ಪ್ರಚಲಿತ

ಪ್ರಧಾನಿ ಮೋದಿ ವಿರುದ್ಧದ ಒಬಾಮಾ ಟೀಕೆಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ

ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ, ಅಲ್ಲಿಂದ ಈಜಿಪ್ಟ್‌ಗೆ ತೆರಳಿ ಸದ್ಯ ಭಾರತಕ್ಕೆ ವಾಪಸ್ಸಾಗಿದ್ದಾರೆ.

ಪ್ರಧಾನಿ ಮೋದಿ ಅವರು ಅಮೆರಿಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತದ ಮುಸ್ಲಿಮರಿಗೆ ‌ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ನೀಡಿದ ಉತ್ತರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಅವರು ಸಮರ್ಥಿಸಿಕೊಂಡಿದ್ದಾರೆ. ಮೋದಿ ಅವರ ಹೇಳಿಕೆಗಳನ್ನು ವಿರೋಧಿಸಿ ವಿ ಪಕ್ಷಗಳು ಮತ್ತು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ನೀಡಿರುವ ಟೀಕೆಗಳಿಗೂ ತಿರುಗೇಟು ನೀಡಿದ್ದಾರೆ.

ಒಬಮಾ ಆಡಳಿತದಲ್ಲಿರುವಾಗ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ್ದನ್ನು ಮರೆಯಬಾರದು. ಅಂತಹ ಒಬಾಮಾ ಅವರು ಭಾರತದ ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗಳನ್ನು ಸಚಿವ ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಅವರಿಗೆ ಒಂಬತ್ತು ವರ್ಷದಲ್ಲಿ ಹದಿಮೂರು ಅಂತರಾಷ್ಟ್ರೀಯ ಪ್ರಶಸ್ತಿಗಳು ದೊರೆತಿದ್ದು, ಆ ಪ್ರಶಸ್ತಿಗಳಲ್ಲಿ ಆರು ಪ್ರಶಸ್ತಿಗಳನ್ನು ಮುಸ್ಲಿಂ ಬಾಹುಳ್ಯದ ರಾಷ್ಟ್ರಗಳೇ ನೀಡಿ ಗೌರವಿಸಿದ್ದಾಗಿಯೂ ಅವರು ಒಬಾಮಾ ಮತ್ತು ಭಾರತೀಯ ಪ್ರತಿಪಕ್ಷಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ. 

ಅಮೆರಿಕದ ಮಾಜಿ ಅಧ್ಯಕ್ಷರು ಭಾರತೀಯ ಮುಸಲ್ಮಾನರ ಬಗ್ಗೆ ಮಾತನಾಡುತ್ತಾರೆ. ಭಾರತ ಅಮೆರಿಕದ ಜೊತೆಗೆ ಉತ್ತಮ ಬಾಂಧವ್ಯ ಬಯಸುತ್ತದೆ. ಈ ಹಿನ್ನೆಲೆಯಲ್ಲಿ ಒಬಾಮಾ ಅವರಿಗೆ ಸಂಯಮದಿಂದ ಉತ್ತರಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಸಬ್ಕಾ ಸಾತ್, ಸಬ್ಕಾ ವಿಕಾಸ್ ಎಂಬಂತೆ ಭಾರತೀಯ ಮುಸಲ್ಮಾನರನ್ನು ಒಳಗೊಂಡಂತೆ ಕೆಲಸ ಮಾಡುತ್ತಿದ್ದಾರೆ. ಆದರೂ ಅಮೆರಿಕದ ಮಾಜಿ ಅಧ್ಯಕ್ಷರು ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಟೀಕೆಗಳನ್ನು ಕೇಳುತ್ತೇವೆ. ಹೀಗೆ ಟೀಕೆ ಮಾಡುವ ಒಬಾಮಾ ಅವರ ಆಡಳಿತ ಕಾಲದಲ್ಲಿಯೇ ಸುಮಾರು ಆರು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಸಾವಿರಾರು ಬಾರಿ ಬಾಂಬ್ ದಾಳಿಯನ್ನು ನಡೆಸಲಾಗಿದೆ. ಹೀಗಿರುವಾಗ ಪ್ರಧಾನಿ ಮೋದಿ ವಿರುದ್ಧ ಒಬಾಮಾ ಮಾಡಿರುವ ಟೀಕೆಗಳನ್ನು ಜನರು ಹೇಗೆ ನಂಬುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ಅಮೆರಿಕಾದಲ್ಲಿ ‘ಭಾರತ ಸರ್ಕಾರ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ತತ್ವದ ಮೇಲೆ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಯಾವುದೇ ಸಮುದಾಯದ ವಿರುದ್ಧ ತಾರತಮ್ಯ ಧೋರಣೆ ಅನುಸರಿಸುವುದಿಲ್ಲ ಎಂಬುದನ್ನು ಹೇಳಿದ್ದಾರೆ. ಆದರೂ ಒಬಾಮಾ ಮತ್ತು ಭಾರತದ ಕೆಲ ಮೋದಿ ವಿರೋಧಿಗಳು ಅವರನ್ನು ಟೀಕಿಸುವ ಮೂಲಕ ತಮ್ಮ ನಾಲಿಗೆ ಚಪಲ ತೀರಿಸಿಕೊಂಡಿದ್ದರು. 

ಒಬಾಮಾ ಅವರ ಆಡಳಿತ ಕಾಲದಲ್ಲಿಯೇ ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆದಿದ್ದರೂ, ಈಗ ಎಲ್ಲ ಧರ್ಮವನ್ನೂ ಸಮಾನವಾಗಿ ಕಾಣುತ್ತಿರುವ ಪ್ರಧಾನಿ ಮೋದಿ ಅವರ ಬಗ್ಗೆ ದ್ವೇಷಪೂರಿತ ಹೇಳಿಕೆಗಳನ್ನು ನೀಡುತ್ತಿರುವುದು ಹಾಸ್ಯಾಸ್ಪದ. ಅಮೆರಿಕದ ಬಹುಪಾಲು ಜನರು ಮೋದಿ ನಾಯಕತ್ವಕ್ಕೆ ಉಘೇ ಎನ್ನುತ್ತಿರುವಾಗ ಒಬಾಮಾ ಮಾತ್ರ ಮೋದಿ ವಿರೋಧಿ ಹೇಳಿಕೆಗಳ ಮೂಲಕ ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳುತ್ತಿರುವುದು ಹಾಸ್ಯಾಸ್ಪದವೇ ಸರಿ.

Tags

Related Articles

Close