X

ಬಿಗ್ ಬ್ರೇಕಿಂಗ್! ಸಿದ್ದರಾಮಯ್ಯ ವಿರುದ್ಧ ಕೇಸ್.! ಕೋರ್ಟ್ ಆದೇಶಕ್ಕೆ ಬೆಚ್ಚಿಬಿದ್ದ ಮಾಜಿ ಮುಖ್ಯಮಂತ್ರಿ..!

ತನ್ನ ಅಧಿಕಾರದ ಅವಧಿಯಲ್ಲಿ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿಕೊಂಡು ಸರಕಾರದ ಬೊಕ್ಕಸ ಲೂಟಿಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಲೇ ಇದ್ದರು. ವಿರೋಧ ಪಕ್ಷಗಳು ಎಷ್ಟೇ ವಿರೋಧಿಸಿದರೂ ಅಧಿಕಾರದ ಅಮಲಿನಲ್ಲಿದ್ದ ಸಿದ್ದರಾಮಯ್ಯನವರು ಸರ್ವಾಧಿಕಾರದ ಆಡಳಿತ ನಡೆಸುತ್ತಿದ್ದರು. ಆದರೆ ನ್ಯಾಯಾಲಯದ ಮುಂದೆ ಎಲ್ಲರೂ ತಲೆಬಾಗಲೇಬೇಕು. ಯಾಕೆಂದರೆ ಅಕ್ರಮ ಎಸಗಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳವ ನ್ಯಾಯಾಲಯ ಇದೀಗ ಸಿದ್ದರಾಮಯ್ಯನವರ ವಿರುದ್ಧ ಪ್ರಕರಣ ದಾಖಲಿಸುವಂತೆ ಖಡಕ್ ಆದೇಶ ಹೊರಡಿಸಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತನ್ನದೇ ಸ್ವಂತ ನಿರ್ಧಾರ ಕೈಗೊಂಡು ಬೇಕಾಬಿಟ್ಟಿಯಾಗಿ ಆಡಳಿತ ನಡೆಸುತ್ತಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡು ಕೇವಲ ಶಾಸಕರಾಗಿ ಉಳಿದಿದ್ದಾರೆ. ಆದ್ದರಿಂದ ಅಧಿಕಾರ ಉಪಯೋಗಿಸಿ ಮಾಡಿದ ಅಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಸಿಎಂ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ..!

ಜಾಗದ ಕುರಿತು ಅಕ್ರಮವೆಸಗಿಸುವ ಸಿದ್ದರಾಮಯ್ಯ..!

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಲು ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಆದರೆ ಈ ಬಗ್ಗೆ ಯಾವುದೇ ನಿರ್ದಿಷ್ಟ ಸಾಕ್ಷ್ಯಾಧಾರಗಳು ಇಲ್ಲದೇ ಇದ್ದಿದ್ದರಿಂದ ಕೋರ್ಟ್ ಕೂಡ ಹೆಚ್ಚು ತನಿಖೆಗೆ ಆದೇಶಿಸಿರಲಿಲ್ಲ. ಆದರೆ ಇದೀಗ ಗಂಗರಾಜು ಎಂಬವರು ಸಿದ್ದರಾಮಯ್ಯನವರು ಅಕ್ರಮವೆಸಗಿರುವ ಬಗ್ಗೆ ದೂರು ದಾಖಲಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯನವರ ನಿವಾಸ ಅಕ್ರಮವಾಗಿ ಕಬಳಿಸಿದ ಜಾಗದಲ್ಲಿ ನಿರ್ಮಿಸಿಲಾಗಿದೆ ಎಂದು ಗಂಗರಾಜು ಅವರು ಆರೋಪಿಸಿದ್ದಾರೆ.

ಈಗಾಗಲೇ ಕೋರ್ಟ್ ಕೂಡ ಗಂಗರಾಜು ಅವರು ನೀಡಿರುವ ಮನವಿಯನ್ನು ಸ್ವೀಕರಿಸಿದ್ದು, ಸಿದ್ದರಾಮಯ್ಯನವರ ವಿರುದ್ಧ ಕೂಡಲೆ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಿದೆ. ಅದೇ ರೀತಿ ಮೂಡಾದ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಮತ್ತು ಡಿ.ಧೃವಕುಮಾರ್ ವಿರುದ್ಧವೂ ಅಕ್ರಮ ಎಸಗಿರುವ ಬಗ್ಗೆ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಇವರಿಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲು ಕೋರ್ಟ್ ಎಂದು ಈಗಾಗಲೇ ಈಗಾಗಲೇ ಆದೇಶ ಹೊರಡಿಸಿದ್ದು, ಸಿದ್ದರಾಮಯ್ಯನವರು ಬಂಧನದ ಭೀತಿ ಎದುರಿಸುವಂತಾಗಿದೆ.!

ಲಂಚ ಸ್ವೀಕರಿಸಿದ ಆರೋಪದಲ್ಲೂ ಸಿದ್ದರಾಮಯ್ಯ..!

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರಕಾರದ ಅಧೀನದಲ್ಲಿದ್ದ ಕಟ್ಟಡಗಳನ್ನು ನ್ಯಾಯಾಲಯದ ಅನುಮತಿ ಇಲ್ಲದೆ ಖಾಸಗಿ ಮಾಲಕತ್ವದ ಕಂಪನಿಗಳಿಗೆ ನೀಡಿದ್ದರೆಂಬ ಆರೋಪದಡಿ ಕೇಸ್ ಕೂಡ ದಾಖಲಾಗಿತ್ತು. ಸಿದ್ದರಾಮಯ್ಯನವರು ಲಂಚ ಸ್ವೀಕರಿಸಿದ್ದಾರೆ ಎಂಬ ಆರೋಪದಲ್ಲಿ ಕೋರ್ಟ್ ಕೂಡ ತನಿಖೆಗೆ ಆದೇಶ ನೀಡಿತ್ತು. ಆದರೆ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಅಕ್ರಮವೆಸಗಿ ಶಿಕ್ಷೆಯಿಂದ ಪಾರಾಗಿದ್ದರು. ಆದರೂ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಲೇ ಬಂದಿದ್ದ ಸಿದ್ದರಾಮಯ್ಯನವರಿಗೆ ಇದೀಗ ಮತ್ತೊಂದು ಹೊಡೆತ ಬಿದ್ದಿದೆ. ಯಾಕೆಂದರೆ ಸ್ವತಃ ಕೋರ್ಟ್ ಪ್ರಕರಣ ದಾಖಲಿಸುವಂತೆ ಆದೇಶ ನೀಡಿರುವುದರಿಂದ ಆರೋಪ ಸಾಬೀತಾದರೆ ಮಾಜಿ ಸಿಎಂ ಸಿದ್ದರಾಮಯ್ಯನವರು ಜೈಲು ಪಾಲಾಗುವುದು ಖಚಿತ..!

–ಅರ್ಜುನ್

Editor Postcard Kannada:
Related Post