ಪ್ರಚಲಿತ

ಬ್ರೇಕಿಂಗ್! ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್ ಝಳಪಿಸಿದ ಕಾಂಗ್ರೆಸ್ ಗೂಂಡಾನ ವಿರುದ್ಧ ಆರ್ಭಟಿಸಿದ ಬಿಜೆಪಿ ಶಾಸಕ.! ಶಾಸಕರ ಎಚ್ಚರಿಕೆಗೆ ಕಂಗಾಲಾದ ಕಾಂಗ್ರೆಸ್ ಮಾಜಿ ಸಚಿವ..!

ಈ ಕಾಂಗ್ರೆಸಿಗರು ಅಧಿಕಾರ ತಮ್ಮ ಕೈಯಲ್ಲಿದ್ದಾಗ ಮಾಡಿದ ರಂಪಾಟವೇ ಇನ್ನೂ ಆರಿಲ್ಲ, ಅದಾಗಲೇ ಮತ್ತೆ ತಮ್ಮ ಗೂಂಡಾಗಿರಿ ಪ್ರಾರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತ ಸಂದರ್ಭದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲದಂತಾಗಿತ್ತು. ಯಾಕೆಂದರೆ ಈ ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದಾಗಿ ಹಾಡ ಹಗಲೇ ನಡು ರಸ್ತೆಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆಗಳು ನಡೆಯುತ್ತಿತ್ತು. ಆದರೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕಾಂಗ್ರೆಸ್ ಅಧಿಕಾರ ಕಳೆದುಕೊಂಡರೂ ಜೆಡಿಎಸ್‌ ಜೊತೆ ಸೇರಿಕೊಂಡು ಮತ್ತೆ ಅಧಿಕಾರ ಪಡೆದುಕೊಂಡಿದೆ. ಆದ್ದರಿಂದಲೇ ಮತ್ತೆ ಕಾಂಗ್ರೆಸ್ ಬೆಂಬಲಿಗರ ಪುಂಡಾಟ ಎಗ್ಗಿಲ್ಲದೆ ನಡೆಯುತ್ತಿದೆ.!

ಕರಾವಳಿಯಲ್ಲಿ ಕಾಂಗ್ರೆಸ್ ಅಧಿಕಾರವಿದ್ದ ಸಂದರ್ಭದಲ್ಲಿ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುತ್ತಿದ್ದ ಗೂಂಡಾಗಳಿಗೆ ಇದೀಗ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೈಕಟ್ಟಿಹಾಕಿದಂತಾಗಿದೆ. ಆದರೂ ಹಾಡಹಗಲೇ ತಲ್ವಾರ್ ಝಳಪಿಸಿದ ಕಾಂಗ್ರೆಸ್ ಮಾಜಿ ಸಚಿವನ ಬಲಕೈ ಬಂಟನ ಛಳಿ ಬಿಡಿಸಿದ್ದಾರೆ ಬಿಜೆಪಿ ಶಾಸಕ.!

ಬಿಜೆಪಿ ಕಾರ್ಯಕರ್ತರಿಗೆ ಮಾರಣಾಂತಿಕ ಹಲ್ಲೆ..!

ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ತಳ್ಳಾಟ ಆರಂಭಿಸಿದ್ದರು. ಆದರೆ ಈ ಮಧ್ಯೆ ಬಂದ ಬಂಟ್ವಾಳ ಮಾಜಿ ಶಾಸಕ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಬಂಟನಾಗಿರುವಂತಹ ಸುರೇಂದ್ರ ಬಂಟ್ವಾಳ ಎಂಬವರು ತಮ್ಮ ಕಾರಿನಿಂದ ತಲ್ವಾರ್ ಹೊರತೆಗೆದು ಏಕಾಏಕಿ ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಹಲ್ಲೆ ಮಾಡಿದ ಸುರೇಂದ್ರ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಗೊಳಗಾದ ಬಿಜೆಪಿ ಕಾರ್ಯಕರ್ತರು ಸದ್ಯ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದು, ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.!

