ಪ್ರಚಲಿತ

ಬರ ಪರಿಹಾರ ವಿತರಣೆ : ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದೆ ಕಾಂಗ್ರೆಸ್

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕರ್ನಾಟಕವನ್ನು ಬರ ಪರಿಹಾರ ವಿಚಾರಕ್ಕೆ ಸಂಬಂಧಿಸಿದ ಹಾಗೆ ಟಾರ್ಗೆಟ್ ಮಾಡುತ್ತದೆ ಎಂದು ಸುಳ್ಳು ಆರೋಪ ಹೊರಿಸಿ ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ತನ್ನ ಬೇಳೆ ಬೇಯಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸುತ್ತಿದೆ.

ಈ ಬಗ್ಗೆ ಕೇಂದ್ರ ಸಚಿವ ಎಸ್. ಜೈಶಂಕರ್ ಅವರು ಮಾತನಾಡಿದ್ದು, ಬರ ಪರಿಹಾರ ವಿಷಯವೇ ಆಗಲಿ ಅಥವಾ ಇನ್ಯಾವುದೇ ವಿಚಾರದಲ್ಲಿ ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಕರ್ನಾಟಕವನ್ನು ಯಾವುದೇ ರೀತಿಯಲ್ಲಿಯೂ ಟಾರ್ಗೆಟ್ ಮಾಡುತ್ತಿಲ್ಲ. ಇಂತಹ ತಪ್ಪು ಮಾಹಿತಿಯನ್ನು ಜನರಲ್ಲಿ ಕಾಂಗ್ರೆಸ್ ಅಥವಾ ಇನ್ಯಾವುದೇ ಪಕ್ಷಗಳು ಮೂಡಿಸುವ ಕೆಲಸವನ್ನು ಮಾಡುತ್ತಿದ್ದರು ಅದು ಸತ್ಯಕ್ಕೆ ದೂರವಾದ ಸಂಗತಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಷಯದಲ್ಲಿ ತರತಮ ನೀತಿ ಅನುಸರಿಸುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ವಿಷಯ. ಪರಿಹಾರ ತಲುಪುವಲ್ಲಿ ಕೇವಲ ಕರ್ನಾಟಕಕ್ಕೆ ಮಾತ್ರ ವಿಳಂಬವಾಗಿಲ್ಲ. ದೇಶದ ನಾಲ್ಕೈದು ರಾಜ್ಯಗಳಿಗೆ ಹೀಗೆ ಆಗಿದೆ. ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಹಣ ಬಿಡುಗಡೆಗೆ ಸಂಬಂಧಿಸಿದ ಹಾಗೆ ಚುನಾವಣಾ ಆಯೋಗಕ್ಕೆ ಕೇಳಿಕೊಳ್ಳಲಾಗಿದೆ. ಆದರೆ ಇದು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕೆ ಆಯೋಗ ದಿಂದ ಸಮ್ಮತಿ ಸಿಕ್ಕಿಲ್ಲ. ಹಾಗಾಗಿ ಬರ ಪರಿಹಾರ ಹಣ ಬಿಡುಗಡೆ ವಿಳಂಬವಾಗಿದೆ. ಇದರಲ್ಲಿ ರಾಜಕೀಯ ಮಾಡುವುದು ತಪ್ಪು ಎಂದು ಅವರು ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳು ತಮ್ಮ ಹಕ್ಕು ಪಡೆಯುವ ಸಲುವಾಗಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ ಎಂಬ ಆರೋಪ ಹೊರಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದವು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕೇರಳ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತು ನಿರ್ವಹಿಸದೆ ದಿವಾಳಿಯಾದರೆ ಅದಕ್ಕೆ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ಹೇಳಿದೆ. ಇದೇ ಆರ್ಥಿಕ ಶಿಸ್ತಿನ ನೀತಿ ಕರ್ನಾಟಕಕ್ಕೂ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ರಾಜ್ಯ ಸರ್ಕಾರಗಳು ಹಣವನ್ನು ಸರಿಯಾಗಿ ನಿರ್ವಹಿಸದೆ ಕೇಂದ್ರ ಸರ್ಕಾರದ ಬಳಿ ಆರ್ಥಿಕ ಸಹಾಯ, ಇನ್ನಿತರ ನೆರವು ಕೇಳುತ್ತಿದ್ದರೆ ಅದು ರಾಜಕೀಯ ಆಗುತ್ತದೆಯೇ ಹೊರತು ಆಡಳಿತ ಆಗಲಾರದು ಎಂದು ಅವರು ಕರ್ನಾಟಕದ ಕೈ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾನ ಪಡೆಯುವ ಬಗೆಗೂ ಅವರು ವಿಶ್ವಾಸ‌ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳ ತಾತ್ಕಾಲಿಕ ಗ್ಯಾರಂಟಿಗಳಿಗೆ ಮನಸೋಲದೆ ಜನರು ಬಿಜೆಪಿಯ ದೀರ್ಘಕಾಲದ ಗ್ಯಾರಂಟಿಗಳ ಮೇಲೆ ನಂಬಿಕೆ ಇರಿಸಿ ಮತ ನೀಡುವ ಭರವಸೆಯನ್ನು ಸಹ ವ್ಯಕ್ತಪಡಿಸಿದ್ದಾರೆ.

Tags

Related Articles

Close