ಪ್ರಚಲಿತ

ಬ್ರೇಕಿಂಗ್! ಬಿಎಸ್‌ವೈ ಮತ್ತೆ ಮುಖ್ಯಮಂತ್ರಿ.! ಮೈತ್ರಿ ಸರಕಾರದ ಕೋಟೆ ಛಿದ್ರಗೊಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್.!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತವಿದ್ದ ಕಾಂಗ್ರೆಸ್ ಪಕ್ಷವನ್ನು ಭಾರೀ ಹೀನಾಯವಾಗಿ ಸೋಲಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಭಾರತೀಯ ಜನತಾ ಪಕ್ಷ ರಾಜ್ಯದ ಗದ್ದುಗೆ ಏರಲು ಸಜ್ಜಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಕೂಡ ಸ್ವೀಕರಿಸಿದ್ದರು. ಇಡೀ ರಾಜ್ಯವೇ ಅಚ್ಚರಿ ಪಡುವಂತಹ ರೀತಿಯಲ್ಲಿ ವಿಜಯ ಪತಾಕೆ ಹಾರಿಸಿದ ಭಾರತೀಯ ಜನತಾ ಪಕ್ಷ ಬಹುಮತ ಸಾಧಿಸಲು ಸಾಧ್ಯವಾಗದೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಯಡಿಯೂರಪ್ಪನವರು ಅಧಿಕಾರದಿಂದ ಕೆಳಗಿಳಿಯಬೇಕಾದ ಪರಿಸ್ಥಿತಿ ಎದುರಾಗಿತ್ತು.

ರಾಜ್ಯದ ಜನ ತಿರಸ್ಕರಿಸಿ ಎರಡು ಪಕ್ಷಗಳು ಚುನಾವಣಾ ನಂತರದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ವಹಿಸಿಕೊಂಡವು. ಬದ್ಧ ವೈರಿಗಳಂತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಇದೀಗ ಆಡಳಿತ ನಡೆಸುತ್ತಿದ್ದರೂ ಕೂಡ ಸರಕಾರ ಯಾವ ಕ್ಷಣದಲ್ಲೂ ಬೀಳುವ ಸಾಧ್ಯತೆ ಇದೆ. ಯಾಕೆಂದರೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ಮುಖಂಡರಲ್ಲಿ ಅಸಮಧಾನ ಎದ್ದು ಕಾಣುತ್ತಿರುವುದೇ ಮುಖ್ಯ ಕಾರಣ. ಇತ್ತ ಬಿಜೆಪಿ ನಾಯಕರೂ ಕೂಡ ಮತ್ತೆ ಅಧಿಕಾರಕ್ಕೆ ಏರಲು ಪ್ರಯತ್ನಿಸುತ್ತಿದ್ದು ಇದೀಗ ಬಿಜೆಪಿ ಶಾಸಕರ ವಿಶ್ವಾಸಭರಿತ ಹೇಳಿಕೆ ಇಡೀ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆಯುವಂತೆ ಮಾಡಿದೆ ಮಾತ್ರವಲ್ಲದೆ ಮೈತ್ರಿ ಸರಕಾರದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ.!

 

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ..!

ಬಹುಮತ ಸಾಧಿಸಲು ಸಾಧ್ಯವಾಗದ ಭಾರತೀಯ ಜನತಾ ಪಕ್ಷ ಅಧಿಕಾರ ವಹಿಸಿಕೊಂಡ ಕೂಡಲೇ ಅಧಿಕಾರ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಮತ್ತೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದು, ಬಿಜೆಪಿ ಚಾಣಕ್ಯ ಅಮಿತ್ ಷಾ ಅಮಿತ್ ಷಾ ಅವರ ಸೂಚನೆಯಂತೆ ರಾಜ್ಯ ನಾಯಕರು ನಡೆದುಕೊಳ್ಳುತ್ತಿದ್ದು, ಚಾಣಕ್ಯನ ಮಾಸ್ಟರ್ ಪ್ಲಾನ್ ಯಾವ ರೀತಿ ಸಿದ್ಧವಾಗುತ್ತಿದೆ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಆದರೆ ಇದೀಗ ಕಳೆದ ಬಾರಿ ಆಪರೇಷನ್ ಕಮಲದ ಜವಾಬ್ದಾರಿ ವಹಿಸಿಕೊಂಡಿದ್ದ ಶಾಸಕ ಉಮೇಶ್ ಕತ್ತಿ ಅವರು ರಾಜ್ಯದಲ್ಲಿ ಇನ್ನು ಆರು ತಿಂಗಳಲ್ಲಿ ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲಿದೆ, ಇದರಲ್ಲಿ ಯಾವುದೇ ಸಂಶಯ ಬೇಡ ಎಂದಿದ್ದಾರೆ. ರಾಜ್ಯ ಮೈತ್ರಿ ಸರಕಾರದಲ್ಲಿ ಆಗುತ್ತಿರುವ ಬೆಳವಣಿಗೆಯೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ವಿಶ್ವಾಸಭರಿತ ಹೇಳಿಕೆ ನೀಡಿದ್ದಾರೆ.!

Related image

ಮತ್ತೆ ಮುಖ್ಯಮಂತ್ರಿಯಾಗಿ ಬಿಎಸ್‌ವೈ ಅಧಿಕಾರಕ್ಕೆ..!

ಬಹುಮತ ಸಾಬೀತು ಪಡಿಸಲಾಗದೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಕಳೆದುಕೊಂಡ ಬಿಎಸ್ ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿರುವ ಶಾಸಕ ಉಮೇಶ್ ಕತ್ತಿ, ಮೈತ್ರಿ ಸರಕಾರವನ್ನು ಉರುಳಿಸುವ ಅವಶ್ಯಕತೆ ಇಲ್ಲ.

Image result for yeddyurappa

ಸದ್ಯ ನಡೆಯುತ್ತಿರುವ ಬೆಳವಣಿಗೆಯೇ ಮೈತ್ರಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಯುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ಜನಾಭಿಪ್ರಾಯವನ್ನು ಧಿಕ್ಕರಿಸಿ ಅಧಿಕಾರ ಪಡೆದುಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ನ್ನು ಮತ್ತೆ ಕೆಳಗಿಳಿಸಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ..!

 

–ಅರ್ಜುನ್

Tags

Related Articles

Close