ದೇಶರಾಜ್ಯ

ರಾಜ್ಯ ಬಿಜೆಪಿ ಸರಕಾರದಿಂದ ರಾಜ್ಯದ ಸಾಮಾನ್ಯ ವರ್ಗಕ್ಕೆ ಬಿಗ್ ಗಿಫ್ಟ್!

ಕರ್ನಾಟಕ‌ದ ಜನತೆಗೆ ಮತ್ತೊಂದು ಕೊಡುಗೆಯನ್ನು ರಾಜ್ಯ ಬಿಜೆಪಿ ಸರ್ಕಾರ ಒದಗಿಸಿಕೊಟ್ಟಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಏಕಕಾಲಕ್ಕೆ ರಾಜ್ಯಾದ್ಯಂತ 114 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್ ರೂಪದಲ್ಲಿ ಚಾಲನೆ ನೀಡಿದ್ದಾರೆ.

ಹುಬ್ಬಳ್ಳಿ‌ಯ ಭೈರಿದೇವರ ಕೊಪ್ಪದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಿದ್ದಾರೆ. ನಗರ ಪ್ರದೇಶದ ಬಡವರು, ದುರ್ಬಲರನ್ನು ಗಮನದಲ್ಲಿಟ್ಟುಕೊಂಡು ಜನತೆಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕ್ಲಿನಿಕ್‌ಗಳಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ.

ನಮ್ಮ ಕ್ಲಿನಿಕ್‌ಗಳು 1000 ಚದರ ಅಡಿ ವಿಸ್ತೀರ್ಣ ಹೊಂದಿವೆ. ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗ ಶಾಲೆ, ಯೋಗ ಮಾಡುವ ಕೊಠಡಿ, ಔಷಧ ದಾಸ್ತಾನು ಕೋಣೆ, ಔಷಧ ವಿತರಣಾ ಕೊಠಡಿ, ಆಡಳಿತ ಕಚೇರಿ, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹೊಂದಿದೆ. ನಮ್ಮ ಕ್ಲಿನಿಕ್‌ಗಳು ಒಬ್ಬರು ವೈದ್ಯರು, ಒಬ್ಬರು ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಕಿರಿಯ ದರ್ಜೆ ಸಹಾಯಕರು, ಒಬ್ಬರು ಡಿ ದರ್ಜೆ ನೌಕರರನ್ನು ಒಳಗೊಂಡಿದೆ. ಈ ಕ್ಲಿನಿಕ್‌ನಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4.30 ರ ವರೆಗೆ, ಸೋಮವಾರ‌ದಿಂದ ಶನಿವಾರ‌ದ ವರೆಗೆ ಸೇವೆ ಲಭ್ಯವಿದೆ.

Tags

Related Articles

Close