ಪ್ರಚಲಿತ

ಪ್ರಧಾನಿ ಮೋದಿ ಅವರ ಮುಂದಾಲೋಚನೆಯೇ ಕ್ರೀಡಾ ಕ್ಷೇತ್ರದಲ್ಲಿ ಭಾರತ ಸಾಧನೆ ಮೆರೆಯುವಂತೆ ಮಾಡಿದೆ: ಅನುರಾಗ್ ಸಿಂಗ್ ಠಾಕೂರ್

2047 ರೊಳಗಾಗಿ ಭಾರತ‌ ದೇಶವನ್ನು ಕ್ರೀಡಾ ಸೂಪರ್ ಪವರ್ ಮಾಡಲು ಭಾರತೀಯರು ಕೇಂದ್ರ ಸರ್ಕಾರದ ಜೊತೆಗೆ ಕೈ ಜೋಡಿಸುವಂತೆ ಕೇಂದ್ರದ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಅವರು ದೇಶದಲ್ಲಿ ಖೇಲೋ‌ ಇಂಡಿಯಾದ ಯಶಸ್ಸಿಗೆ ಒತ್ತು ನೀಡಲಾಗಿದೆ. ಇದರಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಚಾಂಪಿಯನ್‌ಗಳು ಹೊರಹೊಮ್ಮಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದಾಲೋಚನೆ ಮತ್ತು ದೂರದೃಷ್ಟಿತ್ವದ ಕಾರಣದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ವಿಶೇಷವಾಗಿ ಕ್ರೀಡಾಪಟುಗಳಿಗೆ ಕರೆ ನೀಡಿದ್ದು, ಮಾಜಿ ಕ್ರೀಡಾಪಟುಗಳು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೆಯೇ ನಮ್ಮ ದೇಶದ ದೂರ ದೂರದ ಪ್ರದೇಶಗಳ ಜನರು ಕ್ರೀಡಾ ಕ್ಷೇತ್ರದಲ್ಲಿ ಮುಂದೆ ಬರಲು ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದ್ದಾರೆ. ದೇಶದ ಯುವಕರಿಗೆ ಈ ವೇದಿಕೆಯನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳುವುದಕ್ಕೆ ಪ್ರೋತ್ಸಾಹ ನೀಡುವಂತೆಯೂ ಅವರು ಜನರಲ್ಲಿ ಮನವಿ ಮಾಡಿದರು.

ಜೊತೆಗೆ ಭಾರತದಲ್ಲಿ ಹಲವಾರು ಜನರು ಕ್ರೀಡೆಯಲ್ಲಿ ವಿಶೇಷವಾದ ಕೌಶಲ್ಯವನ್ನು ಹೊಂದಿದ್ದಾರೆ. ಅವರ ಅಂತಹ ಕೌಶಲಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರತಿಭಾ ಪ್ರದರ್ಶನ ಮಾಡಲು ಮತ್ತು ಜಾಗತಿಕ ಗುಣಮಟ್ಟಕ್ಕೆ ಹೊಂದಿಕೊಳ್ಳುವ ಹಾಗೆ ಅನುಕೂಲಕರವಾದ ವೇದಿಕೆಯನ್ನು ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಒದಗಿಸಿದೆ ಎಂದು ಅವರು ಹೇಳಿದರು.

ಭಾರತದ ಕ್ರೀಡಾ ಸಾಧನೆಯ ಬಗೆಗೂ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕ್ರೀಡಾಳುಗಳು ವಿವಿಧ ಕ್ರೀಡೆಗಳಲ್ಲಿ ಅತ್ಯಂತ ಹೆಚ್ಚಿನ ಪದಕಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ಸು ಕಂಡಿದ್ದಾರೆ. ದೇಶದ ಕೀರ್ತಿಯನ್ನು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕ್ರೀಡಾ ಬಜೆಟ್ ಹಂಚಿಕೆಯನ್ನು ಮೂರು ಪಟ್ಟು ಹೆಚ್ಚಿಸಿರುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡಾ ವಲಯಕ್ಕೂ ಸಾಕಷ್ಟು ಬೆಂಬಲ ನೀಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ಮಿಂಚುವಂತೆ ಮಾಡಿದೆ ಎನ್ನುವುದು ಸತ್ಯ. ಕ್ರೀಡೆಯಲ್ಲಿ ಪ್ರತಿಭಾವಂತರನ್ನು ಗುರುತಿಸಿ, ಅವರಿಗೆ ಅಗತ್ಯ ತರಬೇತಿ ನೀಡಿ, ಅವರಿಗೆ ಪ್ರೋತ್ಸಾಹಿಸುವ, ಅವರ ಗೆಲುವಿಗೆ ಶಕ್ತಿ ತುಂಬುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ಹೆಮ್ಮೆಯೇ ಸರಿ.

Tags

Related Articles

Close