ಪ್ರಚಲಿತ

ಲೋಕಸಭಾ ಚುನಾವಣೆಯಲ್ಲಿ 28 ಸೀಟುಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕಿದೆ: ಬಿ ಎಸ್ ವೈ

ಈ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ನಡೆಯುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅತ್ಯಂತ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ಬಾರಿಯೂ ಮತ್ತೆ ಬಿಜೆಪಿ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ್ಯತೆಗಳೂ ಇವೆ. ಏಕಾಂಗಿಯಾಗಿ ಭಾರತೀಯ ಜನತಾ ಪಕ್ಷವನ್ನು ಎದುರಿಸಲಾಗದ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಬಿಜೆಪಿಯನ್ನು ಸೋಲಿಸಲು ಇಂಡಿಯಾ ಎಂಬ ಮಹಾಘಟಬಂಧನವನ್ನು ರಚನೆ ಮಾಡಿದ್ದು ಎಲ್ಲರೂ ಬಲ್ಲರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆ ರಾಜ್ಯದಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ ಎನ್ನುವುದು ನಮ್ಮೆಲ್ಲರಿಗೂ ಬಹು ದೊಡ್ಡ ತಿರುವಿನ ಸಚಿವ ಪರೀಕ್ಷೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 28 ರಲ್ಲಿ 26 ಸೀಟುಗಳನ್ನು ಗೆದ್ದು ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಿತ್ತು. ಈ ಬಾರಿ 28 ಕ್ಷೇತ್ರಗಳನ್ನು ಸಹ ಗೆದ್ದು ಪ್ರಧಾನಿ ಮೋದಿ ಅವರನ್ನು ಮತ್ತಷ್ಟು ಬಲ ಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಜನರ ಹಾದಿ ತಪ್ಪಿಸಿ ಅಧಿಕಾರ ವಹಿಸಿಕೊಂಡ ಕಾಂಗ್ರೆಸ್ ಈಗ ಕಲಹದಲ್ಲಿ ತೊಡಗಿದೆ. ಕಾಂಗ್ರೆಸ್ ಕಚ್ಚಾಟದಿಂದ ರಾಜ್ಯದಲ್ಲಿ ಅಧಿಕಾರ ಕುಸಿದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಭಿವೃದ್ಧಿ ಎನ್ನುವುದು ಕನಸಾಗಿದೆ. ವಾಮ ಮಾರ್ಗದಲ್ಲಿ ಮತ ಪಡೆದ ಕಾಂಗ್ರೆಸ್ನ ನಿಜ ಬಣ್ಣವನ್ನು ಜನರಿಗೆ ಮನವರಿಕೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬರಗಾಲದಲ್ಲಿ ರೈತರ ಕಣ್ಣೀರು ಒರೆಸದ, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲಾದ, ಅರಾಜಕ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ದುರಾಡಳಿತವನ್ನು ನೋಡುತ್ತಾ ಸುಮ್ಮನಿರಲು ಸಾಧ್ಯವಿಲ್ಲ. ಜನರ ಪರವಾಗಿ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

Tags

Related Articles

Close