ಪ್ರಚಲಿತ

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ? : ಸಮೀಕ್ಷಾ ವರದಿಯಲ್ಲೇನಿದೆ?

ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ವಿಜಯಶಾಲಿಯಾಗಲಿದೆ ಎಂದು ಸಮೀಕ್ಷಾ ವರದಿಯೊಂದು ಬಹಿರಂಗಗೊಳಿಸಿದೆ. 295-335 ಸ್ಥಾನಗಳನ್ನು ಗಳಿಸುವ ಮೂಲಕ ಜಯಭೇರಿ ಭಾರಿಸಲಿದೆ ಎಂದು ಅವರು ಹೇಳಿದ್ದಾರೆ.

ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ 165 – 205 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆಯೇ ಹೊರತು, ಅಧಿಕಾರಕ್ಕೆ ಏರುವ ಸಾಧ್ಯತೆ ಇಲ್ಲ ಎಂಬುದಾಗಿ ಹೇಳಿದೆ. ಹಾಗೆಯೇ ಎನ್‌ಡಿಎ ಮೈತ್ರಿಕೂಟ 42% ಗಳಷ್ಟು ಮತಗಳನ್ನು ಪಡೆಯುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಿರುವುದಾಗಿಯೂ ಈ ಸಮೀಕ್ಷೆ ತಿಳಿಸಿದೆ.

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 353 ಸ್ಥಾನಗಳನ್ನು ಗೆದ್ದು, 45% ಮತಗಳನ್ನು ಬಾಚಿಕೊಂಡು ಅಧಿಕಾರದ ಗದ್ದುಗೆ ಏರಿತ್ತು. ಈ ಬಾರಿ ಎನ್‌ಡಿಎ ವಿರೋಧ ಪಕ್ಷಗಳಾದ ಕಾಂಗ್ರೆಸ್ ಸೇರಿದಂತೆ ಇನ್ನಿತರ ಪಕ್ಷಗಳು ರಚನೆ ಮಾಡಿರುವ ಇಂಡಿಯಾ ಒಕ್ಕೂಟ 38% ಮತಗಳನ್ನು ಪಡೆದು ಪರಾಭವಗೊಳ್ಳಲಿದೆ ಎಂದು ಈ ಸಮೀಕ್ಷಾ ವರದಿ ಹೇಳಿದೆ. ಹಾಗೆಯೇ ಇತರ ಪಕ್ಷಗಳು 20% ಗಳಷ್ಟು ಮತಗಳನ್ನು ಪಜೆಯಲಿದ್ದಾರೆ ಎನ್ನುವುದಾಗಿಯೂ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಕರ್ನಾಟಕಕ್ಕೆ ಸಂಬಂಧಿಸಿದ ಹಾಗೆ ಹೇಳುವುದಾದರೆ ರಾಜ್ಯದಲ್ಲಿ ಬಿಜೆಪಿ ಮೈತ್ರಿಕೂಟದ ಎನ್‌ಡಿಎ ಒಕ್ಕೂಟ ಭರ್ಜರಿ 22-24 ಸ್ಥಾನ ಪಡೆದರೆ, ಕಾಂಗ್ರೆಸ್ 4-6 ಸ್ಥಾನಗಳಿಗೆ ತೃಪ್ತಿ ಪಡಬೇಕಾದೀತು ಎಂದು ಸಮೀಕ್ಷೆ ತಿಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಸಹ ಎನ್ ಡಿ ಎ ಒಕ್ಕೂಟಕ್ಕೆ ಲಾಭವಾಗಿ ಪರಿಣಮಿಸಲಿದೆ ಎಂದು ತಿಳಿಸಿದೆ. 

ಸದ್ಯ ಕರ್ನಾಟಕದಿಂದ ಲೋಕಸಭೆಯಲ್ಲಿ 25 ಸಂ ಸದರಿ ಇದ್ದು, ಓರ್ವ ಪಕ್ಷೇತರ ಸಂಸದ ಸಹ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಾಗೆಯೇ ಜೆಡಿಎಸ್ ಸಂಸದರೂ ಒಬ್ಬರಿದ್ದಾರೆ. 

ಜೊತೆಗೆ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಳೆದ ಒಂಬತ್ತು ವರ್ಷಗಳಲ್ಲಿ ದೇಶವನ್ನು ಸಕಾರಾತ್ಮಕವಾಗಿ ಬೆಳವಣಿಗೆ ಹೊಂದುವಲ್ಲಿ ಹಲವಾರು ಮಹತ್ವದ ಕಾರ್ಯಗಳನ್ನು ಮಾಡಿದ್ದು, ಜನರಿಗೆ ಅನುಕೂಲವಾಗುವ ಹಾಗೆ ಹಲವಾರು ಯೋಜನೆಗಳನ್ನು ಸಹ ಜಾರಿಗೆ ತಂದಿದೆ. ಇವೆಲ್ಲವೂ ಎನ್‌ಡಿಎ ಮಿತ್ರಪಕ್ಷಗಳಿಗೆ ವರವಾಗಿ ಪರಿಣಮಿಸಲಿದೆ ಎನ್ನುವುದು ಸತ್ಯ‌.

Tags

Related Articles

Close