ಪ್ರಚಲಿತ

ಕಾಂಗ್ರೆಸ್‌ಗೆ ಜನರು ವಿದಾಯ ಹೇಳುವ ಸಮಯ ಬಂದಿದೆ: ಪಿಎಂ ಮೋದಿ

ಜನರು ಕಾಂಗ್ರೆಸ್ ಪಕ್ಷದ ವಿದಾಯದ ದಿನವನ್ನು ಎದುರು ನೀಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಅವರು ಚತ್ತೀಸ್‍ಗಢದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯದಲ್ಲಿ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅದರ ಆಡಳಿತವನ್ನು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಲೂಟಿಕೋರ ಕಾಂಗ್ರೆಸ್‌ ಅನ್ನು ಮನೆಗೆ ಕಳುಹಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಜನರನ್ನು ಲೂಟಿ ಮಾಡುವ ಭ್ರಷ್ಟ‌ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಾ ಬಂದಿದೆ. ಅಂತಹ ಲೂಟಿಕೋರರಿಗೆ ವಿದಾಯ ಹೇಳುವ ಸಮಯ ಬಂದಿದೆ. ಇಡೀ ದೇಶವೇ ನೋಡುತ್ತಿರುವ ಹಾಗೆ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆಯನ್ನು ಹೊತ್ತವರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ. ಅದನ್ನು ಮೋದಿ ಅಲ್ಲ, ರಾಜ್ಯದ ಜನರು ಹೊತ್ತಿದ್ದಾರೆ. ಇಲ್ಲಿನ ಆದಿವಾಸಿ ಜನರು, ಬಡವರು, ಹಿಂದುಳಿದ ವರ್ಗದ ಜನರು ಕಾಂಗ್ರೆಸ್ ಗೆ ವಿದಾಯ ಹೇಳಲು ಕಾತರದಿಂದ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮಹಿಳೆಯರು ಇನ್ನು ಮುಂದೆ ಕಾಂಗ್ರೆಸ್ ಪಕ್ಷ ಬೇಡ ಎಂದು ನಿರ್ಧರಿಸಿದ್ದಾರೆ. ಸ್ವತಃ ಕಾಂಗ್ರೆಸ್ ಪಕ್ಷಕ್ಕೆಯೇ ಜನರು ಕಾಂಗ್ರೆಸ್‌ಗೆ ವಿದಾಯ ಹೇಳುವ ಸಮಯ ಬಂದಿದೆ ಎಂಬ ಅರಿವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷವು ತಾನು ನೀಡಿದ ಎಲ್ಲಾ ಭರವಸೆಗಳನ್ನು ನಿಗದಿತ ಕಾಲಮಿತಿಯಲ್ಲಿ ಈಡೇರಿಸುವ ಮೂಲಕ ಜನರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತದೆ. ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರ ಇದ್ದು, ರಾಜ್ಯದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡುವ ಮೂಲಕ ಡಬ್ಬಲ್ ಎಂಜಿನ್ ಸರ್ಕಾರ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಅವರು ಮನವಿ ಸಲ್ಲಿಸಿದ್ದಾರೆ.

Tags

Related Articles

Close