ಪ್ರಚಲಿತ

ಹಿಂದೂಗಳ ರಕ್ಷಣೆಗೆ ಇದ್ದ ಒಂದೇ ಒಂದು ಕಾನೂನನ್ನು ರದ್ದುಗೊಳಿಸಿದ ಕಾಂಗ್ರೆಸ್ ಸರಕಾರ

ಬಿಟ್ಟಿ ಯೋಜನೆಗಳ ಮೂಲಕವೇ ಗೆದ್ದು ಅಧಿಕಾರಕ್ಕೇರಿರುವ ಕಾಂಗ್ರೆಸ್, ಈ ಹಿಂದಿನ ಬಿಜೆಪಿ ಸರ್ಕಾರದ ಮಹತ್ವದ ಹಲವು ಯೋಜನೆಗಳಿಗೆ ಕತ್ತರಿ ಹಾಕುವ ಕೆಲಸದಲ್ಲಿ ಹೆಚ್ಚು ಉತ್ಸಾಹ ತೋರುತ್ತಿದೆ.

ಎಲ್ಲರಿಗೂ ನಾವು ನೀಡಿರುವ ಉಚಿತ ಭರವಸೆಯನ್ನು ತಲುಪಿಸುವ ಕೆಲಸ ಮಾಡುತ್ತೇವೆ ಎಂದಿದ್ದ ಕಾಂಗ್ರೆಸ್ ಪಕ್ಷ, ಅಧಿಕಾರ ದೊರೆತ ಬಳಿಕ ಜಾಣ ಕುರುಡು ಪ್ರದರ್ಶಿಸುತ್ತಿರುವುದು, ತಮಗೂ ನಾವು ನೀಡಿದ ಭರವಸೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಸಾಬೀತು ಮಾಡುತ್ತಿದೆ. ಇನ್ನೇನು ಜನ ವಿರೋಧ ಹೆಚ್ಚಾಗುತ್ತದೆ ಎನ್ನುವ ಸಮಯದಲ್ಲಿ ಷರತ್ತು‌ಗಳ ಮೂಲಕ ಉಚಿತಗಳನ್ನು ನೀಡಲು ಕಾಂಗ್ರೆಸ್ ಮುಂದಾದ ಕಥೆ ಈಗ ಸ್ವಲ್ಪ ಹಳೆಯದು.

ಇದೆಲ್ಲದರ ನಡುವೆ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಜನ ವಿರೋಧಿ ನಡೆಗೆ ಮುಂದಾಗಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಈ ದೇಶದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಲವು ಸಮಾಜಕ್ಕೆ ಪೂರಕವಾದ ಕಾಯ್ದೆಗಳನ್ನು ರದ್ದು ಮಾಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದೆ‌. ಅದರಲ್ಲಿಯೂ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುವ ಮೂಲಕ, ಮತಾಂಧ ಶಕ್ತಿಗಳಿಗೆ ಸಹಾಯ ಮಾಡುವ ಕೆಲಸವನ್ನು ಸರ್ಕಾರ ಮಾಡಲು ಹೊರಟಿರುವುದು ಖೇದಕರ.

ಮತಾಂತರ‌ ಸಮಸ್ಯೆಯಿಂದ ರಾಜ್ಯ ನಲುಗಿ ಹೋಗಿರುವುದನ್ನು ಮನಗಂಡ ಈ ಹಿಂದಿನ ಬಿಜೆಪಿ ಸರ್ಕಾರ, ಅದರಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರವಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆ ಮತಾಂತರ ಮಾಡಿಸುವ ದುರುಳರಿಗೆ ಸಿಂಹಸ್ವಪ್ನವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಈ ಕಾಯ್ದೆಗೂ ಎಳ್ಳು ನೀರು ಬಿಡುವ ಮೂಲಕ, ಮತಾಂತರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವವರಿಗೆ ಸಹಾಯ ಮಾಡಿದೆ. ಆ ಮೂಲಕ ಜನ ಸಾಮಾನ್ಯರಿಗೆ ತೊಂದರೆಯಾಗುವಂತೆ ಮಾಡಿದೆ ಎನ್ನುವುದರಲ್ಲಿ ಸಂದೇಹವಿಲ್ಲ.

ಒಟ್ಟಿನಲ್ಲಿ ಬಿಜೆಪಿ ಮೇಲಿನ ದ್ವೇಷದಿಂದ ಸಾರ್ವಜನಿಕರಿಗೆ ಉಪಯುಕ್ತವಾದ ಕಾಯ್ದೆಗಳನ್ನು ಹಿ ಪಡೆಯುತ್ತಿರುವ ಕಾಂಗ್ರೆಸ್‌ನ ಈ ನಿಲುವು ಖಂಡನಾರ್ಹ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಬದಲಾಗಲಿ ಎಂಬುದಷ್ಟೇ ನಮ್ಮ ಆಶಯ.

Tags

Related Articles

Close