ಪ್ರಚಲಿತ

ಬಿಜೆಪಿಯದ್ದು ವಿಕಾಸದ ರಾಜಕಾರಣ: ಅಮಿತ್ ಶಾ

ರಾಜ್ಯದಲ್ಲಿ ಮೇ ೧೦ ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ ೧೩ ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷ ಗಳೂ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಬಿಜೆಪಿಯ ಪರ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಚಾಂರಾಜಪೇೆಟೆಗೆ ಆಗಮಿಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಬಹುಮತ ಸಾಧಿಸಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮುಸಲ್ಮಾನರಿಗೆ ಕಾಂಗ್ರೆಸ್ ಪಕ್ಷ ನೀಡಿದ್ದ ೪% ಮೀಸಲಾತಿಯನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿದೆ. ಕಾಂಗ್ರೆಸ್ ಸರ್ಕಾರ ತುಷ್ಠೀಕರಣದ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿ ವಿಕಾಸದ ಮಂತ್ರದ ಜೊತೆಗೆ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಲಿಂಗಾಯತರು, ಒಕ್ಕಲಿಗ ಸಮುದಾಯ, ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿದೆ. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ತಮಗೆ ಅಧಿಕಾರ ಸಿಕ್ಕರೆ ಬಿಜೆಪಿ ಜಾರಿಗೊಳಿಸಿದ ಈ ಮೀಸಲಾತಿಯನ್ನು ರದ್ದು ಮಾಡಿ, ಮುಸಲ್ಮಾನರಿಗೆಯೇ ಮತ್ತೆ ಮೀಸಲಾತಿ ನೀಡುವುದಾಗಿ ಹೇಳಿಕೊಂಡು ಬರುತ್ತಿದ್ದು, ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತೆ ಬಹುಮತ ಸಾಧಿಸಿ ಅಧಿಕಾರ ಪಡೆದುಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags

Related Articles

Close