ಪ್ರಚಲಿತ

ಬಿಗ್ ಬ್ರೇಕಿಂಗ್! ಬಿಜೆಪಿ ಸೇರಲಿದ್ದಾರೆ ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು..! ಪತನವಾಗುವತ್ತ ಮೈತ್ರಿ ಸರ್ಕಾರ..!ಮಹಾ ಮೈತ್ರಿಗೆ ಮಹಾ ಮುಖಭಂಗ!

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕೆಳಗಿಳಿಸಿ ಕಾಂಗ್ರೆಸ್ ಹಾಗೂ ಜನತಾ ದಳ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಆರಂಭವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿ ಮಾಡಿದ ನಂತರ ಆರಂಭವಾದ ಈ ಕೋಲಾಹಲ ಇಂದಿನವರೆಗೂ ಮುಂದುವರೆಯುತ್ತಲೇ ಇದೆ.

ಮಾಜಿ ಸಚಿವ ಹಾಗು ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ, ಸುಧಾಕರ್, ಐವನ್ ಡಿಸೋಜಾ ಸಹಿತ ಅನೇಕ ಕಾಂಗ್ರೆಸ್ ಶಾಸಕರು ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರುತ್ತಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದರೆ ಮುಖ್ಯಮಂತ್ರಿ ಕುಮಾರ ಸ್ವಾಮಿಯವರಿಗೆ ಸರ್ಕಾರ ಪತನವಾಗುವ ಆತಂಕ ಎದುರಾಗಿದೆ.

ಬಿಜೆಪಿ ಬರ್ತಾರಂತೆ ಅತೃಪ್ತ ಶಾಸಕರು..!

ಕಾಂಗ್ರೆಸ್ ಹಾಗೂ ಜನತಾ ದಳದ ಅತೃಪ್ತ ಶಾಸಕರು ಇದೀಗ ಭಾರತೀಯ ಜನತಾ ಪಕ್ಷವನ್ನು ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಮಾತನ್ನು ಸ್ವತಃ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯ ಯುವಮೋರ್ಛಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಬಿಎಸ್‍ವೈ ಈ ಸ್ಪೋಟಕ ಮಾಹಿತಿಯನ್ನು ಬಯಲು ಮಾಡಿದ್ದಾರೆ.

Image result for yeddyurappa oath taking

“ನಾವು ಅಂದೇ ಬಹುಮತವನ್ನು ನಿರೂಪಿಸಿ ಸರ್ಕಾರ ರಚಿಸಬಹುದಿತ್ತು. ಆದರೆ ನಮಗೆ ಒಂದು ದಿನ ಕಾಲಾವಕಾಶ ನೀಡಿದ್ದರಿಂದ ಅಸಾಧ್ಯವಾಯಿತು. ಹೀಗಾಗಿ ನಾವು ಅಧಿಕಾರವನ್ನು ಕಳೆದುಕೊಂಡೆವು. ಆದರೆ ನಾವು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್ ಹಾಗೂ ಜನತಾ ದಳದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಈ ಎರಡು ಪಕ್ಷಗಳ ಅತೃಪ್ತ ಶಾಸಕರು ಭಾರತೀಯ ಜನತಾ ಪಕ್ಷವನ್ನು ಸೇರಲು ಸಿದ್ಧರಾಗಿದ್ದಾರೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೃಪ್ತ ಶಾಸಕರನನು ಗುರುತಿಸಿ ಅವರನ್ನು ಪಕ್ಷಕ್ಕೆ ಕರೆತರುವ ಕೆಲಸವನನು ಮಾಡಬೇಕು. ಅವರು ಪಕ್ಷಕ್ಕೆ ಬರಲು ಈಗಾಗಲೇ ತಯಾರಾಗಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಈ ಸ್ಪೋಟಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನೇ ಮೂಡಿಸಿದೆ. ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ಎಲ್ಲಾ ಅತೃಪ್ತ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಜಿಗಿದಿದ್ದೇ ಆದಲ್ಲಿ ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಏರಬಹುದು.

ಈ ಮೂಲಕ ಕಾಂಗ್ರೆಸ್ ಹಾಗೂ ಜನತಾ ದಳದ ಮೈತ್ರಿ ಸರ್ಕಾರ ಪತನವಾಗು ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ. ತರಾತುರಿಯಲ್ಲಿ ಸರ್ಕಾರ ರಚಿಸಿದ ಮುಖ್ಯಮಂತ್ರಿ ಕುಮಾರ ಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಭಾರೀ ಮುಖಭಂಗವೇ ಕಾದಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ…!

-ಸುನಿಲ್ ಪಣಪಿಲ

Tags

Related Articles

Close