X

ಮೀಸಲಾತಿ ಕಿತ್ತೆಸೆಯಲಿದೆ ಕಾಂಗ್ರೆಸ್: ಮತ್ತೆ ಪರಿಶಿಷ್ಟ ಸಮುದಾಯದ ವಿರುದ್ಧ ಡಿಕೆಶಿ ಗರಂ!

ಇತ್ತೀಚೆಗೆ ರಾಜ್ಯದ ಕೆಲವು ಸಮುದಾಯಗಳ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೀಸಲಾತಿಯನ್ನು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರದ್ದುಮಾಡುವುದಾಗಿ ಕೆ ಪಿ ಸಿ ಸಿ ಅಧ್ಯಕ್ಷ ಡಿ.‌ಕೆ. ಶಿವಕುಮಾರ್ ತಿಳಿಸಿದ್ದಾರೆ.

ಡಿ ಕೆ ಶಿ ಹೇಳಿಕೆಯನ್ನು ರಾಜ್ಯ ಬಿಜೆಪಿ ಖಂಡಿಸಿದೆ. ಬಿಜೆಪಿ ಸರ್ಕಾರ ವೀರಶೈವ, ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪಂಗಡದ ಒಳಿತಿಗಾಗಿ ಮೀಸಲಾತಿ ಜಾರಿಗೆ ತಂದಿದ್ದು, ಕಾಂಗ್ರೆಸ್ ತಾವು ಅಧಿಕಾರಕ್ಕೆ ಬಂದಲ್ಲಿ ಇದನ್ನು ರದ್ದು ಮಾಡುವುದಾಗಿ ಹೇಳುತ್ತಿದೆ. ಡಿಕೆಶಿ ಅವರು ಈ ಮೀಸಲಾತಿ ರದ್ದು ಮಾಡಿ ಅಲ್ಪಸಂಖ್ಯಾತರ ಹಿತ ಕಾಪಾಡುವುದಾಗಿ ಹೇಳುತ್ತಿದೆ. ಈ ಮೂಲಕ ಕಾಂಗ್ರೆಸ್‌ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಮೀಸಲಾತಿ ಪಡೆದುಕೊಂಡ ಸಮುದಾಯಗಳ ಹಕ್ಕಿಗೆ ಚ್ಯುತಿ ತರುವ ಮನಸ್ಥಿತಿಯನ್ನು ಕಾಂಗ್ರೆಸ್ ಪ್ರದರ್ಶಿಸುತ್ತಿದೆ. ಕಾಂಗ್ರೆಸ್ ಪಕ್ಷದ ಈ ಕ್ರಮಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಶಿಕ್ಷೆಯಾಗಲಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರವು ಕೆಲವೊಂದು ಹಿಂದುಳಿದ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ಮಹತ್ವದ ನಿರ್ಣಯವನ್ನು ಕೆಲ ದಿನಗಳ ಹಿಂದಷ್ಟೇ ತೆಗೆದುಕೊಂಡಿತ್ತು. ಈ ಸಂಬಂಧ ಮೀಸಲಾತಿ ಪಟ್ಟಿಯಿಂದ ಮುಸಲ್ಮಾನರನ್ನು ಕೈ ಬಿಡಲಾಗಿತ್ತು.

ಬಿಜೆಪಿ ಸರ್ಕಾರದ ಈ ನಿರ್ಣಯವನ್ನು ಕಾಂಗ್ರೆಸ್ ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಆ ಮೂಲಕ ಸಮಾಜದ ಶಾಂತಿ ಹರಣ ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರಾದೃಷ್ಟ. ಇದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

Post Card Balaga:
Related Post