ಪ್ರಚಲಿತ

ಕಾಂಗ್ರೆಸ್ ಜನರಿಗೆ ಅನ್ಯಾಯ ಮಾಡುತ್ತಿದೆ : ಅಮಿತ್ ಶಾ

ಸದ್ಯ ದೇಶದಲ್ಲಿ ಹೆಚ್ಚು ಸುದ್ದಿ ಮಾಡುತ್ತಿರುವ ವಿಷಯ ಲೋಕಸಭಾ ಚುನಾವಣೆ ಮತ್ತು ಮೀಸಲಾತಿ ವಿಷಯ. ದೇಶ ವಿರೋಧಿ ಕಾಂಗ್ರೆಸ್ ಪಕ್ಷ ಮುಸಲ್ಮಾನ ರಿಗೆ ಮೀಸಲಾತಿ ನೀಡಲು ಮುಂದಾಗಿರುವ ವಿಷಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು, ಬಹುಸಂಖ್ಯಾತರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಬಹುಸಂಖ್ಯಾತ ಹಿಂದೂಗಳಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ನೀಡಲಾಗುವ ಮೀಸಲಾತಿಯನ್ನು ಕಿತ್ತುಕೊಳ್ಳಲು ಹೊರಟಿರುವ ಕಾಂಗ್ರೆಸ್, ಅದನ್ನು ಮುಸಲ್ಮಾನರಿಗೆ ಮತ ಬ್ಯಾಂಕ್ ರಾಜಕಾರಣದ ದುರುದ್ದೇಶದಿಂದ ನೀಡಲು ಮುಂದಾಗಿದೆ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇಂತಹ ಸ್ಥಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೀಸಲಾತಿಗೆ ಸಂಬಂಧಿಸಿದ ಹಾಗೆ ಕೆಲ ದಿನಗಳ ಹಿಂದಷ್ಟೇ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಎಸ್ ಸಿ, ಎಸ್ ಟಿ ಮತ್ತು ಒಬಿಸಿ ವರ್ಗಗಳ ಸಾಂವಿಧಾನಿಕ ಹಕ್ಕು ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಹಾಗೆಯೇ ಇರುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆ ಮೂಲಕ ಬಹುಸಂಖ್ಯಾತ ಹಿಂದೂಗಳಲ್ಲಿ ಬಡ ಜನರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡುವುದಾಗಿ ಹೇಳಿದ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ.

ದೇಶದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ನಮ್ಮ ಬಿಜೆಪಿ ಪಕ್ಷ ಸದಾ ಬದ್ಧವಾಗಿದೆ. ಬಿಜೆಪಿಯ ಆಡಳಿತದಲ್ಲಿ ಬುಡಕಟ್ಟು ಜನಾಂಗದಿಂದ ಬಂದ ಮಹಿಳೆಯೋರ್ವರು ರಾಷ್ಟ್ರಪತಿಯಾಗಿದ್ದಾರೆ. ನಮ್ಮ ಪಕ್ಷ ಎಲ್ಲಾ ವರ್ಗದ ಜನರಿಗೂ ಗೌರವ ನೀಡುತ್ತದೆ, ಸ್ಥಾನಮಾನ ನೀಡುತ್ತದೆ ಎನ್ನುವುದಕ್ಕೆ ಅವರು ರಾಷ್ಟ್ರಪತಿ ಮುರ್ಮು ಅವರ ಉದಾಹರಣೆ ನೀಡಿರುವುದಾಗಿದೆ.

ಕಾಂಗ್ರೆಸ್ ಪಕ್ಷ ಬುಡಕಟ್ಟು ಜನರ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ದೇಶದಲ್ಲಿ ಮೀಸಲಾತಿ ವ್ಯವಸ್ಥೆಯ ಭವಿಷ್ಯದ ಬಗೆಗೂ ಸುಳ್ಳು ಮಾಹಿತಿ ಹಬ್ಬುವ ಕೆಲಸವನ್ನು ಕೈ ಪಕ್ಷ ಮಾಡುತ್ತಿದೆ. ಕಾಂಗ್ರೆಸ್ ಮೀಸಲಾತಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದು, ಬಡವರು ಮತ್ತು ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

Tags

Related Articles

Close