X

ಕಾಂಗ್ರೆಸ್-ಜೆಡಿಎಸ್ ಕಿತ್ತಾಟದಲ್ಲಿ ಗೆಲುವು ಸಾಧಿಸುತ್ತಾ ಬಿಜೆಪಿ..? ಚುನಾವಣಾ ಅಖಾಡದಲ್ಲಿ ತ್ರಿಕೋನ ಸ್ಪರ್ಧೆ.!

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ‌ ರಾಜ್ಯ ವಿಧಾನಸಭಾ ಚುನಾವಣೆಗೂ ಮೊದಲು ನೇರವಾಗಿ ಪೈಪೋಟಿಗೆ ಇಳಿದಿತ್ತು. ಇತ್ತ ಪ್ರಾದೇಶಿಕ ಪಕ್ಷವಾದ ಜನತಾದಳ (ಜೆಡಿಎಸ್‌) ತಾನೂ ಯಾರಿಗೂ ಕಡಿಮೆ ಇಲ್ಲ ಎಂದು ಸ್ಪರ್ಧೆ ನೀಡಿದ್ದು, ಚುನಾವಣೆ ಮುಗಿಯುತ್ತಿದ್ದಂತೆ ಸೋತ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡವು. ಕೇವಲ ಅಧಿಕಾರದ ಆಸೆಗೆ ಬಿದ್ದ ಕುಮಾರಸ್ವಾಮಿ  ಅವರು ಕಾಂಗ್ರೆಸ್ ಜೊತೆ ಸೇರಿಕೊಂಡು ಇದೀಗ ಸರಕಾರ ರಚನೆ ಮಾಡಿ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ್ದಾರೆ. ಚುನಾವಣೆಗೂ ಮೊದಲು ಪರಸ್ಪರ ಯುದ್ಧಕ್ಕೆ ಇಳಿದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್‌ ಚುನಾವಣೆಯ ನಂತರದಲ್ಲಿ ಮೈತ್ರಿ ಮಾಡಿಕೊಂಡರೂ ಇದೀಗ ಮತ್ತೆ ಹಳೇ ರೀತಿಯಲ್ಲೇ ಕಿತ್ತಾಡಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ..!

ಸರಕಾರ ರಚನೆ ಮಾಡಲು ಮೈತ್ರಿ ಮಾಡಿಕೊಂಡ ಕಾಂಗ್ರೆಸ್-ಜೆಡಿಎಸ್ ಇದೀಗ ಬದ್ಧ ವೈರಿಗಳು..!?

ಕೇವಲ ವಿಧಾನಸೌಧದಲ್ಲಿ ಮಾತ್ರ ನಮ್ಮ ಮೈತ್ರಿ, ಸರಕಾರ ರಚಿಸಲು ಮಾತ್ರ ನಮ್ಮ ಮೈತ್ರಿ, ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಿದ ಜೆಡಿಎಸ್‌ ವರಿಷ್ಠ ದೇವೇಗೌಡರು ನೇರವಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಇಷ್ಟವಿಲ್ಲ ಎಂದಿದ್ದಾರೆ. ಅದೇ ರೀತಿ ಸೋಮವಾರ ಆರ್ ಆರ್ ನಗರದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಕೈಜೋಡಿಸಿಕೊಂಡು ಬಿಜೆಪಿಯನ್ನು ಎದುರಿಸುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ದೇವೇಗೌಡರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮಗೆ ನಮ್ಮ ಪಕ್ಷದ ಗೆಲುವಷ್ಟೇ ಮುಖ್ಯ, ಕಾಂಗ್ರೆಸ್ ಜೊತೆ ಕೈಜೋಡಿಸಿಕೊಳ್ಳುವುದಿಲ್ಲ ಎಂದಿದ್ದರು.

ಇತ್ತ ಕಾಂಗ್ರೆಸ್ ಕೂಡಾ ಆರ್ ಆರ್ ನಗರದಲ್ಲಿ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿದ್ದು, ಜೆಡಿಎಸ್‌ ಈ ಕ್ಷೇತ್ರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಸಹಕಾರ ನೀಡಿದೆ, ಅದೇ ರೀತಿ ಮೈತ್ರಿ ಮಾಡಿಕೊಂಡು ಮುಂದುವರಿಸಬೇಕಾದರೆ ಕಾಂಗ್ರೆಸ್ ಈ ಕ್ಷೇತ್ರದಿಂದ ಗೆಲ್ಲಲೇಬೇಕು ಎಂದು ಹೇಳಿಕೊಂಡಿತ್ತು. ಆದರೆ ಕಾಂಗ್ರೆಸ್ ಮಾತಿಗೆ ಸೊಪ್ಪು ಹಾಕದ ಜೆಡಿಎಸ್‌ ವರಿಷ್ಠ ದೇವೇಗೌಡರು ಕಾಂಗ್ರೆಸ್ ಜೊತೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಲು ಸಾಧ್ಯವೇ ಇಲ್ಲ ಎಂದು ನೇರವಾಗಿ ಹೇಳಿರುವುದರಿಂದ ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಪೈಪೋಟಿಯಿಂದ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಇದೆ..!

ತ್ರಿಕೋನ ಸ್ಪರ್ಧೆಯಲ್ಲಿ ಗೆಲ್ಲೋರ್ಯಾರು..?

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಈ ಮೂರು ಪಕ್ಷಗಳ ಅಭ್ಯರ್ಥಿಗಳು ಕಣಕ್ಕಿಳಿದಿದ್ದು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ ಸರಕಾರ ರಚಿಸಲು ಮೈತ್ರಿ ಮಾಡಿಕೊಂಡರು ಕೂಡ ಚುನಾವಣೆಯಲ್ಲಿ ಬೇರೆ ಬೇರೆಯಾಗಿ ಹೋರಾಟ ನಡೆಸುತ್ತದೆ. ಆದ್ದರಿಂದ ಈ ಎರಡೂ ಪಕ್ಷಗಳ ಪರಸ್ಪರ ಪೈಪೋಟಿಯಿಂದಾಗಿ ಕ್ಷೇತ್ರದ ಜನರಿಗೆ ಬಿಜೆಪಿ ಕಡೆ ಹೆಚ್ಚಿನ ಒಲವು ಉಂಟಾಗಿದೆ. ಆದ್ದರಿಂದ ಭಾರೀ ಕುತೂಹಲ ಕೆರಳಿಸಿರುವ ಆರ್ ಆರ್ ನಗರದ ಚುನಾವಣೆಯಲ್ಲಿ ಗೆದ್ದು ಸಂಭ್ರಮಿಸುವವರಾರು ಎಂಬುದನ್ನು ಕಾದು ನೋಡಬೇಕಾಗಿದೆ..!

–ಅರ್ಜುನ್

Editor Postcard Kannada:
Related Post