ಸುರೇಂದ್ರ ಬಂಟ್ವಾಳ ಅವರು ಮಾಜಿ ಸಚಿವ ರಮಾನಾಥ್ ರೈ ಅವರ ಬಂಟನಾಗಿದ್ದು, ಈ ಹಿಂದೆಯೂ ಹಲವಾರು ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದರು. ಆದರೆ ಸಚಿವರ ಕ್ರಪಾಕಟಾಕ್ಷದಿಂದ ಯಾವುದೇ ಪ್ರಕರಣಗಳಲ್ಲಿಯೂ ಶಿಕ್ಷೆ ಅನುಭವಿಸದೆ ರಾಜಾರೋಷವಾಗಿ ತಿರುಗಾಡಿಕೊಂಡಿದ್ದರು. ಆದರೆ ಈಗ ಕ್ಷೇತ್ರದಲ್ಲಿ ಬಿಜೆಪಿ ಆಡಳಿತವಿದ್ದು, ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬಂತಾಗಿದೆ ಈ ಗೂಂಡಾನ ಸ್ಥಿತಿ.!

ಕ್ಷೇತ್ರದಲ್ಲಿ ಯಾವುದೇ ಅಹಿತರ ಘಟನೆಗೆ ಆಸ್ಪದ ನೀಡುವುದಿಲ್ಲ..!

ಈ ಬಗ್ಗೆ ಮಾತನಾಡಿದ ಬಂಟ್ವಾಳ ಬಿಜೆಪಿ ಶಾಸಕ ಯು ರಾಜೇಶ್ ನಾಯ್ಕ್ ಅವರು, ಆರೋಪಿ ಯಾರೇ ಆಗಿದ್ದರೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಬಂಟ್ವಾಳದ ಸ್ಥಿತಿ ಹದಗೆಟ್ಟಿತ್ತು, ಆದರೆ ಇನ್ನು ಮುಂದೆ ಇದು ನಡೆಯುವುದಿಲ್ಲ. ಯಾಕೆಂದರೆ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಕಡಕ್ಕಾಗಿ ಸೂಚಿಸಲಾಗಿದೆ ಎಂದಿದ್ದಾರೆ. ಹಾಡಹಗಲೇ ಈ ರೀತಿ ಗೂಂಡಾಗಿರಿ ನಡೆಯುತ್ತಿದ್ದರೂ ಪೊಲೀಸರು ಸುಮ್ಮನಿರುವ ಬಗ್ಗೆ ಎಚ್ಚರಿಕೆ ನೀಡಿದ ಶಾಸಕ ರಾಜೇಶ್ ನಾಯ್ಕ್ , ನಮ್ಮ ಕ್ಷೇತ್ರದಲ್ಲಿ ಯಾವುದೇ ಗೂಂಡಾಗಳು ತಲೆಎತ್ತಲು ನಾನು ಬಿಡುವುದಿಲ್ಲ. ಅಂತಹ ಗೂಂಡಾಗಿರಿ ನಡೆಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿಕೊಂಡಿದ್ದಾರೆ.!

ಮಾಜಿ ಸಚಿವರ ಆಪ್ತನೇ ಆಗಿರಲಿ , ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ನನ್ನ ಕ್ಷೇತ್ರದಲ್ಲಿ ಬಿಡುವುದಿಲ್ಲ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದ ರಾಜೇಶ್ ನಾಯ್ಕ್, ಪೊಲೀಸರಿಗೂ ಎಚ್ಚರಿಕೆ ನೀಡಿದರು. ಕ್ಷೇತ್ರದ ಜನರಿಗೆ ನೀಡುವ ಯಾವುದೇ ಕೈಗಳಿಗೂ ಉಳಿಗಾಲವಿಲ್ಲ. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಆದ್ದರಿಂದ ಬಿಜೆಪಿ ಕಾರ್ಯಕರ್ತರಾಗಲೀ , ಸಾಮಾನ್ಯ ಜನರಿಗೆ ತೊಂದರೆಯಾದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಎಂದು ಮಾಜಿ ಸಚಿವ , ಶಾಸಕರೂ ಆಗಿದ್ದಂತಹ ರಮಾನಾಥ್ ರೈ ಅವರಿಗೂ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.!

–ಸಾರ್ಥಕ್

Tags

Related Articles

Close