ಪ್ರಚಲಿತ

ಬ್ರೇಕಿಂಗ್ ! ಸಿಎಂ ಕುಮಾರಸ್ವಾಮಿ ವಿರುದ್ಧ ರಣತಂತ್ರ ಹೆಣೆದ ಬಿಎಸ್‌ವೈ..! ಸಜ್ಜಾಗುತ್ತಿದೆ ಮಾಜಿ ಮುಖ್ಯಮಂತ್ರಿಯ ಹೊಸ ಟೀಂ..!

ರೈತರ ಹೆಸರಿನಲ್ಲಿ ಅಧಿಕಾರ ವಹಿಸಿಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಅಧಿಕಾರ ಕೈಗೆ ಸಿಗುತ್ತಲೇ ರೈತರನ್ನೂ ಮತ್ತು ರಾಜ್ಯದ ಜನರನ್ನೂ ಮರೆತಂತಿರುವ ಸಿಎಂ ಕುಮಾರಸ್ವಾಮಿ ಅವರು ದಿನದಿಂದ ದಿನಕ್ಕೆ ಒಂದೊಂದು ರೀತಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಯಾಕೆಂದರೆ ಚುನಾವಣೆಗೂ ಮೊದಲು ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ, ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೂ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ೨೪ ಗಂಟೆಗಳ ಒಳಗಾಗಿ ಸಾಲಮನ್ನಾ ಮಾಡುವುದಾಗಿ ಹೇಳಿದರು. ಆದರೆ ಅಧಿಕೃತವಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು ಕೂಡ ಇನ್ನೂ ಸಾಲಮನ್ನಾ ವಿಚಾರದಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆಯೇ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಇದೀಗ ಭಾರೀ ತಂತ್ರ ರೂಪಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಟ್ಟಿಹಾಕಲು ಸಜ್ಜಾಗಿದ್ದಾರೆ.!

ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಹೋರಾಟ..!

ಬಿಎಸ್ ಯಡಿಯೂರಪ್ಪ ನವರು ರೈತರ ನಾಯಕ ಎಂದೇ ಖ್ಯಾತರಾದವರು. ಯಾಕೆಂದರೆ ಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ, ರೈತರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಬೇಕಾದ ಎಲ್ಲಾ ಪರಿಹಾರಗಳನ್ನು ಒದಗಿಸಿದ್ದರು. ಅದೇ ರೀತಿ ರೈತರು ಬೆಳೆದ ಬೆಳೆಗಳಿಗೆ ಉತ್ತಮ ರೀತಿಯಲ್ಲಿ ಬೆಲೆ ಸಿಗುವಂತೆ ಮಾರುಕಟ್ಟೆ ಕೂಡ ನಿರ್ಮಿಸಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ, ಕೇವಲ ಅಧಿಕಾರದ ಆಸೆಗಾಗಿ ರೈತರ ಪರ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅದಕ್ಕಾಗಿಯೇ ಈ ಹಿಂದೆಯೇ ಬಿಎಸ್‌ವೈ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಯಾಕೆಂದರೆ ಕುಮಾರಸ್ವಾಮಿ ಅವರು ಇನ್ನು ೧೫ ದಿನ ಕಾಲಾವಕಾಶ ಕೊಡಿ, ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿಕೊಂಡಿದ್ದರು. ಆದರೆ ಇದೀಗ ಮುಖ್ಯಮಂತ್ರಿಯಾಗಿ ೧೫ ದಿನ ಕಳೆದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ, ಎಚ್ಚರಿಕೆ ನೀಡಿದಂತೆ ಬಿಎಸ್ ಯಡಿಯೂರಪ್ಪ ನವರು ರಾಜ್ಯಾದ್ಯಂತ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಮೈತ್ರಿ ಸರಕಾರದ ವಿರುದ್ಧ ಹೋರಾಡಲು ಸಜ್ಜಾಗಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಮುಖಂಡರ ಒಂದೊಂದೇ ತಂಡ ರಚಿಸಿ ಒಟ್ಟು ಆರು ತಂಡಗಳ ಮೂಲಕ ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಈ ತಂಡ ಪ್ರವಾಸ ಮಾಡಿ , ಸಂಪೂರ್ಣವಾಗಿ ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಲಿದೆ. ಯಡಿಯೂರಪ್ಪ ನವರ ಪ್ರಕಾರ , ಈ ತಂಡದ ಮೂಲಕ ರಾಜ್ಯಾದ್ಯಂತ ಹೋರಾಟ ಕೂಡ ಮಾಡಲಾಗುವುದು ಎಂದು ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಮುನ್ಸೂಚನೆ ನೀಡಿದ್ದಾರೆ.!

ರೈತರಿಂದಲೇ ಸಿಎಂ ಕುಮಾರಸ್ವಾಮಿಗೆ ಮನವಿ..!

ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಿನಕ್ಕೊಂದು ದ್ವಂದ್ವ ಹೇಳಿಕೆ ನೀಡಿ ರಾಜ್ಯದ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿಯೇ ರಾಜ್ಯದ ಅನ್ನದಾತರು ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ರೈತರ ತೊಂದರೆಗಳನ್ನು ಸರಿಯಾಗಿ ಪರಿಶೀಲಿಸಿ ಅದಕ್ಕೆ ಸರಕಾರ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರೂ ಕೂಡ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಯತ್ನಿಸುವುದಾಗಿ ಹೇಳಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರೂ ಕೂಡ ಈ ರೀತಿ ಪದೇ ಪದೇ ಕೇವಲ ಭರವಸೆಗಳನ್ನೇ ನೀಡಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ.

ಆದ್ದರಿಂದ ಬಿಎಸ್‌ವೈ ಹೇಳಿದಂತೆ ಇದೀಗ ರಾಜ್ಯಾದ್ಯಂತ ಹೊಸ ಟೀಂ ಒಂದನ್ನು ರಚಿಸಿ , ಕುಮಾರಸ್ವಾಮಿ ಅವರ ವಿರುದ್ಧ ಹೋರಾಟಕ್ಕೆ ತಯಾರಿ ನಡೆಸುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರಿಗೆ ಒಂದೆಡೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್‌ನ ಒಪ್ಪಿಗೆಯೂ ಬೇಕು, ಮತ್ತೊಂದೆಡೆ ಹಳೇ ಹೇಳಿಕೆಗಳೇ ಉರುಳಾಗಿ ಪರಿಣಮಿಸುತ್ತಿದೆ. ಆದ್ದರಿಂದ ಬಿಜೆಪಿ ರೂಪಿಸಿದ ಬಲೆಯಲ್ಲಿ ಸಿಎಂ ಕುಮಾರಸ್ವಾಮಿ ಬೀಳುತ್ತಾರಾ ಎಂಬೂದೇ ಕುತೂಹಲ..?!

–ಅರ್ಜುನ್

Tags

Related Articles

Close