ಬಹುಕೋಟಿ ಭ್ರಷ್ಟಾಚಾರದ ಆರೋಪವಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತಂತೆ ಕೆಲವೊಂದು ಅಂಶಗಳು ಇದೀಗ ಹೊರಬಿದ್ದಿದ್ದು, ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಮಧ್ಯೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಕುತ್ತಾಗುವ ಎಲ್ಲಾ ಲಕ್ಷಣಗಳು ಮತ್ತೊಮ್ಮೆ ಗೋಚರಿಸಿವೆ.

ಹೌದು… ಈ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೊಹ್ರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ ಹಾಗೂ ಸ್ಯಾಮ್ ಪಿತ್ರೋಡಾ ಅವರಿಗೆ ಸಂಕಷ್ಟ ತಂದೊಡ್ಡಿದ್ದಲ್ಲದೇ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಭಾರೀ ಪ್ರಮಾಣದ ಆರ್ಥಿಕ ಅವ್ಯವಹಾರವಾಗಿದೆ ಎಂದು 2012ರಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಈ ಪ್ರಕರಣವನ್ನು ದಾಖಲಿಸಿದ್ದರು.

ಈ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆಗೆ ತಡೆ ನೀಡಬೇಕು ಎಂದು ಯಂಗ್ ಇಂಡಿಯಾ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದಲ್ಲದೇ ಆರೋಪಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಆದರೆ ಇದೀಗ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಮುಖಂಡರು ಆರೋಪಿಗಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಂಗ್ ಇಂಡಿಯಾ ಕಂಪನಿಗೆ ಆದಾಯ ತೆರಿಗೆ ಇಲಾಖೆ 414 ಕೋಟಿ ರೂಪಾಯಿ ದಂಡ ವಿಧಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿಯ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಆದಾಯ ತೆರಿಗೆ ಇಲಾಖೆ ಈ ದಂಡ ವಿಧಿಸಿದೆ ಎಂದು ಈ ಪ್ರಕರಣದ ದೂರುದಾರರಾದ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ದಾಖಲೆ ಸಮೇತ ತಿಳಿಸಿದ್ದಾರೆ. ಸ್ವಾಮಿ ಅವರು ಸಲ್ಲಿಸಿದ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಪ್ರತ್ಯೇಕವಾಗಿರಿಸಲು ಕೋರ್ಟ್ ಆದೇಶಿಸಿದೆ.


ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?

ಜವಾಹರ್ ಲಾಲ್ ನೆಹರೂರ ಮಾರ್ಗದರ್ಶನದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಒಟ್ಟು ಐದು ಸಾವಿರ ಸ್ವಾತಂತ್ರ್ಯ ಹೋರಾಟಗಾರರು ಈ ಸಂಸ್ಥೆಯ ಷೇರನ್ನು ಹೊಂದಿದ್ದು, ತದನಂತರ ಈ ಕಂಪೆನಿ 1938ರ ಸೆಪ್ಟೆಂಬರ್ 9ರಂದು ಜವಾಹರಲಾಲ್ ನೆಹರೂ ಅವರ ನೇತೃತ್ವದಲ್ಲಿ ಲಖನೌದಲ್ಲಿ ಇಂಗ್ಲಿಷ್ ಆವೃತ್ತಿ ‘ನ್ಯಾಷನಲ್ ಹೆರಾಲ್ಡ್’ ಎನ್ನುವ ಹೆಸರಿನ ಮೂಲಕ ಪತ್ರಿಕೆ ಆರಂಭಿಸಿತು. ಆ ಬಳಿಕ ಹಿಂದಿ ಆವೃತ್ತಿ ನವಜೀವನ್ ಮತ್ತು ಉರ್ದು ಆವೃತ್ತಿ ಕ್ವಾಮಿ ಆವಾಜ್ ಎನ್ನುವ ಪತ್ರಿಕೆಗಳನ್ನೂ ಆರಂಭಿಸಿತು. ಬರಬರುತ್ತಾ ಇತರ ಪತ್ರಿಕೆಗಳಿಗೆ ಪೈಪೆÇೀಟಿ ನೀಡಲಾಗದೇ, ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿನ ವೈಫಲ್ಯತೆ ಮತ್ತು ಜಾಹೀರಾತು ಆದಾಯದ ಕೊರತೆಯಿಂದಾಗಿ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. ತದನಂತರ 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತಲ್ಲದೇ, ಆ ಸಮಯದಲ್ಲಿ ಸಂಸ್ಥೆ 90.25 ಕೋಟಿ ರೂಪಾಯಿ ಸಾಲ ಹೊಂದಿತ್ತು.

