ಪ್ರಚಲಿತ

ರಾಷ್ಟ್ರದ ಭದ್ರತೆಗೆ ಧಕ್ಕೆ ಮಾಡುವ ಜಮಾತ್ ಎ ಇಸ್ಲಾಮಿ ಸಂಘಟನೆಗೆ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ

ದೇಶ ವಿರೋಧಿ ಸಂಘಟನೆಗಳ ವಿರುದ್ಧ, ಜನರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತಿದೆ.‌ ಕಳೆದ ಹತ್ತು ವರ್ಷಗಳ ಪ್ರಧಾನ ಮೋದಿ ನೇತೃತ್ವದ ಎನ್‌ಡಿಎ ಆಡಳಿತದಲ್ಲಿ ಉಗ್ರರು ಮತ್ತು ಅವರಿಗೆ ಬೆಂಬಲ‌ ನೀಡುವ ನಾಮರ್ಧರು ಬಾಲ ಮುದುರಿ ಕುಳಿತಿದ್ದಾರೆ ಎಂದರೆ, ಅದು ಸರ್ಕಾರದ ಮೇಲಿನ ಭಯದಿಂದ ಎಂದು ನಿಸ್ಸಂಶಯವಾಗಿ ಹೇಳಬಹುದು.

ರಾಷ್ಟ್ರದ ಭದ್ರತೆಗೆ ಧಕ್ಕೆ ಮಾಡುವ ಜಮಾತ್ ಎ ಇಸ್ಲಾಮಿ ಸಂಘಟನೆಗೆ ಸಂಬಂಧಿಸಿದ ಹಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಹಾಗೆ ದೇಶ ವಿರೋಧಿ ಸಂಘಟನೆ ಜಮಾತ್ ಎ ಇಸ್ಲಾಮಿ ಸಂಘಟನೆಯ ಮೇಲಿನ ನಿಷೇಧವನ್ನು ಮುಂದಿನ ಐದು ವರ್ಷಗಳ ಅವಧಿಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯವು ಆದೇಶ ಹೊರಡಿಸಿದೆ. ದೇಶದ್ರೋಹಿ ಸಂಘಟನೆಗೆ ಸಂಬಂಧಿಸಿದ ಈ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವ ಹಾಗೆ ಹೊರಡಿಸಲಾಗಿದೆ. ಮುಂದಿನ ಐದು ವರ್ಷಗಳ‌ ಅವಧಿಗೆ ಆ ನಿಷೇಧವನ್ನು ವಿಸ್ತರಣೆ ಮಾಡಲಾಗಿದ್ದು, ಇದನ್ನು ಕಾನೂನು ಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಘೋಷಣೆ ಮಾಡಿರುವುದಾಗಿದೆ.

ಈ ಬಗ್ಗೆ ಅಮಿತ್ ಶಾ ಮಾಹಿತಿ ನೀಡಿದ್ದು, ದೇಶದ ಭದ್ರತೆಗೆ ಅಪಾಯ, ಆತಂಕವನ್ನು ತಂದೊಡ್ಡುವವರು ಯಾರೇ ಆಗಲಿ, ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಗಳನ್ನು ತೆಗೆದುಕೊಳ್ಳುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿದವರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ. ಜಮಾತ್ ಎ ಇಸ್ಲಾಮಿ ಸಂಘಟನೆಯು ದೇಶದ ಭದ್ರತೆ, ಸಾರ್ವಭೌಮತೆ, ಸಮಗ್ರತೆಯ ವಿರುದ್ಧ ತನ್ನ ಚಟುವಟಿಕೆಗಳನ್ನು ಮುಂದುವರೆಸಿದ್ದು, ಆ ಹಿನ್ನಲೆಯಲ್ಲಿ ಸರ್ಕಾರ ಆ ಸಂಘಟನೆಯನ್ನು ಮುಂದಿನ ಐದು ವರ್ಷಗಳ ವರೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

ಪ್ರಧಾನ್ ನರೇಂದ್ರ ಮೋದಿ ನೇತೃತ್ವದ ನಮ್ಮ ಸರ್ಕಾರ ಭಯೋತ್ಪಾದನೆ, ಪ್ರತ್ಯೇಕವಾದದ ‌ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ. ಈ ನೀತಿಯನ್ವಯವೇ ಈ ಉಗ್ರ ಸಂಘಟನೆಯ ಮೇಲಿನ ನಿಷೇಧವನ್ನು ವಿಸ್ತರಣೆ ಮಾಡಲಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಶಾ ಟ್ವೀಟ್ ಮಾಡಿದ್ದಾರೆ.

ಇನ್ನು ಈ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಹಾಗೆ, ಅದರ ವಿರುದ್ಧ ದಾಖಲು ಮಾಡಲಾದ ನಲವತ್ತೇಳು ಪ್ರಕರಣಗಳ ಪಟ್ಟಿಯನ್ನು ಸಹ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಸಂಘಟನೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆಗೆ ನಿಕಟ ಸಂಪರ್ಕವನ್ನು ಹೊಂದಿದೆ. ಜೊತೆಗೆ ದೇಶದ ಇತರೆಡೆಗಳಲ್ಲಿಯೂ ಉಗ್ರವಾದವನ್ನು ಬೆಂಬಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ಆದೇಶವನ್ನು ಹೊರಡಿಸಿರುವುದಾಗಿದೆ.

Tags

Related Articles

Close