ಪ್ರಚಲಿತ

ಧರ್ಮದ ಹೆಸರಿನಲ್ಲಿ ದೇಶ ವಿಭಜಿಸಿದ್ದು ಕಾಂಗ್ರೆಸ್‌

ಕಾಂಗ್ರೆಸ್ ಭಾರತಕ್ಕೆ ಅಂಟಿದ ಮಾರಕ ರೋಗ ಎನ್ನುವುದರಲ್ಲಿ ಎರಡು ಮಾತಿಲ್ಲ. ದೇಶವನ್ನು ನುಂಗಿ ನೀರು ಕುಡಿದ ಕೀರ್ತಿ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು.

ದೇಶದ ಸಂಪತ್ತನ್ನು ಕೊಳ್ಳೆ ಹೊಡೆದ ಕಾಂಗ್ರೆಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ತಮ್ಮ ಮೊದಲ ಚುನಾವಣಾ ರ್ಯಾಲಿಯಲ್ಲಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವುದಾಗಿದೆ.

ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಹಾಗಲಕಾಯಿಗೆ ಹೋಲಿಕೆ ಮಾಡಿರುವ ಅವರು, ಅದನ್ನು ತುಪ್ಪದ ಜೊತೆಗೆಯೇ ಹುರಿಯಿರಿ ಅಥವಾ ಸಕ್ಕರೆಯ ಜೊತೆಗೆಯೇ ಬೆರೆಸಿರಿ. ಅದರ ರುಚಿ ಮಾತ್ರ ಬದಲಾಗುವುದಿಲ್ಲ. ಕಾಂಗ್ರೆಸ್ ಸಹ ಹಾಗೆಯೇ. ದೇಶದ ಎಲ್ಲಾ ಸಮಸ್ಯೆಗಳಿಗೂ ಮೂಲ ಕಾಂಗ್ರೆಸ್ ಪಕ್ಷವೇ ಆಗಿದೆ ಎಂದು ಕಿಡಿ ಕಾರಿದ್ದಾರೆ.

ಧರ್ಮದ ಆಧಾರದಲ್ಲಿ ದೇಶ ವಿಭಜನೆಯಾಗಲು ಕಾರಣ ಕಾಂಗ್ರೆಸ್. ದೇಶದಲ್ಲಿ ನಕ್ಸಲಿಸಂ, ಭಯೋತ್ಪಾದನೆ ಹೆಚ್ಚಾಗಲು ಕಾರಣ ಯಾರು? ಕಾಶ್ಮೀರದ ಸಮಸ್ಯೆಗಳಿಗೆ ಕಾರಣ ಯಾರು?, ದೇಶದ ಹೆಮ್ಮೆಯ ಶ್ರೀರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದ್ದು ಯಾರು? ಶ್ರೀರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡಿದವರು ಯಾರು?, ಶ್ರೀರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದವರು ಯಾರು? ಎಂದು ಅವರು ಪ್ರಶ್ನೆ ಮಾಡಿದ್ದು, ಕಾಂಗ್ರೆಸ್‌ನ ಹಗರಣಗಳು, ಕಾಂಗ್ರೆಸ್ ಕಾರಣದಿಂದ ದೇಶ ಎದುರಿಸುವ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಕಳೆದ ಹತ್ತು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ಹೊರಗಿದೆ. ಕಾಂಗ್ರೆಸ್ ಕಾರಣದಿಂದ ದೇಶ ಅನುಭವಿಸಿದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಮಗೆ ಸಾಧ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.

ದೇಶಕ್ಕೆ ಹಲವಾರು ಸಮಸ್ಯೆಗಳನ್ನು ತಂದ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯೂ ಸೋಲಿಸಿ, ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟವನ್ನು ಸೋಲಿಸಿ, ದೇಶದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್.ಡಿ.ಎ‌. ಒಕ್ಕೂಟ ಅಧಿಕಾರಕ್ಕೆ ಏರುವ ಭರವಸೆಯನ್ನು ಸಹ ಅವರು ವ್ಯಕ್ತಪಡಿಸಿದ್ದಾರೆ.

Tags

Related Articles

Close