ಪ್ರಚಲಿತ

ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡುವ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ಈ ದೇಶ ಹಿಂದೂ ಧರ್ಮದ ತಿರುಳುಳ್ಳ ದೇಶವಾಗಿದ್ದರೂ, ಬಿಜೆಪಿಗಿಂತ ಹೊರತಾಗಿ ಮತ್ಯಾವ ಪಕ್ಷ ಸಹ ಇಲ್ಲಿನ ಬಹುಸಂಖ್ಯಾತರ ಹಿತ ಕಾಪಾಡುವ ನಿಟ್ಟಿನಲ್ಲಿ ಚಿಂತನೆ ಹೊಂದಿಲ್ಲ. ಈ ದೇಶದ ಬಹುಸಂಖ್ಯಾತರ ಹಕ್ಕುಗಳನ್ನು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ನೀಡಿ, ಓಟು ಪಡೆಯುವ ಹುನ್ನಾರವನ್ನು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಇಂಡಿ ಒಕ್ಕೂಟದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.

2010 ರ ನಂತರ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಒ. ಎಸ್. ಸಿ. ಪ್ರಮಾಣಪತ್ರಗಳನ್ನು ರದ್ದು ಮಾಡಿ ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ತೀರ್ಪನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವಾಗತಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ ಬ್ಯಾಂಕ್ ರಾಜಕಾರಣ ನಡೆಸುವ ದುರುದ್ದೇಶದಿಂದ ಈ ಮೀಸಲಾತಿ ನೀಡಿದ್ದರು‌. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ದೋಚಿ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಈ ಮತಗಳನ್ನು ಮುಸ್ಲಿಂಮರಿಗೆ ನೀಡಲು ಬಯಸುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಧರ್ಮಾಧಾರಿತ ಮೀಸಲಾತಿಗೆ ಸಂಬಂಧಿಸಿದ ಹಾಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂತಹ ಮತ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಯಾವುದೇ ಸಮೀಕ್ಷೆ ನಡೆಸದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು 118 ಮುಸ್ಲಿಂ ಕುಟುಂಬಗಳಿಗೆ ಒಬಿಸಿ ಮೀಸಲಾತಿ ನೀಡಿದರು. ಈ ಅನ್ಯಾಯದ ಬಗ್ಗೆ ಯಾರೋ ನ್ಯಾಯಾಲಯಕ್ಕೆ ಹೋದರು. ಪರಿಣಾಮ ನ್ಯಾಯಾಲಯ ಉತ್ತಮವಾದ ತೀರ್ಪನ್ನು ನೀಡಿದೆ. 2010 ರಿಂದ 2024 ರ ನಡುವೆ ವಿತರಿಸಲಾದ ಎಲ್ಲಾ ಪ್ರಮಾಣಪತ್ರಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಮಮತಾ ಬ್ಯಾನರ್ಜಿ ಅವರು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ದೋಚಲು ಪ್ರಯತ್ನ ಮಾಡಿದರು. ಇದರ ವಿರುದ್ಧ ಹೈಕೋರ್ಟ್ ನೀಡಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಎಂದು ನುಡಿದಿದ್ದಾರೆ.

ಈ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟದ ಪ್ರಣಾಳಿಕೆಯಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡುವ ಬಗ್ಗೆ ಭರವಸೆಗಳನ್ನು ನೀಡಲಾಗಿತ್ತು. ಒಂದು ವೇಳೆ ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದ ಪಕ್ಷದಲ್ಲಿ ಎಸ್.ಸಿ., ಎಸ್.ಟಿ., ಹಿಂದುಳಿದ ವರ್ಗಗಳಿಂದ ಮೀಸಲಾತಿ ಕಿತ್ತು, ಅದನ್ನು ಅಲ್ಪಸಂಖ್ಯಾತರ ಹೆಸರಲ್ಲಿ ಮುಸಲ್ಮಾನರಿಗೆ ನೀಡುವ ವ್ಯವಸ್ಥಿತ ಹುನ್ನಾರ ನಡೆಸಿತ್ತು.

ಇಂಡಿ ಒಕ್ಕೂಟದ ಈ‌ ದುರಾಲೋಚನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಇತರ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇಂಡಿ ಒಕ್ಕೂಟದ ಯೋಜನೆಯ ಬಗ್ಗೆ ಸಾರ್ವಜನಿಕರ ಗಮನಕ್ಕೂ ತಂದಿದ್ದರು. ಇಂಡಿ ಒಕ್ಕೂಟದ ಈ ನಿಲುವು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ, ಆಕ್ರೋಶಕ್ಕೂ ಗುರಿಯಾಗಿತ್ತು ಎನ್ನುವುದು ಸತ್ಯ.

Tags

Related Articles

Close