ಪ್ರಚಲಿತ

ಬಿಗ್ ಬ್ರೇಕಿಂಗ್! ಕಾಂಗ್ರೆಸ್‌ನ ಮತ್ತೆರಡು ವಿಕೆಟ್ ಪತನ..! ಸಚಿವ ಸ್ಥಾನ ಹಂಚಿಕೆಯಾಗುತ್ತಿದ್ದಂತೆ ಪಕ್ಷಕ್ಕೆ ಗುಡ್ ಬೈ ಹೇಳಿದ ಪಾಟೀಲ್..?

ಸಮ್ಮಿಶ್ರ ಸರಕಾರ ಯಾವತ್ತಿಗೂ ಶಾಶ್ವತವಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೂ ಅಧಿಕಾರದ ಆಸೆಗೆ ಬಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್‌ ಚುನಾವಣೆಯ ನಂತರದಲ್ಲಿ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿದೆ. ಮೈತ್ರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಎರಡೂ ಪಕ್ಷಗಳ ಶಾಸಕರನ್ನು ದೇವರಂತೆ ಕಾಣುತ್ತಿದ್ದ ಪಕ್ಷದ ಮುಖಂಡರು ಇದೀಗ ಮೂಲೆಗುಂಪು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಪಕ್ಷದ ಮುಖ್ಯ ಮುಖಂಡರನ್ನೇ ಕೈಬಿಟ್ಟ ಸರಕಾರ ಪಕ್ಷಕ್ಕಾಗಿ ದುಡಿದವರನ್ನು ಬದಿಗೆ ಸರಿಸಿದೆ. ಆದ್ದರಿಂದ ಆಕ್ರೋಷಗೊಂಡ ಶಾಸಕರು ಇದೀಗ ಸಾಲು ಸಾಲು ರಾಜೀನಾಮೆ ನೀಡಲು ಮುಂದಾಗಿದ್ದು, ಸಮ್ಮಿಶ್ರ ಸರಕಾರಕ್ಕೆ ಭಾರೀ ಹೊಡೆತ ಬೀಳುವ ಸಾಧ್ಯತೆಗಳಿವೆ..!

ರಾಜೀನಾಮೆ ನೀಡಲು ಮುಂದಾದ ಎಂ ಬಿ ಪಾಟೀಲ್..!?

ಎಂಬಿ ಪಾಟೀಲ್ ಸಿದ್ದರಾಮಯ್ಯ ಸರಕಾರದಲ್ಲಿ ನೀರಾವರಿ ಸಚಿವರಾಗಿದ್ದವರು. ಅದೇ ರೀತಿ ಇದೀಗ ಶಾಸಕರಾಗಿ ಆಯ್ಕೆಯಾಗಿದ್ದು, ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರು. ಆದರೆ ಕುಮಾರಸ್ವಾಮಿ ಸರಕಾರ ಎಂ ಬಿ ಪಾಟೀಲ್ ಅವರ ಹೆಸರನ್ನು ಕೈ ಬಿಟ್ಟಿದ್ದು, ಇದೀಗ ಪಾಟೀಲ್ ಹಾಗು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಎಂ.ಬಿ ಪಾಟೀಲ್ ಅವರಿಗೆ ಸಚಿವ ಸ್ಥಾನ ದೊರಕುವ ಎಲ್ಲಾ ರೀತಿಯ ನಿರೀಕ್ಷೆಗಳಿದ್ದವು, ಆದರೆ ಇದೀಗ ಸಚಿವ ಸಂಪುಟದ ಪಟ್ಟಿ ಹೊರ ಬಿದ್ದಿದ್ದು ಎಂಬಿ ಪಾಟೀಲ್ ಅವರಿಗೆ ಯಾವುದೇ ಸ್ಥಾನ ನೀಡಲಾಗಿಲ್ಲ. ಆದ್ದರಿಂದ ಆಕ್ರೋಷಗೊಂಡ ಪಾಟೀಲ್ ಬೆಂಬಲಿಗರು ಈಗಾಗಲೇ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ದು, ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತ ಸಚಿವ ಸಂಪುಟದ ಪಟ್ಟಿ ಅಂತಿಮವಾಗುತ್ತಿದ್ದಂತೆ ಆಕ್ರೋಷಗೊಂಡ ಪಾಟೀಲ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪಕ್ಷಕ್ಕಾಗಿ ನನ್ನ ಸಮುದಾಯವನ್ನೇ ಎದುರು ಹಾಕಿಕೊಂಡು ನಿಂತಿದ್ದೇನೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ನನ್ನ ಅವಶ್ಯಕತೆ ಇತ್ತು, ಆದರೆ ಇದೀಗ ಸಚಿವ ಸ್ಥಾನ ಹಂಚಿಕೆ ಮಾಡುವಾಗ ನನ್ನನ್ನು ಕಡೆಗಣಿಸಲಾಗಿದೆ. ಆದ್ದರಿಂದ ನನ್ನ ಬೆಂಬಲಿಗರು ಸೂಚಿಸಿದಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಯಾಕೆಂದರೆ ಎಂಬಿ ಪಾಟೀಲ್ ಅವರ ಬದ್ಧ ವೈರಿಯಾಗಿರುವಂತಹ ಶಿವಾನಂದ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಆದರೆ ಪಕ್ಷಕ್ಕಾಗಿ ದುಡಿದ ನನ್ನನ್ನು ಕಡೆಗಣಿಸಲಾಗಿದೆ ಎಂದು ಪಾಟೀಲ್ ಆರೋಪಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮಾಡಿರುವ ದ್ರೋಹಕ್ಕೆ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾದ ಪಾಟೀಲ್ ಅವರು , ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನೋಡಬೇಕಾಗಿದೆ.!

ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ ಪಾಟೀಲ್..!

ಸಚಿವ ಸಂಪುಟದ ಅಂತಿಮ ಪಟ್ಟಿ ಹೊರ ಬೀಳುತ್ತಿದ್ದಂತೆ ಇತ್ತ ಎಂಬಿ ಪಾಟೀಲ್ ಮತ್ತು ಅವರ ಬೆಂಬಲಿಗರ ಆಕ್ರೋಶ ಮುಗಿಲು ಮುಟ್ಟಿದೆ. ಬೆಂಬಲಿಗರು ಸೂಚಿಸಿದಂತೆ ನಾನು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೊಂಡ ಎಂಬಿ ಪಾಟೀಲ್ ಅವರು ಇಂದು ಮಧ್ಯಾಹ್ನ ೧:೧೫ಕ್ಕೆ ಸ್ಪೀಕರ್‌ಗಳ ಭೇಟಿಗೆ ಅವಕಾಶ ಕೇಳಿದ್ದಾರೆ. ಸ್ಪೀಕರ್ ಭೇಟಿಗೆ ಅವಕಾಶ ಸಿಕ್ಕಿದ್ದೇ ಆದಲ್ಲಿ ಪಾಟೀಲ್ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಸಂಪುಟ ವಿಸ್ತರಣೆಯ ವಿಚಾರದಲ್ಲಿ ಅಸಮಧಾನಗೊಂಡ ಕೆಲ ಶಾಸಕರು ಬಂಡಾಯ ಎದ್ದಿದ್ದು, ಇದೀಗ ನೇರವಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜೀನಾಮೆಗೆ ಸಿದ್ಧತೆ ನಡೆಸುತ್ತಿದ್ದು, ಸಚಿವ ಸಂಪುಟದ ಮೊದಲ ಹಂತದಲ್ಲೇ ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಅವರು ಕೂಡ ಸಚಿವ ಸ್ಥಾನ ಸಿಗದೇ ಇದ್ದಿದ್ದರಿಂದ ಅಸಮಧಾನಗೊಂಡಿದ್ದು, ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇತ್ತ ಎಸ್.ಆರ್‌ ಪಾಟೀಲ್ ಕೂಡ ಪಕ್ಷದ ನಿರ್ಧಾರದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದು, ಮಾಧ್ಯಮಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಈ ರೀತಿ ಕಡೆಗಣಿಸುವುದು ಒಳ್ಳೆಯದಲ್ಲ, ಕೇವಲ ಅವರವರ ಅನುಕೂಲಕ್ಕೆ ನಮ್ಮನ್ನು ಬಳಸಿಕೊಂಡಿದ್ದಾರೆ ಎಂದು ಪಕ್ಷದ ಮುಖಂಡರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ..!

ಆದ್ದರಿಂದ ಈಗಾಗಲೇ ಮೈತ್ರಿ ಸರಕಾರದಲ್ಲಿ ದಿನದಿಂದ ದಿನಕ್ಕೆ ಅಸಮಧಾನಗೊಂಡ ಶಾಸಕರ ಸಂಖ್ಯೆ ಹೆಚ್ಚುತ್ತಿದ್ದು, ಸಚಿವ ಸಂಪುಟದ ಪಟ್ಟಿ ಹೊರ ಬೀಳುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಶಾಸಕರು ಪಕ್ಷ ತೊರೆಯಲು ಸಜ್ಜಾಗಿದ್ದಾರೆ. ಈಗಾಗಲೇ ಎಂ.ಬಿ ಪಾಟೀಲ್ ಅವರನ್ನು ಸಮಧಾನ ಮಾಡಲು ಪ್ರಯತ್ನಿಸಿದ ಕಾಂಗ್ರೆಸ್ ಮುಖಂಡರ ಪ್ರಯತ್ನವೂ ವಿಫಲವಾಗಿದ್ದು, ಸ್ಪೀಕರ್ ಭೇಟಿಯ ಬಳಿಕವಷ್ಟೇ ಪಾಟೀಲ್ ಅವರ ಮುಂದಿನ ನಿರ್ಧಾರ ಗೊತ್ತಾಗಲಿದೆ..!

–ಅರ್ಜುನ್

Tags

Related Articles

Close