ಪ್ರಚಲಿತ

ಸ್ಫೋಟಕ ಸುದ್ದಿ!! ಪ್ರಶಸ್ತಿ ನೀಡಿದ ಸಿದ್ದರಾಮಯ್ಯನವರೇ ಆ ದಕ್ಷ ಜಿಲ್ಲಾಧಿಕಾರಿಯನ್ನು ಹೊರದಬ್ಬಿದ ಹಿಂದಿರುವ ರಹಸ್ಯ ಬಯಲು!!

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನವರಿಗೆ ಮಾತ್ರವಲ್ಲ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೂ ಉಸ್ತುವಾರಿ ಸಚಿವ ರಮಾನಾಥ ರೈ ಅವರೇ ಹೈಕಮಾಂಡ್ ಆಗಿದ್ದು, ಜಿಲ್ಲೆಯ ಕಾಂಗ್ರೆಸ್ಸಿಗರು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೂ ಹೈಕಮಾಂಡ್ ಆರ್ಡರ್ ಪಾಸ್ ಆದರೆ ಮಾತ್ರ ಇಲ್ಲಿ ಉಳಿಗಾಲ ಇಲ್ಲದಿದ್ದರೆ ಗೇಟ್ ಪಾಸ್ ಗ್ಯಾರೆಂಟಿ ಎನ್ನುವ ಸುದ್ದಿ ಈಗಾಗಲೇ ಎಲ್ಲೆಡೆ ಹಬ್ಬಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಕೆಲವೇ ಸಮಯಗಳಲ್ಲಿ ಹಾಸನ ಜಿಲ್ಲಾಧಿಕಾರಿ ದಕ್ಷ ಜಿಲ್ಲಾಧಿಕಾರಿಯನ್ನೇ ಎತ್ತಂಗಡಿ ಮಾಡಲಾಗಿರುವ ಸುದ್ದಿ ಇದೀಗ ಬೆಳಕಿಗೆ ಬಂದಿದೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ರಮಾನಾಥ ರೈ ಅವರ ಮಾತೇ ಎಲ್ಲಾ ಅಧಿಕಾರಿಗಳಿಗೂ ಪೈನಲ್ ಆಗಿದ್ದು, ಇದು ತಪ್ಪಿದರೆ ಟಾರ್ಗೆಟ್ ಗ್ಯಾರಂಟಿ ಎನ್ನುವುದಕ್ಕೆ ಜೀವಂತ ಸಾಕ್ಷಿಯಾಗಿದ್ದು ಕೇವಲ ಆರು ತಿಂಗಳಲ್ಲಿ ಇಬ್ಬರು ಎಸ್‍ಪಿಗಳ ವರ್ಗಾವಣೆ!! ಹೌದು… ರೈ ಅವರ ಸ್ವ-ಕ್ಷೇತ್ರ ಬಂಟ್ವಾಳದಲ್ಲಿ ಕಳೆದ ಮೇ ತಿಂಗಳಿನಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಸರಣಿ ಹತ್ಯೆಗಳು ನಡೆದಿದ್ದರ ಜೊತೆಗೆ ಕೋಮುಗಲಭೆಯೂ ನಡೆದು ಹೋಗಿತ್ತು. ಇದಕ್ಕೆಲ್ಲಾ ಉಸ್ತುವಾರಿ ಸಚಿವರು ಪೆÇಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಮೂಗು ತೂರಿಸುತ್ತಿದ್ದರಲ್ಲದೇ ನಿಷ್ಠಾವಂತ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ತನ್ನ ದರ್ಪ ಮೆರೆದಿದ್ದರು.

ಆದರೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಬೆನ್ನಲ್ಲೇ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಕಾಂಗ್ರೆಸ್ ತನ್ನ ನರಿ ಬುದ್ದಿಯನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದ್ದು, ರೋಹಿಣಿ ಅವರ ಜಾಗಕ್ಕೆ ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ನೇಮಿಸಲಾಗಿದೆ. ಆದರೆ ಇದೀಗ ರೋಹಿಣಿ ಸಿಂಧೂರಿ ಅವರ ದಿಢೀರ್ ವರ್ಗಾವಣೆ ವಿರೋಧಿಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದಂತೂ ಅಕ್ಷರಶಃ ನಿಜ.

