ಪ್ರಚಲಿತ

ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಮಹಿಳೆಯರಿಂದ ಹೊಸ ಪಕ್ಷದಿಂದ ಸ್ಪರ್ಧೆ! ನಾಶವಾಗುತ್ತಾ ಕಾಂಗ್ರೆಸ್?

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನ ವಿರುದ್ದ ಜನರ ಧ್ವನಿಯೂ ಜೋರಾಗುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸಿದ್ದರಾಮಯ್ಯ ಸರಕಾರ ಸಂಪೂರ್ಣ ವಿಫಲಗೊಂಡಿದ್ದು ಇದೀಗ ಇದರ ವಿರುದ್ಧ ಹೋರಾಡಲು ಹೊಸ ಮಹಿಳಾ ಪಕ್ಷವೊಂದು ತಲೆ ಎತ್ತಿದೆ.

ರಚನೆಯಾಯಿತು ಮತ್ತೊಂದು ಪಕ್ಷ..!

ಕರ್ನಾಟಕದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಇಡೀ ದೇಶವೇ ಬಹಳ
ಕುತೂಹಲದಿಂದ ಕಾಯುತ್ತಿರುವ ಚುನಾವಣೆ ಇದಾಗಿದ್ದು , ಎಲ್ಲಾ ರಾಜಕೀಯ ಪಕ್ಷಗಳಿಗೂ ಮಹತ್ತರವಾದ ಘಟ್ಟವಾಗಿದೆ. ರಾಜ್ಯ ಕಾಂಗ್ರೆಸ್ ನ ಆಡಳಿತ ವೈಫಲ್ಯಕ್ಕೆ ಇಡೀ ರಾಜ್ಯದ ಜನತೆ ಸಿದ್ದರಾಮಯ್ಯನವರಿಗೆ ಶಾಪ ಹಾಕುತ್ತಿದೆ. ಇದೀಗ ಸಿದ್ದರಾಮಯ್ಯನವರ ಜನವಿರೋಧಿ ನೀತಿಗೆ ಸೆಡ್ಡುಹೊಡೆಯಲು ಹೊಸ ಪಕ್ಷವೇ ಉದಯವಾಗಿದೆ. ‘ಎಂಇಪಿ’ ಎಂಬ ಮಹಿಳಾ ಸಬಲೀಕರಣಕ್ಕಾಗಿ ಹುಟ್ಟಿಕೊಂಡ ಪಕ್ಷವು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ರಾಜ್ಯ ಸರಕಾರದ ವಿರುದ್ಧ ಕಿಡಿ..!

ಸಿದ್ದರಾಮಯ್ಯನವರ ಆಡಳಿತದಲ್ಲಿ ಇಡೀ ರಾಜ್ಯದಲ್ಲಿ ನರಕದ ವಾತಾವರಣ ಸೃಷ್ಟಿಯಾಗಿದೆ. ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ವಿರುದ್ಧ ಇಂದು ಕಿಡಿಕಾರಿದ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಛಾಟಿ ಬೀಸಿದ್ದಾರೆ. ಕರ್ನಾಟಕದಲ್ಲಿ ರೈತರ ಸಾವಿಗೆ ಬೆಲೆಯೇ ಇಲ್ಲದಂತಾಗಿದೆ. ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡರು ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿಯೂ ಸಿದ್ದರಾಮಯ್ಯ ಸರಕಾರ ವಿಫಲವಾಗಿದ್ದು, ಹಾಡುಹಗಲೇ ಅತ್ಯಾಚಾರ – ಹೆಣ್ಣು
ಮಕ್ಕಳ ಅಪಹರಣ ಪ್ರಕರಣಗಳು ಹೆಚ್ಚುತ್ತಿದೆ ಎಂದು ಆರೋಪಿಸಿದರು. ನಮ್ಮ ಪಕ್ಷ ಈಗಾಗಲೇ ಮಹಿಳೆಯರನ್ನು ಒಗ್ಗೂಡಿಸಿದ್ದು , ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಸೋಲು ಖಚಿತ ಎಂದು ಹೇಳಿದರು.

ಸಿದ್ದರಾಮಯ್ಯನವರ ಸರಕಾರದ ವಿರುದ್ಧ ಈಗಾಗಲೇ ರಾಜ್ಯದ ಜನತೆ ರೊಚ್ಚಿಗೆದ್ದಿದ್ದು , ಇದೀಗ ಮಹಿಳಾ ಸಬಲೀಕರಣದ ಹೆಸರಿನಲ್ಲಿ ರಚನೆಯಾದ ಎಂಇಪಿ ಪಕ್ಷವು ಕೂಡ ರಾಜ್ಯ ಸರಕಾರದ ವಿರುದ್ಧ ಸಿಡಿದೆದ್ದಿದೆ. ಎಲ್ಲಾ ರೀತಿಯಲ್ಲೂ ಸಿದ್ದರಾಮಯ್ಯನವರ ಆಡಳಿತ ವ್ಯವಸ್ಥೆ ಕುಸಿದಿದ್ದು ಸದ್ಯ ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ಎದ್ದು
ಕಾಣುತ್ತಿರುವುದೇ ಸಾಕ್ಷಿ..!

–ಅರ್ಜುನ್

Tags

Related Articles

Close