ಪ್ರಚಲಿತ

ಐತಿಹಾಸಿಕ ದಾಖಲೆ ಬರೆದ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ

ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಸಮಿತಿಯ ಪುರುಷರ ಜಾವೆಲಿನ್ ಥ್ರೋ ವಿಭಾಗದ ವಿಶ್ವ ಶ್ರೇಯಾಂಕ ಪ್ರಕಟವಾಗಿದ್ದು, ಇದರಲ್ಲಿ ಒಲಿಂಪಿಕ್ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ನಂ. ಒನ್ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಆ ಮೂಲಕ ನೀ ರಾಜ್ ಅವರು ಐತಿಹಾಸಿಕ ದಾಖಲೆಯೊಂದನ್ನು ಬರೆದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ. ಇವರು ೨೦೨೦ ರಲ್ಲಿ ಟೊಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಮುತ್ತಿಡುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ್ದರು.

ಸದ್ಯ ವಿಶ್ವ ಅಥ್ಲೆಟಿಕ್ಸ್‌ನ ಟ್ರ್ಯಾಕ್ ಆಂಡ್ ಪೀಲ್ಟ್ ವಿಭಾಗದ ವಿಶ್ವ ಶ್ರೇಯಾಂಕದಲ್ಲಿ ನಂ. ಒನ್ ಎನಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಆಗಿದ್ದ ಗ್ರನೆಡಾದ ಆಂಡರ್ಸನ್ ಪೀಟರ್ ಅವರನ್ನು ಹಿಂದಿಕ್ಕಿ ಚೋಪ್ರಾ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

Tags

Related Articles

Close