ಪ್ರಚಲಿತ

ಸಿಎಎ ಜಾರಿ ಬಗ್ಗೆ ಅಮಿತ್ ಶಾ ಏನಂದ್ರು ಗೊತ್ತಾ?

ಬಿಜೆಪಿ 370 ಮತ್ತು ಎನ್‌ಡಿಎ ಒಕ್ಕೂಟ 400 ಕ್ಕೂ ಹೆಚ್ಚು ಸ್ಥಾನಗಳನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಯಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೇಂದ್ರದಲ್ಲಿ ಮೂರನೇ ಬಾರಿಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಹಾಗೆ ಯಾವುದೇ ರಹಸ್ಯಗಳು ಇಲ್ಲ ಎಂದು ಅವರು ಹೇಳಿದ್ದಾರೆ.

ಮುಂದಿನ ಬಾರಿಯೂ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರತಿ ಪಕ್ಷಗಳ ಸಾಲಿನಲ್ಲಿಯೇ ಕೂರಬೇಕಾಗುತ್ತದೆ. ಇದನ್ನು ವಿರೋಧ ಪಕ್ಷಗಳು ಸಹ ಈಗಾಗಲೇ ಮನದಟ್ಟು ಮಾಡಿಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು. ಸಿಎಎ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಬದಲಾಗಿ ಪೌರತ್ವವನ್ನು ಒದಗಿಸುತ್ತದೆ. ಕಿರುಕುಳಕ್ಕೆ ತುತ್ತಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಗುರಿಯನ್ನು ಸರ್ಕಾರ ಹೊಂದಿರುವುದಾಗಿಯೂ ಅವರು ಹೇಳಿದ್ದಾರೆ.

ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಜಮ್ಮು ಕಾಶ್ಮೀರಕ್ಕೆ ನ್ಯಾಯ ಒದಗಿಸಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 370ಕ್ಕೂ ಹೆಚ್ಚು ಸ್ಥಾನ ಬಿಜೆಪಿ‌ಗೆ ಮತ್ತು 400 ಕ್ಕೂ ಅಧಿಕ ಸ್ಥಾನಗಳನ್ನು ಎನ್‌ಡಿಎಗೆ ನೀಡಿ ಜನರು ನಮ್ಮನ್ನು ಹರಸಲಿದ್ದಾರೆ ಎಂದು ಅವರು ನುಡಿದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವಿನ ಚುನಾವಣೆಯಲ್ಲ. ಬದಲಾಗಿ ಅಭಿವೃದ್ಧಿ ಮತ್ತು ಕೇವಲ ಭರವಸೆಗಳನ್ನು ಮಾತ್ರ ಜನರಿಗೆ ನೀಡುವವರ ನಡುವಿನ ಚುನಾವಣೆ ಎಂದು ಅವರು ಹೇಳಿದ್ದಾರೆ.

Tags

Related Articles

Close