ಪ್ರಚಲಿತ

ಬಿಗ್‌ ಬ್ರೇಕಿಂಗ್! ರಾಜ್ಯಕ್ಕೆ ೨೪ನೇ ಸಿಎಂ ಬಿಎಸ್‌ವೈ ಪ್ರಮಾಣ ವಚನ! ಮತ್ತೆ ಶುರುವಾಯಿತು ಬಿಜೆಪಿ ಯುಗ…!

ಸವಾಲು, ಪ್ರತಿಭಟನೆ, ಉಪವಾಸ ಸತ್ಯಾಗ್ರಹದ ಬೆದರಿಕೆ, ಕೊನೆಗೆ ಸುಪ್ರೀಂ ಕೋರ್ಟ್ ನಿಂದ ಕಪಾಳಮೋಕ್ಷ ಮಾಡಿಸಿಕೊಡು ಇದೀಗ ಸಪ್ಪೆಮೊರೆ ಹಾಕಿಕೊಂಡು ಮನೆಗೆ ಹೊರಟಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿ ಕೂಟಕ್ಕೆ ಮುಖಭಂಗ ಸಂಭವಿಸಿದರೆ ಇತ್ತ ಭಾರತೀಯ ಜನತಾ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ರಾಜ್ಯದ ೨೫ನೇ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಿನ್ನೆ ರಾತ್ರಿಯಿಂದ ಭಾರೀ ಕುತೂಹಲ ಕೆರಳಿಸಿದ್ದ ಸರಕಾರ ರಚನೆಯ ಕುರಿತ ಸಂಶಯಗಳು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ನಂತರ ತಿಳಿಯಾಗಿದೆ. ಈ ಮೂಲಕ ರಾಜ್ಯದ ೨೪ನೇ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ ರಾಜಭವನದ ಗಾಜಿನಮನೆಯ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಬಾಯಿ ವಾಲಾರವರು ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಪ್ರಮಾಣ ವಚನ ಸಮಾರಂಭವನ್ನು ನಡೆಸಿದರೂ.

ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರಿಗೆ ರಾಜ್ಯಪಾಲರು ಹೂಗುಚ್ಚ ನೀಡಿ ಗೌರವಿಸಿದರು. ಈ ಎಲ್ಲಾ ಕಾರ್ಯಕ್ರಮಗಳೂ ಸಂವಿಧಾನಬದ್ಧವಾಗಿಯೇ ನಡೆದಿತ್ತು.

ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಹಾಗೂ ಕರ್ನಾಟಕ ಭಾರತೀಯ ಜನತಾ ಪಕ್ಷದ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ , ಮುರುಳೀಧರ್ ರಾವ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅನಂತ್ ಕುಮಾರ್, ಡಿವಿ ಸದಾನಂದ ಗೌಡ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.

Related image

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಭಾರತೀಯ ಜನತಾ ಪಕ್ಷ ಹೊರಹೊಮ್ಮಿದರೂ ಅಧಿಕಾರದ ಗದ್ದುಗೆಯೇರಲು ಸಂಖ್ಯಾಬಲದ ಕೊರತೆ ಇತ್ತು. ಆದ್ದರಿಂದ ಈ ಪಕ್ಷ ವನ್ನು ಅಧಿಕಾರ ದಿಂದ ದೂರ ಇಡಬೇಕು ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ ಹಾಗೂ ಜನತಾ ದಳ ಮೈತ್ರಿ ಘೋಷಣೆ ಮಾಡಿತ್ತು. ಆದರೆ ಈ ಮಧ್ಯೆಯೇ ಸಂಖ್ಯೆಯ ಕೊರತರೆಯನ್ನು ಸರಿದೂಗಿಸುತ್ತೇವೆ ಎಂಬ ಛಲವನ್ನು ಹಿಡಿದ ಭಾರತೀಯ ಜನತಾ ಪಕ್ಷ ಪದಗ್ರಹಣ ಮಾಡಿಯೇ ಬಿಟ್ಠಿದೆ.

ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಕಾಂಗ್ರೆಸ್ ಹಾಗೂ ಜನತಾ ದಳ ನಿನ್ನೆ ರಾತ್ರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇದೀಗ ಎಲ್ಲವೂ ಸುಸೂತ್ರವಾಗಿ ನಡೆದಿದ್ದು ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ನವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಹೊಸ ಶಕೆ ಆರಂಭವಾಗಿದ್ದು ಹೊಸ ಘೋಷಣೆ ಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

-ಸುನಿಲ್ ಪಣಪಿಲ

Tags

Related Articles

Close