ಪ್ರಚಲಿತ

ಸಿಎಎ ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಏನೇ ಆದರೂ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಯನ್ನು ಜಾರಿಗೆ ತಂದೇ ತರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಎ ಜಾರಿಯನ್ನು ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧಿಸುತ್ತಾ ಬಂದಿದ್ದು, ಯಾರು ಏನೇ ಮಾಡಲಿ, ಸಿಎಎ ಜಾರಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಸಿಎಎ ಜಾರಿ ಮಾಡಿಯೇ ತೀರುತ್ತದೆ ಎಂದು ಹೇಳಿದ್ದಾರೆ. 

ಯಾರೇ ವಿರೋಧಿಸಲಿ. ಅವರ ವಿರೋಧದ ನಡುವೆಯೇ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಿಎಎ ಯನ್ನು ಯಶಸ್ವಿಯಾಗಿ ಜಾರಿಗೊಳಿಸಲಿರುವುದಾಗಿ ಅವರು ಹೇಳಿದ್ದಾರೆ. 

ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಟಿಎಂಸಿ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿಯೇ ಜನರು ತಕ್ಕ ಶಾಸ್ತಿ ಮಾಡಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ನೀಡುವಂತೆಯೂ ಅವರು ಇದೇ‌ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಹಾಗೆಯೇ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅಪಾರ ಜನಸ್ತೋಮವನ್ನು ಶ್ಲಾಘಿಸಿದ ಅವರು, ಇದು ಜನರಿಗೆ ಬಿಜೆಪಿ ಮೇಲೆ ವಿಶ್ವಾಸ ಇದೆ ಎಂಬುದನ್ನು ಸೂಚಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಬಹುಮತ ನೀಡಲಿದ್ದಾರೆ ಎನ್ನುವುದನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ. 2024 ರ ಲೋಕಸಭಾ ಚುನಾವಣೆಯು 2026 ರ ವಿಧಾನಸಭಾ ಚುನಾವಣೆಗೂ ಅಡಿಪಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. 

Tags

Related Articles

Close