ಪ್ರಚಲಿತ

ಖರ್ಗೆ ಕೋಟೆಯತ್ತ ಮೋದಿ ಚಿತ್ತ: ಕಲ್ಯಾಣ ಕರ್ನಾಟಕದಲ್ಲಿ ಕೇಸರಿ ದರ್ಬಾರ್ ಶುರು!

ಬಿಜೆಪಿಯು ಅಭಿವೃದ್ಧಿಯ ಆಶಯದ ಜೊತೆಗೆ ಆಡಳಿತ ನಡೆಸುತ್ತಿದೆ. ನಮ್ಮ ಸರಕಾರದ ಆದ್ಯತೆ ಓಟ್ ಬ್ಯಾಂಕ್ ಅಲ್ಲ. ಡಬಲ್ ಎಂಜಿನ್ ಸರಕಾರದಿಂದ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯ. ಡಬಲ್ ಎಂಜಿನ್ ಸರಕಾರದಿಂದ ಕರ್ನಾಟಕ ರಾಜ್ಯಕ್ಕೆ ಯಾವ ರೀತಿಯಲ್ಲಿ ಅನುಕೂಲವಾಗುತ್ತಿದೆ ಎಂಬುದನ್ನು ನೋಡಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕೊಡೇಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ, ನೀರಾವರಿ, ಕುಡಿಯುವ ನೀರು ಸೇರಿದಂತೆ ವಿವಿಧ ಕಾಮಗಾರಿ ಗಳಿಗೆ ಶಂಕುಸ್ಥಾಪನೆ, ವಿವಿಧ ಯೋಜನೆಗಳನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಪ್ರಸ್ತುತ ಈ ಶತಮಾನದ ಭಾರತ ಅಭಿವೃದ್ಧಿ ಹೊಂದಬೇಕಾದರೆ ಜಲ ಭದ್ರತೆ ಅಗತ್ಯ ವಿಷಯವಾಗಿದೆ. ಈ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮುಂದಿನ ೨೫ ವರ್ಷಗಳು ಅಮೃತ ಕಾಲವಾಗಿದೆ. ಇದು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದ ದೃಷ್ಟಿಯಿಂದ ಮಹತ್ವ ಪಡೆದಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ದೇಶದ ಅಭಿವೃದ್ಧಿಗೆ ಉತ್ತಮ ಪ್ರಮಾಣದ ಕೃಷಿ, ಕೈಗಾರಿಕೆಗಳ ಅಭಿವೃದ್ಧಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರಗಳು ಯಾದಗಿರಿ ಮತ್ತು ಉತ್ತರ ಕರ್ನಾಟಕದ ಸುತ್ತಮುತ್ತಲಿನ ಅಭಿವೃದ್ಧಿ ಕಾಣದ ಪ್ರದೇಶಗಳನ್ನು ಮೂಲೆಗುಂಪಾಗಿಸಿವೆ. ಅವುಗಳನ್ನು ಹಿಂದುಳಿದ ಪ್ರದೇಶಗಳು ಎಂದು ಘೋಷಿಸಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡಿವೆ ಎಂದು ಕಾಂಗ್ರೆಸ್ ಪಕ್ಷವನ್ನು ಪರೋಕ್ಷವಾಗಿ ತಿವಿದಿದ್ದಾರೆ.

Tags

Related Articles

Close