ಪ್ರಚಲಿತ

ಮುಸ್ಲಿಂ ಮೀಸಲಾತಿಗೆ ಕೊಕ್? : ಅಮಿತ್ ಶಾ ಏನಂದ್ರು ಗೊತ್ತಾ

ಭಾರತೀಯ ಜನತಾ ಪಕ್ಷದ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ದೇಶಕ್ಕಾಗಿ, ಧರ್ಮಕ್ಕಾಗಿ ಹಲವಾರು ನಿರ್ಣಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಗೃಹ ಸಚಿವರಾಗಿ ತೆಗೆದುಕೊಂಡಿದ್ದಾರೆ. ಯಾರನ್ನಾದರೂ ಎದುರು ಹಾಕಿ ಕೊಳ್ಳಬಹುದು, ಆದರೆ ಅಮಿತ್ ಶಾ ಅವರನ್ನು ಎದುರು ಹಾಕಿಕೊಂಡಲ್ಲಿ ಪರಿಣಾಮ ಅಷ್ಟೇ ತೀಕ್ಷ್ಣವಾಗಿ ಇರುತ್ತದೆ ಎನ್ನುವುದು ವಿರೋಧಿ ಗಳಿಗೆ ಸರಿಯಾಗಿ ಗೊತ್ತು.

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಟಿಆರ್‌ಎಸ್ ಪಕ್ಷಗಳಿಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ತಿರುಗೇಟು ನೀಡಿದ್ದಾರೆ.

ಭಾರತೀಯ ಜನತಾ ಪಕ್ಷವು ತೆಲಂಗಾಣದಲ್ಲಿ ಮುಸಲ್ಮಾನರ ಮೀಸಲಾತಿಯನ್ನು ಅಂತ್ಯಗೊಳಿಸಲಿದ್ದು, ಆ ಮೂಲಕ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸಹಾಯವಾಗುವಂತೆ ಯೋಜನೆಗಳನ್ನು ರೂಪಿಸುವ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಮತ್ತು ಟಿಆರ್‌ಎಸ್ ಸರ್ಕಾರ ಜಾರಿಗೆ ತಂದ ಮುಸ್ಲಿಂ ಮೀಸಲಾತಿ ಅಂತ್ಯಗೊಳಿಸಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ಅವರು ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷ ತೆಲಂಗಾಣವನ್ನು ಎಟಿಎಂ ಮಾಡಿಕೊಂಡಿದೆ. ಆದರೆ ಬಿಜೆಪಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮುಗಿಸುವತ್ತ ಗಮನ ಹರಿಸಿದೆ. ಪ್ರಧಾನಿ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಮಾಡುವ ಕಾರ್ಯ ಮಾಡಿದ್ದಾರೆ. ಜಮ್ಮು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಅಲ್ಲಿಗೆ ಸ್ವಾತಂತ್ರ್ಯ ಕಲ್ಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.

ಟಿ ಆರ್ ಎಸ್ ಮತ್ತು ಕಾಂಗ್ರೆಸ್ ಎರಡೂ ಜೊತೆಗೆಯೇ ಇವೆ. ತೆಲಂಗಾಣವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಪ್ರಧಾನಿ ಮೋದಿ ಕೆಲಸ ಮಾಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ತೆಲಂಗಾಣದ ಜನತೆ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

Tags

Related Articles

Close