ಪ್ರಚಲಿತ

ಎನ್.ಎನ್. ವೋಹ್ರಾ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ ಆಪರೇಷನ್ ಟೆರರ್!!

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ-ಪಿಡಿಪಿ ಮೈತ್ರಿ ಸರಕಾರ ಈಗಾಗಲೇ ಪತನಗೊಂಡಿದ್ದು, ತೀವ್ರ ಆಂತರಿಕ ವೈರುಧ್ಯ, ಸಂಪೂರ್ಣ ಹದಗೆಟ್ಟ ಭದ್ರತಾ ಪರಿಸ್ಥಿತಿಯಿಂದಾಗಿ ಮೈತ್ರಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದಿದೆ. ಹೀಗಾಗಿ ಜಮ್ಮು-ಕಾಶ್ಮೀರದಲ್ಲಿ ಅಧಿಕೃತವಾಗಿ ರಾಜ್ಯಪಾಲರ ಆಡಳಿತಕ್ಕೆ ವೇದಿಕೆ ಸಜ್ಜಾಗಿದ್ದು, ಎನ್.ಎನ್. ವೋಹ್ರಾ ಅಧಿಕಾರ ಸ್ವೀಕರಿಸಿದ್ದಾರೆ!! ಇದರ ಬೆನ್ನಲ್ಲಿಯೇ ಭಾರತೀಯ ಸೇನೆ ಉಗ್ರರನ್ನು ಮಟ್ಟಹಾಕಲು ಕಣಿವೆ ರಾಜ್ಯದಲ್ಲಿ ಸೇನಾ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.

ಈಗಾಗಲೇ ಅಮರನಾಥ ಯಾತ್ರೆಯ ವಿಚಾರವಾಗಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಉಗ್ರರು ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ ಎಲ್ಲಾ  ಪೊಲೀಸ್ ಠಾಣೆಗಳು, ಚೆಕ್       ಪೋಸ್ಟ್’ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಗಡಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ಒಳನುಸುಳುವಿಕೆ ಕಂಡು ಬಂದ ಕೂಡಲೇ ಕಾರ್ಯಪ್ರವೃತ್ತರಾಗುವಂತೆಯೂ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಆದರೆ ಇದೀಗ ಜಮ್ಮು-ಕಾಶ್ಮೀರದಲ್ಲಿ  ಅಧಿಕಾರ ಎನ್.ಎನ್. ವೋಹ್ರಾ  ಸ್ವೀಕರಿಸಿದ್ದು, ಈ ಬೆನ್ನಲ್ಲೇ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಶುರು ಮಾಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ!! ಅದರಂತೆಯೇ, ಮಂಗಳವಾರ ಶುರುವಾದ ಕಣಿವೆ ರಾಜ್ಯದ ಅಚ್ಚರಿಯ ರಾಜಕೀಯ ಬೆಳವಣಿಗೆ ಬುಧವಾರ ಮಧ್ಯಾಹ್ನದ ಹೊತ್ತಿಗೆ ತಾರ್ಕಿಕ ಅಂತ್ಯ ಕಂಡಿದ್ದು, ಮಂಗಳವಾರ ತಡರಾತ್ರಿಯೇ ರಾಜ್ಯ ಪಾಲರು ರಾಷ್ಟ್ರಪತಿ ಆಳ್ವಿಕೆಗಾಗಿ ಶಿಫಾರಸು ಮಾಡಿ, ರಾಷ್ಟ್ರಪತಿ ಭವನಕ್ಕೆ ಕಳುಹಿಸಿ ಕೊಟ್ಟಿದ್ದರು.

ಆದರೆ ವಿದೇಶ ಪ್ರವಾಸ ದಲ್ಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಈ ಶಿಫಾರಸಿಗೆ ಸಹಿ ಹಾಕಿ ವಾಪಸ್ ಕಳುಹಿಸಿದ್ದು, ಆರು ತಿಂಗಳ ವರೆಗೆ ರಾಜ್ಯಪಾಲರ ಆಳ್ವಿಕೆ ಇರಲಿದೆ ಎಂದು ತಿಳಿದು ಬಂದಿದೆ. ಈ ಆದೇಶ ಬರುತ್ತಿದ್ದಂತೆ ಅಧಿಕಾರ ವಹಿಸಿಕೊಂಡಿರುವ ರಾಜ್ಯಪಾಲ ಎನ್.ಎನ್. ವೋಹ್ರಾ, ಶ್ರೀನಗರದಲ್ಲಿ ಹಿರಿಯ ಅಧಿಕಾರಿಗಳ ಜತೆ ಭದ್ರತಾ ವ್ಯವಸ್ಥೆ ಕುರಿತಂತೆ ಸಭೆ ನಡೆಸಿದ್ದಾರೆ!!