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಕುಟುಂಬದ ಪ್ರಮುಖರ ಹೂಡಿಕೆಯ ಮೂಲಕ 2010ರಲ್ಲಿ ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್) ಎಂಬ ಕಂಪೆನಿ ಅಸ್ತಿತ್ವಕ್ಕೆ ಬಂತು. ಸೋನಿಯಾ ಮತ್ತು ರಾಹುಲ್ ಗಾಂಧಿ ತಲಾ ಶೇ 38ರಷ್ಟು ಷೇರನ್ನು ಹೊಂದಿದ್ದರೆ ಗಾಂಧಿ ಕುಟುಂಬದ ಪರಮಾಪ್ತರಾದ ಆಸ್ಕರ್ ಫರ್ನಾಂಡಿಸ್ ಮತ್ತು ಮೋತಿಲಾಲ್ ವೋರಾ ತಲಾ ಶೇ 24ರಷ್ಟು ಷೇರುಗಳನ್ನು ಹೊಂದಿದ್ದರು.

ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ವೈಐಎಲ್ 90.25 ಕೋಟಿ ರೂಪಾಯಿ ಬಡ್ಡಿರಹಿತ ಸಾಲ ನೀಡಿತ್ತು. ಇದರಲ್ಲಿ ಎಐಸಿಸಿ ಖಜಾನೆಯಿಂದ ಐವತ್ತು ಲಕ್ಷ ರೂಪಾಯಿ ನೇರವಾಗಿ ವರ್ಗಾವಣೆಯಾಗಿತ್ತು. ಅಲ್ಲದೇ, ಹೆರಾಲ್ಡ್ ಒಡೆತನದಲ್ಲಿದ್ದ ‘ಹೆರಾಲ್ಡ್ ಹೌಸ್’ ನವೀಕರಣಕ್ಕೆ ಒಂದು ಕೋಟಿ ರೂಪಾಯಿ ನೀಡಿತ್ತು. ಇದಾದ ನಂತರ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನು ವೈಐಎಲ್ ಖರೀದಿಸಿತ್ತಲ್ಲದೇ, ಎರಡು ಸಾವಿರ ಕೋಟಿ ರೂಪಾಯಿಗೂ ಮೇಲೆ ಆಸ್ತಿಪಾಸ್ತಿ ಹೊಂದಿರುವ ಈ ಸಂಸ್ಥೆಗೆ ವೈಐಎಲ್ 91.75 ಕೋಟಿ ರೂಪಾಯಿ ಸುರಿದಿದ್ದು ಬಿಟ್ಟರೆ ಮಿಕ್ಕಾವ ಆರ್ಥಿಕ ವಹಿವಾಟಿನ ಬಗ್ಗೆ ಎಲ್ಲೂ ದಾಖಲಾಗಿರಲಿಲ್ಲ.

ಎಜೆಎಲ್ ಸಂಸ್ಥೆಯ ಖರೀದಿ ವ್ಯವಹಾರದಲ್ಲಿ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತದೆ ಎಂದು ಅಂದಿನ ಜನತಾ ಪಕ್ಷದ ಮುಖಂಡ ಸುಬ್ರಮಣಿಯನ್ ಸ್ವಾಮಿ 2012ರ ಜೂನ್ ನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದಾಯ ತೆರಿಗೆ ಕಾನೂನು 1961 ಪ್ರಕಾರ, ರಾಜಕೀಯ ಪಕ್ಷವೊಂದು ಮೂರನೇ ಕಂಪನಿಗೆ ಸಾಲ ಕೊಡುವಂತಿಲ್ಲ. ಎಜೆಎಲ್ ಮತ್ತು ವೈಎಎಲ್ ಮಧ್ಯೆ ಹಣದ ಅವ್ಯವಹಾರ ನಡೆದಿದೆ. ಎಜೆಎಲ್ ದೆಹಲಿ, ಮುಂಬೈ ಮುಂತಾದೆಡೆ ಆಸ್ತಿ ಹೊಂದಿದ್ದು ದೆಹಲಿಯ ಆಯಕಟ್ಟಿನ ಸ್ಥಳದಲ್ಲಿ ಕಟ್ಟಡವೂ ಇದೆ. ಇದರ ಇಂದಿನ ಮಾರುಕಟ್ಟೆ ಬೆಲೆ ಎರಡು ಸಾವಿರ ಕೋಟಿ ರೂಪಾಯಿಗೂ ಅಧಿಕ ಎನ್ನುವುದು ಸ್ವಾಮಿ ವಾದವಾಗಿತ್ತು.

ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ 26.06.2014ರಂದು ಸೋನಿಯಾ, ರಾಹುಲ್ ಸೇರಿದಂತೆ ಏಳು ಜನರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತನಿಖೆಗೆ ತಡೆಯಾಜ್ಞೆ ಕೋರಿ 2015ರ ಜನವರಿಯಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳು ಬೇರೆ ಪೀಠಕ್ಕೆ ವರ್ಗಾಯಿಸಿದ್ದರು. ಈ ನಡುವೆ ಹೆರಾಲ್ಡ್ ಕೇಸಿನ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ (ಇಡಿ) 18.09.2015ರಲ್ಲಿ ತನಿಖೆ ಮುಂದುವರಿಸುವುದಾಗಿ ಹೇಳುವ ಮೂಲಕ ಕಾಂಗ್ರೆಸ್ಸಿಗೆ ಶಾಕ್ ನೀಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸದಂತೆ ಸೋನಿಯಾ ಹಾಗೂ ರಾಹುಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ 07.12.2015 ರಂದು ತಿರಸ್ಕರಿಸಿತ್ತು. ಹೆರಾಲ್ಡ್ ಖರೀದಿ ವ್ಯವಹಾರದಲ್ಲಿ ಅನೇಕ ಅಕ್ರಮ ನಡೆದಿರುವ ಬಗ್ಗೆ ಪ್ರಾಥಮಿಕ ಸಾಕ್ಷಿ ಮತ್ತು ದಾಖಲೆಗಳಿಂದ ಸಾಬೀತಾಗುತ್ತಿದೆ, ಡಿಸೆಂಬರ್ 19, 2015ರೊಳಗೆ ಪಟಿಯಾಲ ಕೋರ್ಟಿಗೆ ಖಡ್ಡಾಯ ಹಾಜರಾಗುವಂತೆ ಆದೇಶ ನೀಡುವ ಮೂಲಕ ಈ ಕೇಸ್ ಈಗ ಇಲ್ಲಿಗೆ ಬಂದು ನಿಂತಿದೆ.

ಆದರೆ ಇದೀಗ ಸ್ವಾಮಿ ಅವರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಂಬಿಕಾ ಸಿಂಗ್ ಅವರ ಮುಂದೆ ಹಾಜರಾಗಿ, ತಮ್ಮ ದೂರಿಗೆ ಸಂಬಂಧಿಸಿದಂತೆ ಐಟಿ ಇಲಾಖೆ ಗಾಂಧಿಗಳು, ಯಂಗ್ ಇಂಡಿಯನ್ ಮತ್ತು ಇತರ ನಾಲ್ವರ ವಿರುದ್ಧ ತನಿಖೆ ಆರಂಭಿಸಿದೆ ಎಂದು ನುಡಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿಯ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಆದಾಯ ತೆರಿಗೆ ಇಲಾಖೆ ಈ ದಂಡ ವಿಧಿಸಿದೆ ಎಂದು ಈ ಪ್ರಕರಣದ ದೂರುದಾರರಾದ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ದಾಖಲೆ ಸಮೇತ ತಿಳಿಸಿದ್ದಾರೆ. ಸ್ವಾಮಿ ಅವರು ಸಲ್ಲಿಸಿದ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಪ್ರತ್ಯೇಕವಾಗಿರಿಸಲು ಕೋರ್ಟ್ ಆದೇಶಿಸಿದೆ.

ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಐಟಿ ದಾಖಲೆಗಳು ಅನಧಿಕೃತ ಮತ್ತು ಇಲಾಖೆಯಿಂದ ಅಕ್ರಮವಾಗಿ ಪಡೆಯಲಾಗಿದೆ ಎಂದು ಆರೋಪಿಗಳ ಪರ ವಕೀಲರು ಕೋರ್ಟ್?ನಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ವಾಮಿ, “2017ರ ಡಿ.27 ರಂದು ಬೆಳಗ್ಗೆ ದಿನಪತ್ರಿಕೆಗಳ ಜತೆಗೆ ಈ ದಾಖಲೆಗಳು ಮನೆ ಬಾಗಿಲಿನಲ್ಲಿ ಬಂದು ಬಿದ್ದಿದ್ದವು. ಅದರಲ್ಲಿ ದಂಡ ಹಾಕಿರುವ ವಿವರಗಳಿದ್ದವು. ಅದನ್ನೇ ನೀಡಿದ್ದೇನೆ” ಎಂದು ಸಮಜಾಯಿಷಿ ಕೊಟ್ಟರು. ಇದಕ್ಕೆ ಮತ್ತೆ ತಿರುಗೇಟು ನೀಡಿದ ಆರೋಪಿಗಳ ಪರ ವಕೀಲ “ಅಫಿಡವಿಟ್ ಮೂಲಕ ದಾಖಲೆಗಳ ಮೂಲಗಳ ಬಗ್ಗೆ ತಿಳಿಸಿದರೆ ಮಾತ್ರ ಪರಿಗಣಿಸಬೇಕು” ಎಂದು ವಾದಿಸಿದರು. ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಾರ್ಚ್ 27ಕ್ಕೆ ಮುಂದೂಡಿದೆ.

ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರಿಗೆ ಐಟಿ ಇಲಾಖೆ ಅಧಿಕಾರಿಗಳು 414 ಕೋಟಿ ರುಪಾಯಿ ದಂಡ ವಿಧಿಸಿದ್ದೇ ನಿಜವಾಗಿದ್ದರೆ, ದೇಶದಲ್ಲಿ ಕಾಂಗ್ರೆಸ್ಸಿನ ಈ ಇಬ್ಬರು ನಾಯಕರ ಹೆಸರು ಹಾಳಾಗುವುದರಲ್ಲಿ ಎರಡು ಮಾತಿಲ್ಲ.

– ಅಲೋಖಾ

 

Tags

Related Articles

Close