ಪ್ರಚಲಿತ

ಜನರ ದಾರಿ ತಪ್ಪಿಸುವ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸುಳ್ಳು ಬಿತ್ತುವ ಮೂಲಕ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ವ್ಯರ್ಥ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್‌ಗೆ ಮತ ಕೇಳಲು ಯಾವುದೇ ಸಾಧನೆಯ ಹೆಸರು ಇಲ್ಲವಾಗಿದ್ದು, ಈ ಕಾರಣದಿಂದ ಪ್ರಧಾನಿ ಮೋದಿ ಅವರ ವಿರುದ್ಧ, ಬಿಜೆಪಿ ವಿರುದ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದು ಪ್ರಧಾನಿ ಮೋದಿ ಅಭಿಮಾನಿಗಳಲ್ಲಿ, ಬಿಜೆಪಿಗರಲ್ಲಿ ಆಕ್ರೋಶ ಹುಟ್ಟುವ ಹಾಗೆ ಮಾಡಿದೆ ಎನ್ನಬಹುದು.

ಕಾಂಗ್ರೆಸ್ ಯುವರಾಜ,‌ಐವತ್ತು ದಾಟಿದ ಯುವ ನಾಯಕ ರಾಹುಲ್ ಗಾಂಧಿ ಅವರು ತಾವು ಹೋದಲ್ಲೆ, ಬಂದಲ್ಲೆಲ್ಲಾ ಪ್ರಧಾನಿ ಮೋದಿ ಅವರನ್ನು, ಬಿಜೆಪಿಯನ್ನು ಅವಹೇಳನ ಮಾಡುತ್ತಲೇ ಬರುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಈ ನಡೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಗುರಿಯಾಗಿದೆ. ಬಿಜೆಪಿ ರಾಹುಲ್ ಗಾಂಧಿ ಅವರ ಸುಳ್ಳು ಬಿತ್ತುವ ಫ್ಯಾಕ್ಟರಿಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ.

ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ, ಪಶ್ಚಿಮ ಬಂಗಾಳದಲ್ಲಿ ಶಾಂತಿಯುತ ಚುನಾವಣೆ ನಡೆಯುವ ಬಯಕೆ ವ್ಯಕ್ತಪಡಿಸಿ, ಬಿಜೆಪಿ ವಿರೋಧ ಪಕ್ಷಗಳ ಇಂಡಿ ಒಕ್ಕೂಟದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲು ಮಾಡಿರುವುದಾಗಿದೆ.

ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅಭ್ಯರ್ಥಿಗಳೇ ಸಿಗುತ್ತಿಲ್ಲ. ಇದು ಅವರ ಹತಾಶೆಗೆ ಕಾರಣವಾಗಿದೆ. ಇದರಿಂದಾಗಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ ಮೋದಿ ಅವರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೈ ಪಕ್ಷ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ವಿಭಜನೆ ಏರ್ಪಡುವ ಹಾಗೆ ಮಾಡಲು ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಭಾರತೀಯ ಜನತಾ ಪಕ್ಷದ ನಾಯಕ ತರುಣ್ ಚುಗ್ ಅವರು ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಭಾಷೆ ಮತ್ತು ಪ್ರದೇಶದ ಆಧಾರದ ಮೇಲೆ ಜನರನ್ನು ರೊಚ್ಚಿಗೆಬ್ಬಿಸಲು ಪಿತೂರಿ ನಡೆಸುತ್ತಿದ್ದಾರೆ. ಈ ಪಿತೂರಿಯ ಬಗ್ಗೆ ಬಿಜೆಪಿ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದು, ದೂರನ್ನು ನೀಡಿರುವುದಾಗಿ ಅವರು ಹೇಳಿದ್ದಾರೆ.

ಕೈ ನಾಯಕ ರಾಹುಲ್ ಗಾಂಧಿ ಅವರು ಸುಳ್ಳು, ಪಿತೂರಿ ಮತ್ತು ಜನರ ಗಮನವನ್ನು ಸೆಳೆಯಲು ಸರಣಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರವನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

Tags

Related Articles

Close