ಇನ್ನು, ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ ಎನ್ನುವ ವಿಚಾರ ಗೊತ್ತೇ ಇದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. ಕಳೆದ ಬಾರಿ ಕೂಡ ಅಮರನಾಥ ಯಾತ್ರೆ ವೇಳೆ ಉಗ್ರರು ದಾಳಿ ನಡೆಸಿದ್ದು ಈ ರೀತಿಯ ದಾಳಿಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿರುವ ಕೇಂದ್ರ ಸರಕಾರವು ಈಗಾಗಲೇ ಭದ್ರತಾ ಕ್ರಮಗಳನ್ನು ಹೆಚ್ಚಿಸುತ್ತಿದೆಯಲ್ಲದೇ ಉಗ್ರರನ್ನು ಸದೆಬಡಿಯಲು ಸೇನೆಯೂ ಸಜ್ಜಾಗಿ ನಿಂತಿದೆ.

ಆದರೆ ರಾಜ್ಯಪಾಲ ಎನ್.ಎನ್. ವೋಹ್ರಾ, ಶ್ರೀನಗರದಲ್ಲಿ ಹಿರಿಯ ಅಧಿಕಾರಿಗಳ ಜತೆ ಭದ್ರತಾ ವ್ಯವಸ್ಥೆ ಕುರಿತಂತೆ ಸಭೆ ನಡೆಸಿದ ಬೆನ್ನಲ್ಲೇ ಛತ್ತೀಸ್‍ಗಡದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರನ್ನು ಕಣಿವೆ ರಾಜ್ಯಕ್ಕೆ ವರ್ಗಾಯಿಸಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಬಿ.ಬಿ.ವ್ಯಾಸ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ವಿಜಯ ಕುಮಾರ್ ಅವರನ್ನು ರಾಜ್ಯಪಾಲರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಇನ್ನು ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸೇನೆ ಕೂಡ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸನ್ನದ್ಧವಾಗುತ್ತಿದ್ದು, ಶೀಘ್ರದಲ್ಲೇ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಹೇಳಿದ್ದಾರೆ!! ಅಷ್ಟೇ ಅಲ್ಲದೇ, ಸೇನಾ ಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಒಟ್ಟಿಗೆ ಸೇರಿ ಉಗ್ರರ ವಿರುದ್ಧ ಸಮರ ಸಾರುವ ಎಲ್ಲ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ!!

ಕಾಶ್ಮೀರದ  ಪೊಲೀಸ್ ಮೂಲಗಳ ಪ್ರಕಾರ, ಈಗಾಗಲೇ ಸಿದ್ಧತೆಯೂ ಆರಂಭವಾಗಿದ್ದು, ಸ್ಥಳೀಯ ಮಟ್ಟದಲ್ಲಿ  ಪೊಲೀಸರಿಗೆ ಸಿಗುವ ಮಾಹಿತಿಯನ್ನು ಇರಿಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತದೆ. ಅಲ್ಲದೆ,  ಪೊಲೀಸರು ನೇರವಾಗಿ ರಾಜ್ಯಪಾಲರ ಮೂಲಕ ಕೇಂದ್ರ ಸರಕಾರದ ಅಡಿಯಲ್ಲಿ ಬರುವುದರಿಂದ ಮಾಹಿತಿ ಹಂಚಿಕೆಗೂ ಸುಲಭವಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಉಗ್ರರು ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿ ಉಗ್ರರನ್ನು ಮಟ್ಟಹಾಕಲು ಭಾರತೀಯ ಸೇನೆ ಈಗಾಗಲೇ ಕಾರ್ಯಾಚರಣೆ ಶುರು ಮಾಡಿದ್ದು, ಕಳೆದ ವರ್ಷ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ನಡೆದಂತಹ ಉಗ್ರರ ಸಂಚುಗಳು ಈ ಬಾರಿ ನಡೆಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಮೂಲ:

https://www.udayavani.com/kannada/news/national-news/303119/rajnath-singh-bipin-rawat-take-tough-line-on-kashmir-militants-after-bjp-pulls-the-plug-on-pdp

– ಅಲೋಖಾ

 

Tags

Related Articles

Close