X

ಸಿಎಂಗೆ ಪರಂ ಶಾಕ್! ಸಿದ್ದರಾಮಯ್ಯಗೆ ಅಡ್ಡಗಾಲಿಟ್ಟ ಪರಮೇಶ್ವರ್..! ಕಾಂಗ್ರೆಸ್‍ನ ಮುಂದಿನ ಸಿಎಂ ಯಾರು ಗೊತ್ತಾ..?

ಚುನಾವಣೆ ಹತ್ತಿರ ಬರುತ್ತಲೇ ವಿರೋಧ ಪಕ್ಷಗಳ ನಡುವಿನ ಗುದ್ದಾಟ ತಾರಕಕ್ಕೇರುತ್ತಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು ಎಂದು ಎಲ್ಲಾ ಪಕ್ಷಗಳೂ ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ನಮ್ಮ ಪಕ್ಷದ ನಾಯಕರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಲ್ಲಾ ಪಕ್ಷಗಳೂ ಪ್ರಚಾರ ಮಾಡಿಕೊಂಡು ತಿರುಗಾಡುತ್ತಾ ಇದ್ದಾರೆ. ಆದರೆ ಇಲ್ಲೊಂದು ಪಕ್ಷದಲ್ಲಿ ಮಾತ್ರ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಅದು ಇದೀಗ ಬಹಿರಂಗವಾಗಿದೆ.

ಭಾರತೀಯ ಜನತಾ ಪಕ್ಷ ತನ್ನ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಎಂದು ಘೋಷಣೆ ಮಾಡಿದೆ. ಅಂತೆಯೇ ಜಾತ್ಯಾತೀತ ಜನತಾ ದಳ ಕೂಡಾ ತಮ್ಮ ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುಮಾರ ಸ್ವಾಮಿ ಎಂದು ಘೋಷಣೆ ಮಾಡಿಕೊಂಡಿದೆ. ಆದರೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮಾತ್ರ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡದೆ ತನ್ನ ತಟಸ್ಥ ನಿಲುವನ್ನು ತಳೆದಿದೆ. 

ನಾನೇ ಸಿಎಂ ಎಂದಿದ್ದ ಸಿದ್ದರಾಮಯ್ಯ..!!!

ತನ್ನ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಈವರೆಗೂ ಘೋಷಣೆ ಮಾಡಿಲ್ಲ. ಅಭ್ಯರ್ಥಿ ಘೋಷಣೆ ಮಾಡದೆ ಚುನಾವಣೆಯನ್ನು ಎದುರಿಸುವುದು ಕಾಂಗ್ರೆಸ್ ಪಕ್ಷದ ಪ್ಲಾನ್. ಇದು ಅಕ್ಷರಷಃ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ಲಾನ್ ಅನ್ನೋದು ಗುಟ್ಟಾಗಿ ಉಳಿದಿಲ್ಲ.

ಆದರೆ ಮುಂದಿನ ಸರ್ಕಾರದಲ್ಲಿ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅನೇಕ ಕಡೆಗಳಲ್ಲಿ ಘೋಷಣೆ ಮಾಡಿಕೊಂಡು ಬರುತ್ತಿದ್ದಾರೆ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ,  ಆ ಸರ್ಕಾರದಲ್ಲಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಅದೆಷ್ಟೋ ಕಡೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದುಂಟು.

ಆದರೆ ಇದರ ವಿರುದ್ಧ ಈ ಹಿಂದೆಯೇ ಪರಂ ಹಾಗೂ ಖರ್ಗೆ ಕೈಕಮಾಂಡ್ ಮೊರೆ ಹೋಗಿದ್ದರು. ಇಂತಹಾ ಹೇಳಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಹೇಳಬಾರದು ಎಂದು ಆದೇಶಿಸಿ ಎಂದು ಮನವಿ ಮಾಡಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ನಾಯಿ ಬಾಲ ಡೊಂಕೆ ಎನ್ನುವಂತೆ ವರ್ತಿಸಿಕೊಳ್ಳುತ್ತಿದ್ದಾರೆ.

ಅಡ್ಡಗಾಲಿಟ್ಟ ಪರಮೇಶ್ವರ್..!

ಇದೀಗ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅಡ್ಡಗಾಲಿಟ್ಟಿದ್ದಾರೆ. “ಮುಖ್ಯಮಂತ್ರಿ ಯಾರಾಗ್ತಾರೆ ಅಂತ ಮತ್ತೆ ನೋಡೋಣ. ಮೊದಲು 113 ಸ್ಥಾನಗಳನ್ನು ಗೆಲ್ಲಬೇಕಲ್ವಾ..? ಅದನ್ನು ಮೊದಲು ಗೆದ್ದು ನಂತರ ಸ್ಪಾಟ್ ನಲ್ಲಿಯೇ ಮುಖ್ಯಮಂತ್ರಿ ಯಾರೆಂದು ನಾನು ಹೇಳುತ್ತೇನೆ. ನಾನು, ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸಾಲಿನಲ್ಲಿದ್ದೇವೆ. ನಮ್ಮಲ್ಲೇ ಮುಖ್ಯಮಂತ್ರಿ ಆಯ್ಕೆ ನಡೆಯೋದು. ಆದರೆ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಕಾರ್ಯಕರ್ತರಿಗೆ ಹಾಗೂ ಜನರಿಗೆ ಗೊಂದಲ ಸೃಷ್ಟಿಸುವುದು ಸರಿಯಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.

ಹಿಂದಿನ ಬಾರಿಯೂ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸೋಲಿಸಿದ್ದರು. ಆದರೆ ಈ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸೋಲುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ತನಗೇ ಒಲಿದು ಬರುತ್ತದೆ ಎಂದು ಪರಮೇಶ್ವರ್ ಛಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯರ ಆಡಳಿತ ವಿರೋಧಿ ಅಲೆಯನ್ನು ಅಸ್ತ್ರವಾಗಿಟ್ಟುಕೊಂಡರೆ ಮತ್ತೊಂದು ಕಡೆ ದಲಿತ ನಾಯಕ ಎನ್ನುವ ಅಸ್ತ್ರವನ್ನು ಬಿಟ್ಟು ಮುಖ್ಯಮಂತ್ರಿ ಗದ್ದುಗೆಗೆ ಏರಲು ಸಕಲ ಸನ್ನದ್ಧವಾಗಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಸರ್ಕಾರ ಬರುತ್ತಾ ಅನ್ನೋದೇ ಸಂಶಯದ ವಿಚಾರವಾಗಿದೆ.

-ಸುನಿಲ್ ಪಣಪಿಲ

Editor Postcard Kannada:
Related Post