ಪ್ರಚಲಿತ

ಮತ್ತೆ ಮೋದಿ ಮಾಡಿದ ಮೋಡಿ!! ರೈತಾಪಿ ವಲಯಕ್ಕೆ ಭರ್ಜರಿ ಉಡುಗೊರೆ ಘೋಷಿಸಿದ ಮೋದಿ!!

ರೈತರ ಕೂಗಿಗೆ ಕೇಂದ್ರ ಸರಕಾರವು ಯಾವುದೇ ರೀತಿಯ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರಕುತ್ತಿಲ್ಲ ಎಂದು ಬೊಬ್ಬಿರಿಯುತ್ತಿರುವ ವಿಪಕ್ಷಗಳ ಟೀಕೆಗಳಿಗೆ ಇದೀಗ ನರೇಂದ್ರ ಮೋದಿಯವರು ಪೂರ್ಣ ವಿರಾಮವನ್ನು ಇಟ್ಟಿದ್ದಾರಲ್ಲದೇ, ರೈತರ ಕೂಗಿಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತಾಪಿ ವಲಯಕ್ಕೆ ಭರ್ಜರಿ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.

ಹೌದು… ಈಗಾಗಲೇ ದೇಶದಲ್ಲಿ ರೈತರ ಸಂಖ್ಯೆಗಳು ದಿನೇ ದಿನೇ ಕಡಿಮೆಯಾಗುತ್ತಿದೆಯಲ್ಲದೇ, ಮಾರುಕಟ್ಟೆಯಲ್ಲಿ ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಲಾಗಿ ಹೋಗಿದ್ದ ರೈತರ ಪಾಲಿಗೆ ನರೇಂದ್ರ ಮೋದಿ ಸರಕಾರದಿಂದ ಇದೀಗ ಹೊಸ ಆಶಾಕಿರಣವೊಂದು ಮತ್ತೆ ಮೂಡಿ ಬಂದಾಗಿದೆ. ಭತ್ತ ಸೇರಿದಂತೆ ಮುಂಗಾರು ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಇನ್ನೆರಡು ವಾರಗಳಲ್ಲಿ ಕಬ್ಬು ಬೆಳೆಗೆ ನ್ಯಾಯೋಚಿತ ಮತ್ತು ಸಂಭಾವನೆ ಬೆಲೆ (ಎಫ್‍ಆರ್‍ಪಿ)ಯನ್ನು ಘೋಷಿಸುವ ಮೂಲಕ ಇದೀಗ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರಿಗೆ ಭರವಸೆ ನೀಡಿದ್ದಾರೆ.

ಶುಕ್ರವಾರ ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ಪಂಜಾಬ್ ಸೇರಿದಂತೆ ಪ್ರಮುಖ ಕಬ್ಬು ಬೆಳೆಯುವ ರಾಜ್ಯಗಳ 140 ಪ್ರತಿನಿಧಿಗಳಿಗೆ ಅವರು ಈ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ನೀಡಿರುವ ಈ ಭರವಸೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇರುವ ಕೋಟ್ಯಂತರ ರೈತರಿಗೆ, ತಾವು ಬೆಳೆ ಬೆಳೆಯಲು ಮಾಡಿದ ವೆಚ್ಚಕ್ಕಿಂತ ಹೆಚ್ಚಿನ ಬೆಲೆ ಸಿಗುವ ಖಾತರಿಯನ್ನು ಒದಗಿಸಲಿದೆ. ಅಷ್ಟೇ ಅಲ್ಲದೇ ಅಕ್ಟೋಬರ್-ಸೆಪ್ಟೆಂಬರ್ ಅವಧಿಯ ಕಬ್ಬುಬೆಳೆಗೆ 2 ವಾರಗಳಲ್ಲೇ ನ್ಯಾಯಯುತ ದರವನ್ನು ಘೋಷಿಸುತ್ತೇವೆ ಎಂದಿದ್ದಾರೆ.

