ಪ್ರಚಲಿತ

‘ಒಂದು ರಾಷ್ಟ್ರ, ಒಂದು ಚುನಾವಣೆ’ : ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ ಸಂಬಂಧಿಸಿದ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ದೆ ಸಂಬಂಧಿಸಿದ ಹಾಗೆ ಅದರ ಸಾಗರ ಹಾಧಕಗಳ ಕುರಿತು ಅಧ್ಯಯನ ನಡೆಸಿ, ವರದಿ ನೀಡುವುದಕ್ಕಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನಾಯಕತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯು ಇದೀಗ ತನಗೆ ನೀಡಿದ ಜವಾಬ್ದಾರಿ ನಿರ್ವಹಿಸಿ, ಅದರ ವರದಿಯನ್ನು ರಾಷ್ಟ್ರಪತಿ ಮುರ್ಮು ಅವರಿಗೆ ಸಲ್ಲಿಸಿರುವುದಾಗಿದೆ.

ದೇಶದೆಲ್ಲೆಡೆ ಒಂದೇ ಕಾಲದಲ್ಲಿ ಮತದಾನವನ್ನು ನಡೆಸುವುದಕ್ಕೆ ಸಂಬಂಧಿಸಿದ ಹಾಗೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಇದೆ‌. ಲೋಕಸಭೆ ಮತ್ತು ದೇಶದ ಎಲ್ಲಾ ರಾಜ್ಯಗಳ ವಿಧಾನ ಸಭೆಗೆ ಏಕ ಕಾಲದಲ್ಲಿ ಚುನಾವಣೆ ನಡೆಸುವುದನ್ನು ಈ‌ ಪರಿಕಲ್ಪನೆ ಹೇಳುತ್ತದೆ. ಇದನ್ನು ದೇಶದಲ್ಲಿ ಕಾರ್ಯಗತ ಮಾಡಿದಲ್ಲಿ, ಅದರಿಂದ ಸಂಭವಿಸಬಹುದಾದ ಪರಿಣಾಮಗಳಿಗೆ ಸಂಬಂಧಿಸಿದ ಹಾಗೆ ಈ‌ ಸಮಿತಿ ವರದಿ ತಯಾರಿಸಿತ್ತು. ಆ ವರದಿಯನ್ನು ರಾಷ್ಟ್ರಪತಿ ಮುರ್ಮು ಅವರಿಗೆ ಒಪ್ಪಿಸಿರುವುದಾಗಿದೆ.

ನಮ್ಮ ದೇಶದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ವಿಧಾನಸಭಾ ಚುನಾವಣೆಗಳು ಪ್ರಸ್ತುತ ಆ ಸರ್ಕಾರದ ಅಧಿಕಾರಾವಧಿ ಕೊನೆಯಾದಾಗ ನಡೆಯುತ್ತವೆ. ಇಲ್ಲವೇ ಯಾವುದಾದರೂ ಕಾರಣಗಳಿಂದ ಅದು‌ ವಿಸರ್ಜನೆಯಾದಲ್ಲಿ ಮಾತ್ರ ನಡೆಯುತ್ತದೆ.

ಭಾರತದ ಪ್ರೊ ಜಾನಿ ನರೇಂದ್ರ ಮೋದಿ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಲೇ ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಈ‌ ಪರಿಕಲ್ಪನೆಯ ಬಗ್ಗೆ ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್. ಕೆ. ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್‌ ಸಾಳ್ವೆ ಅವರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದ್ದು, ಈ‌ ಸಮಿತಿ ಈ ಪರಿಕಲ್ಪನೆಯ ಸಾಧಕ ಬಾಧಕಗಳ ಕುರಿತ ವರದಿ ನೀಡಿದೆ.

Tags

Related Articles

Close