ಹಾಗಾದರೆ, ಕಾಂಗ್ರೆಸ್ ನಾಯಕರು ನೀಡಿದ ದೂರು ಆದರೂ ಏನು?

ಪ್ರತಿ ಬಾರಿ ಒಂದಲ್ಲಾ ಒಂದು ವಿಚಾರದಲ್ಲಿ ಅಧಿಕಾರಿಗಳನ್ನು ತಮ್ಮ ಹಿಡಿತದಲ್ಲಿ ಹಿಡಿದುಕೊಂಡು ತಮ್ಮ ಬೇಳೆ ಬೇಯಿಸುತ್ತಿದ್ದ ಕಾಂಗ್ರೆಸ್ ನಾಯಕರು, ತಮ್ಮ ಅವಾಲಿಗೆ ಸ್ಪಂದಿಸದ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡು ಕೋಟ್ಯಾಂತರ ರೂಪಾಯಿ ಹಣವನ್ನು ಗುಳುಂ ಮಾಡುವುದೇ ಇವರ ಕಾಯಕ ಎಂದನಿಸುತ್ತೆ!! ಆದರೆ ರೋಹಿಣಿ ಸಿಂಧೂರಿಯವರ ವರ್ಗಾವಣೆಗೆ ಕಾಂಗ್ರೆಸ್ ನಾಯಕರು ನೀಡಿದ ದೂರನ್ನು ಆಲಿಸಿದರೆ ಒಂದು ಕ್ಷಣ ಅಚ್ಚರಿ ಎಂದನಿಸುತ್ತೆ!!

ಹೌದು… ಇತ್ತೀಚೆಗೆಷ್ಟೇ ಸಿಎಂ ಸಿದ್ದರಾಮಯ್ಯ ನವರು ಹಾಸನ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನು ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿತ್ತು. ಆದರೆ ಜನವರಿ 4 ರಂದು ಹಾಸನದ ಮೂರು ಕಡೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸಿಎಂ ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಹಲವು ನಾಯಕರು, ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಜೊತೆಗೆ ಉಸ್ತುವಾರಿ ಸಚಿವರಾದ ಎ. ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಹಲವು ನಾಯಕರು ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.

ಇನ್ನು, ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕರು, ನಾವು ವರ್ಗಾವಣೆಗೆ ಆಗ್ರಹಿಸಿಲ್ಲ. ಬದಲಾಗಿ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅದನ್ನು ಸರಿಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುವುದು ನಿಜ ಎಂದು ಹೇಳಿದ್ದರು. ಆದರೆ, ಡಿಸಿ ಪರ ಬ್ಯಾಟಿಂಗ್ ಮಾಡಿದ್ದ ಜಿಲ್ಲೆಯ ಜೆಡಿಎಸ್ ನಾಯಕರು, ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಹಣ ಗುಳುಂ ಮಾಡಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಯಾರು ಈ ರೋಹಿಣಿ ಸಿಂಧೂರಿ?

ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಇದಲ್ಲದೇ, ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದಲೇ ಪ್ರಶಸ್ತಿಯನ್ನು ಪಡೆದಿದ್ದ ಇವರು ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು.

