ಪ್ರಚಲಿತ

ಬ್ರೇಕಿಂಗ್! ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಫ್ತಿ. 3 ವರ್ಷಗಳ ಮೈತ್ರಿ ಸರ್ಕಾರ ಖತಂ…

ಜಮ್ಮು ಕಾಶ್ಮೀರದಲ್ಲಿ ರಾಜಕೀಯ ಬಿಕ್ಕಟ್ಟು ಆರಂಭವಾದ ಹಿನ್ನೆಲೆಯಲ್ಲಿ ಪಿಡಿಪಿ ಪಕ್ಷದ ನಾಯಕಿ ಹಾಗೂ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕ ರಾಜೀನಾಮೆ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ನಡೆಸುತ್ತಿದ್ದ ಪಿಡಿಪಿ ಹಾಗೂ ಬಿಜೆಪಿ ಸರ್ಕಾರದಿಂದ ಬಿಜೆಪಿ ಹೊರಬಂದ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಮುಫ್ತಿ ರಾಜೀನಾಮೆ ನೀಡಿದ್ದಾರೆ. 

ಮೈತ್ರಿ ಸರ್ಕಾರದಲ್ಲಿ ಪಿಡಿಪಿ ನಾಯಕಿ ಮೆಹಬೂಬ ಮುಪ್ತಿ ಮುಖ್ಯಮಂತ್ರಿಯಾಗಿಯೂ, ಭಾರತೀಯ ಜನತಾ ಪಕ್ಷದ ನಾಯಕ ಉಪಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿ ಆಡಳಿತ ನಡೆಸುತ್ತಿದ್ದರು. ಆದರೆ ಈ ಸರ್ಕಾರ ಅದ್ಯಾಕೋ ಕೇಂದ್ರ ಸರ್ಕಾರದ ಭಯೋತ್ಪಾದನಾ ನಿಗ್ರಹ ಕ್ರಮಕ್ಕೆ ಹೊಂದುತ್ತಿರಲಿಲ್ಲ. ಪಿಡಿಪಿ ಪಕ್ಷ ಉಗ್ರ ನಿಗ್ರಹಕ್ಕೆ ಸಹಕಾರ ನೀಡುತ್ತಿಲ್ಲ ಅನ್ನೋದು ಭಾರತೀಯ ಜನತಾ ಪಕ್ಷದ ನಾಯಕರ ಆರೋಪ. ಈ ಹಿನ್ನೆಲೆಯಲ್ಲಿ ಇಂದು ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಹೊರಬಂದಿದೆ.

ಈ ಮಧ್ಯೆ ಕಾಂಗ್ರೆಸ್ ನಾಯಕರು ಕೂಡಾ ಸರ್ಕಾರ ರಚಿಸಲು ಆಸಕ್ತಿ ತೋರದೇ ಇರುವುದು ಸರ್ಕಾರದ ಪತನಕ್ಕೆ ಕಾರಣವಾಗಿದೆ. ಪಿಡಿಪಿಯೊಂದಿಗೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಸಹಿತ ಉಳಿದೆಲ್ಲಾ ಪಕ್ಷೇತರ ಸದಸ್ಯರು ಬೆಂಬಲ ನೀಡಿದ್ದಲ್ಲಿ ಸರ್ಕಾರ ಮುಂದುವರೆಸುವ ಅವಕಾಶ ಇದ್ದವು. ಆದರೆ ಕಾಂಗ್ರೆಸ್ ಸಹಿತ ಯಾವ ಪಕ್ಷವೂ ಇಂತಹಾ ಭಂಡ ಧೈರ್ಯಕ್ಕೆ ಮುಂದಾಗದಿರುವುದು ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬ ಮುಫ್ತಿ ರಾಜೀನಾಮೆಯನ್ನು ನೀಡಿದ್ದಾರೆ.

ಜಮ್ಮು ಕಾಶ್ಮೀರದ ರಾಜ್ಯಪಾಲರಾದ ಎನ್.ಎನ್.ವೋಹ್ರಾಗೆ ರಾಜೀನಾಮೆ ನೀಡಿದ ಮುಖ್ಯಮಂತ್ರಿ ಮುಫ್ತಿ ಸಂಜೆ 4 ಗಂಟೆಗೆ ತುರ್ತು ಪತ್ರಿಕಾ ಗೋಷ್ಟಿಯನ್ನು ಕರೆದಿದ್ದಾರೆ. ಈ ಮೂಲಕ ಕಳೆದ 3 ವರ್ಷಗಳಿಂದ ನಡೆಯುತ್ತಿದ್ದ ಮೈತ್ರಿ ಸರ್ಕಾರಕ್ಕೆ ಅಂತ್ಯ ಹಾಡಿದ್ದಾರೆ. ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರೋದು ಖಚಿತವಾಗಿದೆ.

-ಏಕಲವ್ಯ

Tags

Related Articles

Close