ಪ್ರಚಲಿತ

ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ: ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಸಾಧನೆಗೈದ ಕರುನಾಡು!

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರ ಪ್ರದರ್ಶನಕ್ಕೂ ಅವಕಾಶ ದೊರೆತಿದೆ. ಆ ಮೂಲಕ ಗಣರಾಜ್ಯ ದಿನದ ಪೆರೇಡ್ ನಲ್ಲಿ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿದೆ.

28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ 17 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ‌ ಮಾತ್ರವೇ ಪ್ರತೀ ವರ್ಷ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಕಳೆದ ಕೆಲ ದಿನಗಳ ಹಿಂದೆ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವಕಾಶ ಇಲ್ಲ ಎಂಬ ಗಾಳಿ ಸುದ್ದಿ ಹಬ್ಬಿತ್ತು. ಈ ಕಾರಣ ವನ್ನು ರಿ ಸಿ ಕೊಂಡು ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು, ಕೆಲವು ಮೋದಿ ವಿರೋಧಿ ಲದ್ದಿಜೀವಿಗಳು ಬೊಬ್ಬೆ ಹೊಡೆದು, ತಮ್ಮ ಬೇಳೆ ಬೇಯಿಸಿಕೊಳ್ಳುವ, ಆ ಮೂಲಕ ಅನ್ನ ಹುಟ್ಟಿಸಿಕೊಳ್ಳುವ ಕೆಲಸಕ್ಕೂ ತಿಳಿದಿದ್ದರು.

ಆದರೆ ಈ ವಿರೋಧಿಗಳ ಸಂತೋಷ ಹೆಚ್ಚು ಕಾಲ ಉಳಿಯಲಿಲ್ಲ. ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಗಣರಾಜ್ಯ ದಿನಾಚರಣೆಯಲ್ಲಿ ಅವಕಾಶ ನೀಡದ ಮೋದಿ ಸರ್ಕಾರ ಎಂದು ಬೊಗಳುತ್ತಿದ್ದ ಹರಕು ಬಾಯಿ ಗಂಜಿ ಗಿರಾಕಿಗಳ ಬಾಯಿಗೆ ಬೀಗ ಬೀಳುವಂತೆ, ಈ ಬಾರಿಯೂ ರಾಜ್ಯದ ಮಹಿಳಾ ಕೇಂದ್ರಿತ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ ಎನ್ನುವ ಸಂಗತಿ ಹೊರಬಿತ್ತು. ಇದು ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ ವಿರೋಧ ಪಕ್ಷಗಳು ಮತ್ತು ವಿರೋಧಿ ಗಂಜಿ ಗಿರಾಕಿಗಳ ಮುಖಕ್ಕೆ ಮಂಗಳಾರತಿ ಎತ್ತಿದಂತಾಯಿತು. ವಿರೋಧಿಗಳ ಇಂತಹ ಅಪಪ್ರಚಾರದ ವಿರುದ್ಧ ಸಾರ್ವಜನಿಕರು ರೊಚ್ಚಿಗೆದ್ದು, ಉಗಿದು ಉಪ್ಪಿನಕಾಯಿ ಹಾಕುವ ಸ್ಥಿತಿಯನ್ನು ಮೋದಿ, ಬಿಜೆಪಿ ವಿರೋಧಿಗಳೇ ತಂದುಕೊಂಡರು.

ಅದೇನೇ ಇರಲಿ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸತತವಾಗಿ ಕಳೆದ ೮ ವರ್ಷಗಳ ಕಾಲವೂ ಕರ್ನಾಟಕದ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಹಾಗೆಯೇ ಈ ಬಾರಿಯೂ ರಾಜ್ಯದ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಲಾಗಿದ್ದು, ಆ ಮೂಲಕ ಸತತ ೯ ನೇ ಬಾರಿಗೆ ಎಂಬಂತೆ ಕರ್ನಾಟಕದ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶವನ್ನು ಮೋದಿ ಸರ್ಕಾರ ಮಾಡಿಕೊಟ್ಟಿದೆ.

ಆದರೆ ಪ್ರಧಾನಿ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿಯುವುದಕ್ಕೂ ಮೊದಲು ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ೧೦ ವರ್ಷಗಳ ಅಧಿಕಾರಾವಧಿಯಲ್ಲಿ ಕೇವಲ ೫ ಬಾರಿ ಮಾತ್ರವೇ ರಾಜ್ಯದ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಿತ್ತು. ಆದರೆ ಮೋದಿ ಆಡಳಿತದ ಸತತ ೯ ವರ್ಷಗಳ ಕಾಲವೂ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅವಕಾಶ ನೀಡಲಾಗಿದ್ದು, ಆ ಮೂಲಕ ರಾಜ್ಯವನ್ನು ಇಡೀ ದೇಶಕ್ಕೆ ಪರಿಚಯಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದೆ.

ತಮ್ಮ ಆಡಳಿತದಲ್ಲಿ ರಾಜ್ಯವನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್ ಪಕ್ಷ, ಕರ್ನಾಟಕಕ್ಕೆ ಸಾಕಷ್ಟು ಅವಕಾಶಗಳನ್ನು ನೀಡುತ್ತಿರುವ ಪ್ರಧಾನಿ ಮೋದಿ ಅವರ ಬಗ್ಗೆ ವಿರೋಧ ವ್ಯಕ್ತಪಡಿಸಿ, ಸಾರ್ವಜನಿಕ ವಲಯದಲ್ಲಿ ನಗೆಪಾಟಿಲಿಗೀಡಾಗುತ್ತಿರುವುದು ಹಾಸ್ಯಾಸ್ಪದ.

ಕಾಂಗ್ರೆಸ್ ಸ್ವಾತಂತ್ರ್ಯ ನಂತರದಲ್ಲಿ ಕಳೆದ ಹಲವು ದಶಕಗಳಿಂದ ಆಡಳಿತದಲ್ಲಿದ್ದರೂ ಭಾರತದ ಅಭಿವೃದ್ಧಿಗಾಗಿ ಮಾಡಲಾಗದ ಕಾರ್ಯಗಳನ್ನು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ೮ ವರ್ಷಗಳಲ್ಲಿ ಮಾಡಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಎಲ್ಲಿ ನೆಲಕ್ಕಚ್ಚುವುದೋ ಎನ್ನುವ ಹತಾಶೆಯಿಂದ ಬೇಕಾಬಿಟ್ಟಿ ವರ್ತಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ.

Tags

Related Articles

Close