ಆದರೆ ರೋಹಿಣಿ ಸಿಂಧೂರಿಯವರು ತಾವು ಮಾಡಿದ ಉತ್ತಮ ಕೆಲಸಕ್ಕಾಗಿ ಸಿಎಂ ಅವರಿಂದಲೇ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಇದೀಗ ಅವರಿಂದಲೇ ಎತ್ತಂಗಡಿಯಾಗುತ್ತಿದ್ದಾರೆ ಎಂದರೆ ಏನರ್ಥ!! ನಿಷ್ಠಾವಂತ ಅಧಿಕಾರಿಗಳಿಗೆ ಬೆಲೆ ಇಲ್ಲವೇ ಎನ್ನುವ ಕೂಗು ಮುಗಿಲು ಮುಟ್ಟಿದ್ದು, ಕಾಂಗ್ರೆಸ್ ಸರ್ಕಾರ ನಿಷ್ಠಾವಂತ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡುತ್ತಿದ್ದು ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದಂತೂ ಬೇಸರದ ಸಂಗತಿ.
ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ ಜೆಡಿಎಸ್, ಬಿಜೆಪಿ!!

ದಕ್ಷಿಣ ಕನ್ನಡದ ದಕ್ಷ ಹಾಗೂ ಖಡಕ್ ಪೆÇಲೀಸ್ ವರಿಷ್ಠಾಧಿಕಾರಿ ಸುಧೀರ್ ರೆಡ್ಡಿ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿರುವುದಕ್ಕೆ ಜನರು ಅಸಮಾಧಾನಗೊಂಡಿದ್ದಲ್ಲದೇ, ವೀ ವಾಂಟ್ ಸುಧೀರ್ ರೆಡ್ಡಿ ಟ್ವೀಟ್ ಅಭಿಯಾನ ಆರಂಭಿಸಿದ್ದಾರೆ. ಏತನ್ಮಧ್ಯೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯನ್ನು ವರ್ಗಾಯಿಸಿರುವುದಕ್ಕೆ ಜೆಡಿಎಸ್, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿವೆ.

ಆದರೆ ಇದೀಗ ರೋಹಿಣಿ ಸಿಂಧೂರಿ ಅವರ ದಿಢೀರ್ ವರ್ಗಾವಣೆ ವಿರೋಧಿಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 25ರಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ದಿಢೀರ್ ವರ್ಗಾಯಿಸುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಮಂಗಳವಾರ ಮಧ್ಯಾಹ್ನವೇ ಹಾನಸದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ. ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಸಹ 2, 3 ಬಾರಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಇದೆಯಾ ಈ ಪರಿ ಅಧಿಕಾರಿಗಳನ್ನು ಯಾಕೆ ವರ್ಗಾವಣೆ ಮಾಡುತ್ತೀರಿ? ಇದಕ್ಕೆ ಮಾನದಂಡವೇನು ಎಂದು ತರಾಟೆಗೆ ತೆಗೆದುಕೊಂಡಿದ್ದನ್ನು ಕೂಡ ಇಲ್ಲಿ ಗಮನಿಸಬಹುದಾಗಿದೆ.

ಆದರೆ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಕುತಂತ್ರ ಬುದ್ದಿಯನ್ನು ತೋರ್ಪಡಿಸಿ, ಕಾಂಗ್ರೆಸ್ ನಾಯಕರು ಆಯಾಯ ಜಿಲ್ಲೆಯಲ್ಲಿ ತನಗೆ ಬೇಕಾದ ಅಧಿಕಾರಿಗಳನ್ನು ನಿಯೋಜನೆ ಮಾಡಲು ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿರುವುದು ಮಾತ್ರ ಅಕ್ಷರಶಃ ನಿಜ. ಉತ್ತಮ ಕರ್ತವ್ಯಕ್ಕಾಗಿ ಪ್ರಶಸ್ತಿ ನೀಡಿದ ಕೈಗಳೇ, ತಮ್ಮ ಸ್ವಾರ್ಥಕ್ಕಾಗಿ ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ, ದಕ್ಷ ಅಧಿಕಾರಿಗಳಿಗೆ ಕರ್ನಾಟಕದಲ್ಲಿ ಬೆಲೆ ಇಲ್ಲದಂತೆ ಮಾಡಿದೆ ಎಂದರೆ…..

ಎತ್ತ ಸಾಗುತ್ತಿದೆ ನಮ್ಮ ಸಿದ್ದರಾಮಯ್ಯ ಸರ್ಕಾರ!!
– ಅಲೋಖಾ

 

Tags

Related Articles

Close