X

ಹೊಸ ದಾಖಲೆ ಬರೆದ ಬಿಎಸ್ ಯಡಿಯೂರಪ್ಪ!! ಮೊಟ್ಟಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಬಿಜೆಪಿ ನಾಯಕನ ರಾಜಕೀಯ ಸಾಧನೆ!!

ರೈತ ನಾಯಕನೆಂದೇ ಪ್ರಸಿದ್ಧಿ ಹೊಂದಿದ ಬಿ.ಎಸ್ ಯಡಿಯೂರಪ್ಪನವರು ಇಡೀ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ!!   ಬಿಎಸ್ ಯಡಿಯೂರಪ್ಪನವರು ಇದೀಗ ಅತೀ ಹೆಚ್ಚು ಬಾರಿ ವಿಪಕ್ಷ ನಾಯಕನಾಗಿ ಸೇವೆ ಸಲ್ಲಿಸಿ ದಾಖಲೆ ಬರೆದಿದ್ದಾರೆ!!

ಬಿ.ಎಸ್.ಯಡಿಯೂರಪ್ಪನವರು ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು. 1970ರಲ್ಲಿ ಆರ್‍ಎಸ್‍ಎಸ್‍ನ ಶಿಕಾರಿಪುರ ಘಟಕದ ಕಾರ್ಯವಾಹರಾಗಿ ನೇಮಕಗೊಳ್ಳುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ್ದರು!! ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕರಾಗಿಯೂ ನೇಮಕಗೊಂಡ ನಂತರ 1972ರಲ್ಲಿ ಶಿಕಾರಿಪುರ ನಗರ ಪಾಲಿಕೆಗೆ ಚುನಾಯಿತರಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿತರಾದ ಯಡಿಯೂರಪ್ಪನವರು ಆ ಸಮಯದಲ್ಲಿ ಬಳ್ಳಾರಿ ಮತ್ತು ಶಿವಮೊಗ್ಗ ಜೈಲಿನಲ್ಲಿದ್ದರು!!

1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಯಡಿಯೂರಪ್ಪನವರು 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು. ನಂತರ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ ಒಟ್ಟು ಆರು ಬಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಏಳು, ಎಂಟು, ಒಂಬತ್ತು, ಹತ್ತು, ಹನ್ನೆರಡು ಮತ್ತು ಹದಿಮೂರನೇ ವಿಧಾನಸಭೆಯ ಸದಸ್ಯರಾದರು. 1994ರ ವಿಧಾನಸಭೆ ಚುನಾವಣೆ ನಂತರ ವಿಧಾನಸಭೆಯ ಪ್ರತಿಪಕ್ಷ ನಾಯಕರಾದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಇವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಪುನಃ ವಿಧಾನಸಭೆಗೆ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾಗಿದ್ದರು…

2008ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರನ್ನು ಆಗ ಯಡಿಯೂರಪ್ಪನವರು 45,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಆಗ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ದೊರೆತು, ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರಕಾರ ಕರ್ನಾಟಕದಲ್ಲಿ ರಚನೆಗೊಂಡಿತ್ತು!! ಮೇ 30, 2008ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ್ದರು!! 2011ರ ಏಪ್ರಿಲ್‍ನಲ್ಲಿ ಕರ್ನಾಟಕ ಜನತಾ ಪಕ್ಷ ಎಂಬ ನೂತನ ಪಕ್ಷವನ್ನು ನೋಂದಾಯಿಸಿದರು. 2012ರಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು. 2013ರ ಮೇನಲ್ಲಿ ಕರ್ನಾಟಕ ಜನತಾ ಪಕ್ಷದಿಂದ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು!!

ಜನವರಿ 2, 2014ರಂದು ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸಿದರು. ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 3,63,305 ಅಂತರದಿಂದ ಜಯಗಳಿಸಿದ್ದರು!!  ಯಡಿಯೂರಪ್ಪನವರು ನವೆಂಬರ್ 12, 2007 ರಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದರು. ಈ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲಿ, ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯೆನಿಸಿದರು…

ಅದಲ್ಲದೆ ನಂತರ ರಚನೆಗೊಂಡ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದರು!! ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು. ಒಪ್ಪಂದದಂತೆ 2007ರ ಅಕ್ಟೋಬರ್ನಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಾದಾಗ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ನಿರಾಕರಿಸಿ ಅಲ್ಲಿ ಕುಮಾರ ಸ್ವಾಮಿ ತಮ್ಮ ನರಿ ಬುದ್ಧಿಯನ್ನು ತೋರಿಸಿ ಬಿಟ್ಟಿದ್ದರು!! ಜೆಡಿಎಸ್ ನಡೆ ವಿರೋಧಿಸಿ ಯಡಿಯೂರಪ್ಪ ಮತ್ತು ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ಕೂಡಾ ನೀಡಿದ್ದರು!!

ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಅಕ್ಟೋಬರ್ 5ರಂದು ಬಿಜೆಪಿ ಹಿಂಪಡೆಯಿತು. ನಂತರ ರಾಷ್ಟ್ರಪತಿ ಆಡಳಿತ ಆರಂಭವಾಗಿತ್ತು!!. ನವೆಂಬರ್ 7ರಂದು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಮತ ಶಮನಗೊಂಡು ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡಿತ್ತು!! ನವೆಂಬರ್ 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸುವ ಮೂಲಕ ರೈತರಿಗಲ್ಲದೆ ಎಲ್ಲ ಕ್ಷೇತದಲ್ಲೂ ಅಭೂತಪೂರ್ವ ಸಾಧನೆಗಳನ್ನು ಮಾಡುವ ಮೂಲಕ ಎಲ್ಲರ ಅಚ್ಚು ಮೆಚ್ಚಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು!!

ರೈತರ ಸಾಲ ಮನ್ನಾ, ಸಾರಾಯಿ ನಿಷೇಧ. ಲಾಟರಿ ನಿಷೇಧ, ರೈತರಿಗೆ ಶೇಕಡ.4 ಬಡ್ಡಿದರದಲ್ಲಿ ಸಾಲ, ಬಿಪಿಎಲ್ ಕುಟುಂಬಗಳ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಬೈಸಿಕಲ್ ವಿತರಣೆ ಯೋಜನೆ, ನಿರುದ್ಯೋಗ ನಿವಾರಣೆಗೆ ಸುವರ್ಣ ಕಾಯಕ ಉದ್ಯೋಗ ತರಬೇತಿಯೋಜನೆ, ಹಿರಿಯ ನಾಗರಿಕರ ಸಾಮಾಜಿಕ ಭದ್ರೆತೆಗೆ ಸಂಧ್ಯಾ ಸುರಕ್ಷಾ ಯೋಜನೆ, ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ ಇವರಿಗಿದೆ!!

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಅತೀ ಹೆಚ್ಚು ಬಾರಿ ವಿಧಾನ ಸಭೆ ವಿರೋಧ ಪಕ್ಷದ ನಾಯಕನಾಗಿ ದಾಖಲೆ ಮಾಡಿದ್ದಾರೆ!! 1994 ಡಿಸೆಂಬರ್ 27 ರಿಂದ 1996  ಡಿಸೆಂಬರ್ 18ರವರೆಗೆ ಮೊದಲ ಬಾರಿಗೆ ಇವರು ವಿಪಕ್ಷ ನಾಯಕರಾಗಿದ್ದರು!! ಈ ವೇಳೆ ಜೆಡಿಎಸ್ ಎಚ್.ಡಿ ದೇವೇಗೌಡ ಸಿಎಂ ಆಗಿದ್ದರು!! 2018 ಮೇ 25 ರಿಂದ ಅವರು ಮೂರನೇ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸಿದ್ದಾರೆ!! ಈ ಮೂಲಕ ಅತೀಹೆಚ್ಚು ಬಾರಿಗೆ ವಿಪಕ್ಷ ನಾಯಕನಾಗಿ ದಾಖಲೆ ನಿರ್ಮಿಸಿದ್ದಾರೆ!! ಅಧಿವೇಶನದ ದಿನವಾದ ನಿನ್ನೆ ವಿಪಕ್ಷ ನಾಯಕನ ಕೊಠಡಿಯನ್ನು ಅಲಂಕರಿಸಿ ಪೂಜಾ ಕೈಂಕರ್ಯವನ್ನು ನೆರವೇರಿಸಿದ್ದರು!! ಆದಷ್ಟು ಬೇಗ ಬಿಎಸ್ ಯಡಿಯೂರಪ್ಪನವರು ಸಿಎಂ ಸ್ಥಾನ ಅಧಿಕಾರ ಸ್ವೀಕರಿಸಲಿ ಮುಂದೆ ರೈತರ ಕಷ್ಟ ನೀಗಿಸಲಿ ಎಂಬುವುದೇ ಸಮಸ್ತ ಕರ್ನಾಟಕದ ಆಶಯ…

ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ 104 ಸ್ಥಾನಗಳನ್ನು ಪಡೆದು ಬಿಜೆಪಿಯೇ ಮತಗಳಿಕೆಯಲ್ಲಿ ಮೇಲ್ಗೈ ಸಾಧಿಸಿತ್ತು!! ಆದರೆ ಮ್ಯಾಜಿಕ್ ನಂಬರ್ ಬರದೇ ಇರುವ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡುತ್ತಾ ಹಲವಾರು ಕಿತ್ತಾಟದಿಂದ ಕೂಡಾ ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸಿದರು!! ಆದರೆ ಈ ಸರಕಾರ ಎಷ್ಟು ದಿನಗಳ ಮಟ್ಟಿಗೆ ಉಳಿಯುತ್ತದೆ ಎಂದು ದೇವರೇ ಬಲ್ಲ… ಈಗಾಗಲೇ ಮೈತ್ರಿ ಸರಕಾರದ ಭಿನ್ನಾಭಿಪ್ರಾಯಗಳನ್ನು ನೋಡಿದರೆ ಮುಂದಿನ ಆರು ತಿಂಗಳೊಳಗೆ ಬಿಎಸ್ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸುವುದು ಖಂಡಿತ!!

source:
http://news13.in/

Wikipedia

  • ಪವಿತ್ರ

 

Editor Postcard Kannada:
Related Post