X

ಬಿಗ್ ಬ್ರೇಕಿಂಗ್! ಕಾಂಗ್ರೆಸ್ ನ ಮತ್ತೊಂದು ವಿಕೆಟ್‌ ಪತನ..! ಎಐಸಿಸಿಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ..!

ಕರ್ನಾಟಕ ವಿಧಾನಸಭಾ ಚುನಾವಣಾ ರಂಗು ಮುಗಿದು ಯಾವಾಗ ಮೈತ್ರಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಿತೋ ಅಂದಿನಿಂದ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗಿತ್ತು. ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ಜನ ಬಯಸಿದ್ದರೂ ಕಾಂಗ್ರೆಸ್ ಹಾಗೂ ಜನತಾ ದಳದ ಮೈತ್ರಿಯಿಂದಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ನಂತರ ನಡೆದದ್ದೇ ಮಹಾಯುದ್ಧ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸಿಗರು ಅಬ್ಬರಿಸಿ ಬಂಡಾಯದ ಬಾವುಟವನ್ನು ಹಾರಿಸಿಯೇ ಬಿಟ್ಟಿದ್ದರು.

ಮೊದ ಮೊದಲು ಎಲ್ಲವನ್ನೂ ಕಡೆಗಣಿಸಿದ ಕಾಂಗ್ರೆಸ್ ಹೈಕಮಾಂಡ್ ನಂತರವೂ ಮೆತ್ತಗಾಗಿತ್ತು. ಕೆಲವೇ ದಿನಗಳಲ್ಲಿ ಓರ್ವ ಸಚಿವ ಸ್ಥಾನ ಆಕಾಂಕ್ಷಿ ಕಾಂಗ್ರೆಸ್ ಶಾಸಕ ಪಕ್ಷದ ಜವಾಬ್ಧಾರಿ ಗೆ ಗುಡ್ ಬಾಯ್ ಹೇಳಿದ್ದರು. ಇದು ಕಾಂಗ್ರೆಸ್ ಜನತಾ ದಳ ಮೈತ್ರಿ ಸರ್ಕಾರವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದೀಗ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಸಚಿವ ಸ್ಥಾನದ ಆಕಾಂಕ್ಷಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸಿದ ಸ್ವತಃ ಸತೀಶ್ ಜಾರಕೀಹೊಳಿ ತಾನು ನಿನ್ನೆಯೇ ರಾಜೀನಾಮೆ ನೀಡಿದ್ದೆ ಎಂದು ಹೇಳಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು. ಆದರೆ ಇವರ ಅಸಮಧಾನ ವನ್ನು ಮೈತ್ರಿ ಸರಕಾರ ಆಗಲಿ ಅಥವಾ ಕಾಂಗ್ರೆಸ್ ಹೈದರಾಬಾದ್ ಆಗಲಿ ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇದರಿಂದ ಬೇಸತ್ತು ತಮ್ಮ ಹುದ್ದೆಗೆ ಸತೀಶ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

  • ಏಕಲವ್ಯ
Editor Postcard Kannada:
Related Post