ಪ್ರಚಲಿತ

ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದು ಯಾರಿಗೆ, ಯಾತಕ್ಕೆ..

ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಡಳಿತ ವಹಿಸಿಕೊಂಡು ಒಂಬತ್ತು ವರ್ಷಗಳನ್ನು ಪೂರೈಸಿದೆ. ಕೇಂದ್ರ ಸರ್ಕಾರ ನವ ವರ್ಷಗಳನ್ನು ಪೂರೈಸಿದ ಸಂತಸದಲ್ಲಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಆ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

ದೇಶ‌ ಸೇವೆಯಲ್ಲಿ ಒಂಬತ್ತು ವರ್ಷ ಪೂರೈಸಿದ್ದು, ಈ ಸಂದರ್ಭದಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ. ಭಾರತದ ಜನರ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರತಿಯೊಂದು ನಿರ್ಧಾರ, ಪ್ರತಿಯೊಂದು ಕ್ರಿಯೆಯನ್ನು ಸರ್ಕಾರ ತೆಗೆದುಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ನಾವು ಮತ್ತಷ್ಟು ಶ್ರಮ ಪಡುತ್ತೇವೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು #9yearsofSeva ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರ್ಕಾರದ ನವ ವರ್ಷದ ಸಂಭ್ರಮವನ್ನು ಸಾರ್ವಜನಿಕರ ಜೊತೆಗೆ ಹಂಚಿಕೊಂಡಿದ್ದಾರೆ.

ಮೇ ೨೪ ಕ್ಕೆ ಪ್ರಧಾನಿ ಮೋದಿ ಅವರ ಸರ್ಕಾರ ಯಶಸ್ವಿ ಒಂಬತ್ತು ವರ್ಷಗಳ ಆಡಳಿತ ಪೂರೈಸಿದೆ. ಈ ಅವಧಿಯಲ್ಲಿ ಎದುರಾದ ಹಲವಾರು ಸವಾಲುಗಳನ್ನು ಸಮರ್ಥವಾಗಿ ಜಯಿಸಿ, ದೇಶವನ್ನು ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲಾಗಿದೆ. ಕೊರೋನಾ ಸಂಕಷ್ಟದ ಬಳಿಕವೂ ಭಾರತದ ಆರ್ಥಿಕತೆ ಭದ್ರವಾಗಿದೆ ಎಂದರೆ ಅದಕ್ಕೆ ಪ್ರಧಾನಿ ಮೋದಿ ಸರ್ಕಾರದ ಜನಪರ, ದೂರದರ್ಶಿತ್ವದ ಆಡಳಿತವೇ ಕಾರಣ ಎಂದೆನ್ನಬಹುದು. ಸ್ವಾವಲಂಬಿ ಭಾರತ, ಸ್ವಾಭಿಮಾನಿ ಭಾರತದ ನಿರ್ಮಾಣದಲ್ಲಿ ಪ್ರಧಾನಿ ಮೋದಿ ಸರ್ಕಾರದ ಪಾತ್ರ ಮಾದರಿ ಎನ್ನುವುದರಲ್ಲಿ ಎರಡು ಮಾತಿಲ್ಲ.

Tags

Related Articles

Close