ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣವನ್ನು ಬೆನ್ನತ್ತಿದ ಪೊಲೀಸರಿಗೆ ಒಂದೊಂದೇ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ತನ್ವೀರ್ ಸೇಠ್ ಕೊಲೆ ಯತ್ನದ ಹಿಂದೆ ಪಿಎಫ್ಐ ಸಂಘಟನೆಯ ಕೈವಾಡ ಇದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿಕೆ ನೀಡಿದ್ದರು. ಇದೀಗ ಅವರ ಹೇಳಿಕೆ ನಿಜವಾಗಿದ್ದು ಪೊಲೀಸ್ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.
ಮೈಸೂರಿನಲ್ಲಿ 30 ತಂಡಗಳು.!
ಈ ಹಿಂದೆ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ನಡೆದ 26 ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಪಿಎಫ್ಐ ಕೈವಾಡ ಇತ್ತು ಎಂದು ಆರೋಪಿಸಲಾಗಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಈ ಬಗ್ಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಓಟ್ ಬ್ಯಾಂಕ್ ರಾಜಕಾರಣ ಮೆರೆದಿತ್ತು. ಕಠಿಣ ಕ್ರಮ ಕೈಗೊಳ್ಳುವ ಬದಲು ಪಿಎಫ್ಐ ಗೂಂಡಾಗಳ ಮೇಲಿದ್ದ ಪ್ರಕರಣಗಳನ್ನು ವಾಪಾಸು ಪಡೆದಿತ್ತು ಅಂದಿನ ಕಾಂಗ್ರೆಸ್ ಸರ್ಕಾರ.
ಇದೀಗ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನದ ಪ್ರಕರಣವನ್ನು ಹಿಂಬಾಲಿಸಿರುವ ಪೊಲೀಸರು ಪಿಎಫ್ಐ ಸಂಘಟನೆಯ ಕೃತ್ಯಗಳನ್ನು ಬಯಲಿಗೆಳೆದಿದ್ದಾರೆ. ಮೈಸೂರಿನಲ್ಲಿ ಹತ್ಯೆ ಮಾಡಲೆಂದೇ ಪಿಎಫ್ಐ ಸಂಘಟನೆಯ 30 ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಈ ತಂಡಗಳು ಎಲ್ಲಾ ಹಿಂದೂ ಧರ್ಮಗುರುಗಳ ಮೇಲೆ ಕಣ್ಣಿಟ್ಟಿವೆ. ಪ್ರಮುಖ ರಾಜಕಾರಣಿಗಳ ಚಲನವಲನಗಳ ಬಗ್ಗೆ ನಿಗಾ ಇಟ್ಟಿರುವ ಈ ಸಂಘಟನೆ ನಂತರ ಸಮಯ ಸಂದರ್ಭ ನೋಡಿ ಆ ನಾಯಕರನ್ನು ಹತ್ಯೆ ಅಥವಾ ದಾಳಿ ನಡೆಸುವುದು ಗುರಿಯಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಇಂತಹಾ ಸಂಘಟನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ನಂತರ ಬಂದ ಸಿದ್ದರಾಮಯ್ಯ ಸರ್ಕಾರ ಇಂತಹಾ ಸಂಘಟನೆಗಳ ಮೇಲಿನ ಕೇಸ್ ವಾಪಾಸು ಪಡೆದು ಮತ್ತಷ್ಟು ಉಗ್ರ ಕೃತ್ಯಗಳಿಗೆ ಬೆಂಬಲ ನೀಡಿದ್ದೇ ಇಂದು ಇಂತಹಾ ಪರಿಸ್ಥಿತಿಗೆ ಕಾರಣ ಎನ್ನುವುದು ವಾಸ್ತವ.
-ಸುನಿಲ್ ಪಣಪಿಲ