Image result for modi

ಕಳೆದ 10 ದಿನದಲ್ಲಿ ಎರಡನೇ ಬಾರಿ ರೈತರೊಂದಿಗೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಗಾರು ಹಂಗಾಮಿನ ಬೆಳೆಗಳಿಗೆ, ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹಣವನ್ನು ಕನಿಷ್ಠ ಬೆಂಬಲ ಬೆಲೆಯಾಗಿ ಘೋಷಿಸಲಾಗುವುದು. ಅಷ್ಟೇ ಅಲ್ಲದೇ, ಇದು ರೈತರ ಆದಾಯವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಿದ್ದಾರಲ್ಲದೇ, ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು, 2017-18ರ ಸೀಸನ್‍ನಲ್ಲಿ ಪ್ರಸ್ತುತ ಕ್ವಿಂಟಲ್‍ಗೆ 255 ರೂಪಾಯಿ ಎಫ್‍ಆರ್‍ಪಿ ಸಿಗುತ್ತಿದೆ. ಮುಂದಿನ ಋತುವಿನಲ್ಲಿ ಕ್ವಿಂಟಲ್‍ಗೆ 20ರೂ. ಏರಿಕೆ ಮಾಡುವುದಾಗಿ ಕೃಷಿ ವೆಚ್ಚ ಮತ್ತು ದರಗಳ ಆಯೋಗ (ಸಿಎಸಿಪಿ) ಪ್ರಸ್ತಾಪಿಸಿತ್ತು. ಅಷ್ಟೇ ಅಲ್ಲದೇ, ಇತ್ತೀಚೆಗಷ್ಟೇ ಈ ವಲಯಕ್ಕೆ 8,500 ಕೋಟಿ ರೂಪಾಯಿಗಳ ಪ್ಯಾಕೇಜ್ ಅನ್ನೂ ಘೋಷಿಸಿದ್ದರು. ಆದರೆ ರೈತರೊಂದಿಗೆ ಪ್ರಧಾನಿ ಮೋದಿ ನಡೆಸಿರುವ ಈ 2ನೇ ಸಭೆಯ ವೇಳೆ, ಭತ್ತ ಸೇರಿ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಹೆಚ್ಚಳ ಮಾಡುವ ಕುರಿತು ನಿರ್ಧರಿಸಲಾಗಿದ್ದು, ಮುಂದಿನ ವಾರ ನಡೆಯುವ ಸಂಪುಟ ಸಭೆಯಲ್ಲಿ ಇದನ್ನು ನಿಗದಿಪಡಿಸಲಾಗುವುದು ಎಂದಿದ್ದಾರೆ. ಈ ನಿರ್ಧಾರದಿಂದ ರೈತರ ಆದಾಯದಲ್ಲಿ ಗಣನೀಯ ಹೆಚ್ಚಳವಾಗಲಿದೆ ಎಂದೂ ಹೇಳಿದ್ದಾರೆ.

ಅಧಿಕೃತ ಅಂಕಿ ಅಂಶಗಳ ಪ್ರಕಾರ, ಜೂನ್ 1ರ ವರೆಗೆ ಕಬ್ಬು ಬೆಳೆಗಾರರಿಗೆ 22,654 ಕೋಟಿ ರೂಪಾಯಿ ಹಿಂಬಾಕಿಯಿತ್ತು. ಇದೀಗ ಅದು 19,816 ಕೋಟಿ ರೂಪಾಯಿಗೆ ಇಳಿಕೆಯಾಗಿದೆ. ರೈತರು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ರೈತರು ಹನಿ ನೀರಾವರಿ ಮತ್ತು ಸ್ಟ್ರಿಂಕ್ಲರ್‍ಗಳು, ಹೊಸ ಕೃಷಿ ತಂತ್ರಗಳನ್ನು ಬಳಸುವಂತೆ ಮೋದಿ ಸಲಹೆ ನೀಡಿದರು. ಅಲ್ಲದೆ, ಸೋಲಾರ್ ಪಂಪ್‍ಗಳು ಹಾಗೂ ಸೋಲಾರ್ ಪ್ಯಾನೆಲ್‍ಗಳನ್ನು ಬಳಸುವಂತೆಯೂ ತಿಳಿಸಿದ್ದಾರೆ!! ಇನ್ನು, 2022ರೊಳಗೆ ರಾಸಾಯನಿಕ ಗೊಬ್ಬರಗಳ ಬಳಕೆ ಶೇ.10ರಷ್ಟು ಇಳಿಕೆ ಮಾಡಲಾಗುತ್ತದೆ. ರೈತರ ಆದಾಯ ಹೆಚ್ಚಿಸುವುದಕ್ಕೆ ಸಂಬಂಧಿಸಿದ ಉದ್ಯಮಗಳಲ್ಲೂ ಹೂಡಿಕೆ ಮಾಡುವಂತೆ  ಕಾರ್ಪೊರೇಟ್ ಸಂಸ್ಥೆ ಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ ಅವರು, ಇತ್ತೀಚೆಗೆ ರೈತರೊಂದಿಗೆ ನಡೆಸಿದ್ದ ಸಂವಾದದ ಕುರಿತು ಪ್ರಸ್ತಾಪಿಸಿದರು.

ಒಟ್ಟಿನಲ್ಲಿ ಪ್ರಧಾನಿ ಮೋದಿ ದೇಶದ ರೈತಾಪಿ ವಲಯಕ್ಕೆ ಭರ್ಜರಿ ಉಡುಗೊರೆ ಘೋಷಿಸಿಸುವ ಮೂಲಕ ಇದೀಗ ರೈತರ ಕೂಗಿಗೆ ಮತ್ತೊಮ್ಮೆ ಸ್ಪಂದಿಸಿದ್ದಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ವಿಚಾರವೇ ಆಗಿದೆ. ಹಾಗಾಗಿ ಭತ್ತ ಸೇರಿದಂತೆ ಮುಂಗಾರು ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿಯೇ ಹೊಸ ಆಶಾಕಿರಣ ಮೂಡುವಂತೆ ಮಾಡಿದ್ದಾರೆ!!!

ಮೂಲ:
https://www.udayavani.com/

– ಅಲೋಖಾ

Tags

Related Articles

Close