X

ಕಾಂಗ್ರೆಸ್ ಬೂಟಾಟಿಕೆ ವಿರುದ್ಧ ಶಾ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಓಲೈಕೆ ರಾಜಕಾರಣದ‌ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಎಸ್.ಸಿ., ಎಸ್.ಟಿ. ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚು ಮಾಡಲಾಗುತ್ತದೆ. ಹಾಗೆಯೇ ಮುಸ್ಲಿಂ ಮೀಸಲಾತಿಯನ್ನು ರದ್ದು ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಎಸ್.ಸಿ., ಎಸ್.ಟಿ., ಒಬಿಸಿ ಮೀಸಲಾತಿಯನ್ನು ಕೊಳ್ಳೆ ಹೊಡೆದಿದೆ. ಅದನ್ನು ಮುಸ್ಲಿಮರಿಗೆ ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಸುಳ್ಳು ಹೇಳುವ ಮೂಲಕ ಈ ಚುನಾವಣೆಯನ್ನು ಎದುರಿಸುವ ಕೆಲಸ ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡುತ್ತಾರೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಆದರೆ ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಇದೆ. ಅವರು ಮೀಸಲಾತಿಯನ್ನು ಇಷ್ಟು ವರ್ಷಗಳ ಕಾಲ ಮುಕ್ತಾಯ ಮಾಡಿಲ್ಲ. ಬದಲಾಗಿ ಒಮ್ಮತದ ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಎಸ್.ಸಿ., ಎಸ್.ಟಿ, ಒಬಿಸಿ ವರ್ಗಗಳ ಮೀಸಲಾತಿ ಕಿತ್ತು ಮುಸಲ್ಮಾನರಿಗೆ ನೀಡುತ್ತದೆ ಎಂದು ಹೇಳಿದ್ದಾರೆ.

ನಮ್ಮ ಪ್ರಣಾಳಿಕೆಯಲ್ಲಿ ನಾವು ಮೋದಿ ಅವರ ಭರವಸೆಗಳನ್ನು ನೀಡಿದ್ದೇವೆ. ಪ್ರಧಾನಿ ಮೋದಿ ಅವರು ಹೇಳಿದ್ದನ್ನು ಅವರು ಮಾಡಿಯೇ ಮಾಡುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರ ಭರವಸೆ ಗಳು ಸೂರ್ಯಾಸ್ತದ ವರೆಗೂ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲಿಲ್ಲ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ನೀಡಲಿಲ್ಲ. ಅವರು ನೀಡಿದ ಭರವಸೆಯ ಹಾಗೆ ವಿದ್ಯಾರ್ಥಿಗಳಿಗೆ ಸ್ಕೂಟಿ ನೀಡಲಿಲ್ಲ. ಅಂತರಾಷ್ಟ್ರೀಯ ಶಾಲೆಗಳನ್ನು ತೆರೆಯಲಿಲ್ಲ. ಕಾಂಗ್ರೆಸ್ ಎಂದಿಗೂ ತನ್ನ ಭರವಸೆ ಈಡೇರಿಸುವುದಿಲ್ಲ ಎಂದಿದ್ದಾರೆ.

ಜೊತೆಗೆ ಕಾಂಗ್ರೆಸ್ ಎಪ್ಪತ್ತು ವರ್ಷಗಳ ಕಾಲ ರಾಮ ಮಂದಿರ ನಿರ್ಮಾಣವನ್ನು ಸ್ಥಗಿತ ಮಾಡಿತು. ಆದರೆ ಪ್ರಧಾನಿ ಮೋದಿ ಅವರು ಕೇಸ್ ಗೆದ್ದು ಮಂದಿರ ನಿರ್ಮಾಣ ಮಾಡಿ ತೋರಿಸಿದರು. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದರು ಎಂದು ಶಾ ಹೇಳಿದ್ದಾರೆ.

Post Card Balaga:
Related Post